ಬೆಂಗಳೂರು: ಮೊಸ್ಟ್ ವಾಂಟೆಡ್ ರೌಡಿಶೀಟರ್ ಕುಣಿಗಲ್ ಗಿರಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕಳೆದ ಕೆಲವು ತಿಂಗಳಿಂದ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ತಂಗಿದ್ದ ಗಿರಿ, ಕೊನೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ರೌಡಿಶೀಟರ್ ಕುಣಿಗಲ್ ಗಿರಿ ವಾಸವಾಗಿರುವ ಖಚಿತ ಮಾಹಿತಿ ಮೇರೆಗೆ ಅವರ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಕುಣಿಗಲ್ ಗಿರಿ ಮತ್ತು ಆತನ ಸಹಚರ ಹರೀಶ್ ಇಬ್ಬರೂ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರು. ತಕ್ಷಣ ಪೊಲೀಸ್ ಸಿಬ್ಬಂದಿ ಇಬ್ಬರನ್ನೂ ವಶಕ್ಕೆ ಪಡೆದು ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಿದ್ದು, ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ.