• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿರೋಧಿಗಳ 5 ಸಾವಿರ ಕೋಟಿ ರೂ. ಆರೋಪ ಬರಿ ಸ್ಟಂಟ್; ಚರ್ಚೆಗೆ ನಾನು ಸಿದ್ಧ: ಲಕ್ಷ್ಮಿ ಹೆಬ್ಬಾಳ್ಕರ್

ಕವಿತಾ by ಕವಿತಾ
August 24, 2026 - 6:03 pm
in ಕರ್ನಾಟಕ
0 0
0
ಗುಟ್ಕಾ (5)

ಬೆಳಗಾವಿ ಆ. 24: “ನನ್ನ ವಿರುದ್ಧ 5 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಮಾಜಿ ಶಾಸಕ ಸಂಜಯ್ ಪಾಟೀಲ್ ಹಾಗೂ ಬಿಜೆಪಿ ನಾಯಕರಿಗೆ ಕೇವಲ ಸುಳ್ಳು ಆರೋಪ ಮಾಡುವ ಕಲೆ ಮಾತ್ರ ಕರಗತವಾಗಿದೆ. ನನ್ನ ವಿರುದ್ಧ ಆರೋಪ ಮಾಡಲು ಬೇರೆ ಯಾವುದೇ ವಿಷಯವಿಲ್ಲದ ಕಾರಣ ಇಂತಹ ಸ್ಟಂಟ್ ಮಾಡುತ್ತಿದ್ದಾರೆ. ಸಂಜಯ್ ಪಾಟೀಲ್ ಅವರಿಗೆ ಧೈರ್ಯವಿದ್ದರೆ 5 ಸಾವಿರ ಕೋಟಿ ರೂಪಾಯಿ ವಿಷಯದ ಕುರಿತು ಮುಖಾಮುಖಿ ಚರ್ಚೆಗೆ ಮಳೆಕರ್ಣಿಗೆ ಬರಲಿ,” ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇರ ಸವಾಲು ಹಾಕಿದ್ದಾರೆ.

ತಾಲೂಕಿನ ಮಣ್ಣೂರು ಗ್ರಾಮದಲ್ಲಿ ‘ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್’ (BDCC) ವತಿಯಿಂದ ಮಂಜೂರಾದ 50 ಲಕ್ಷ ರೂಪಾಯಿ ಬಡ್ಡಿರಹಿತ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಬಾರಾಮತಿ’ ಮಾದರಿಯಲ್ಲಿ ಅಭಿವೃದ್ಧಿಪಡಿಸುವೆ

ಕಾರ್ಯಕ್ರಮದಲ್ಲಿ ಮಾತನಾಡಿದ ಹೆಬ್ಬಾಳ್ಕರ್, “ಬೆಳಗಾವಿ ಗ್ರಾಮೀಣ ಕ್ಷೇತ್ರದ ಹೆಸರು ಇಡೀ ರಾಜ್ಯದಲ್ಲೇ ಮನೆಮಾತಾಗುವಂತೆ ಅಭಿವೃದ್ಧಿ ಪಡಿಸುವುದು ನನ್ನ ಗುರಿ. ಎಲ್ಲರ ಆಶೀರ್ವಾದ ಮತ್ತು ಮಾರ್ಗದರ್ಶನದೊಂದಿಗೆ ಈ ಕ್ಷೇತ್ರವನ್ನು ಮಹಾರಾಷ್ಟ್ರದ ‘ಬಾರಾಮತಿ’ ಮಾದರಿಯಲ್ಲಿ ಮಾದರಿ ಕ್ಷೇತ್ರವನ್ನಾಗಿ ಬೆಳೆಸಲಾಗುವುದು,” ಎಂದರು.
ಮಣ್ಣೂರ್, ಅಂಬೇವಾಡಿ ಮತ್ತು ಗೋಜಗಾ ಗ್ರಾಮಗಳ ರೈತರಿಗಾಗಿ 50 ಲಕ್ಷ ರೂ. ಬಡ್ಡಿರಹಿತ ಸಾಲ ಮಂಜೂರಾಗಿದೆ. ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಹಾಗೂ ಎನ್. ಎಸ್. ಚೌಗುಲೆ ಅವರ ಶ್ರಮವನ್ನು ಅಭಿನಂದಿಸಿದ ಅವರು, “ಮೂರು ಗ್ರಾಮಗಳಿಗೆ ಈ ಹಣ ಸಾಲುವುದಿಲ್ಲ. ಮುಂದಿನ ದಿನಗಳಲ್ಲಿ ಈ ಭಾಗಕ್ಕೆ 2 ಕೋಟಿ ರೂಪಾಯಿ ನಿಧಿಯ ಅಗತ್ಯವಿದ್ದು, ಅದನ್ನು ಶೀಘ್ರದಲ್ಲೇ ಮಂಜೂರು ಮಾಡಿಸಲಾಗುವುದು. ಈ ಮೂರೂ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಹೊಸ ರಸ್ತೆ ಕಾಮಗಾರಿಯನ್ನು ಮುಂದಿನ ಮಳೆಗಾಲಕ್ಕೂ ಮುನ್ನ ಪೂರ್ಣಗೊಳಿಸಲಾಗುವುದು,” ಎಂದು ಭರವಸೆ ನೀಡಿದರು.

5 ಸಾವಿರ ಕೋಟಿ ರೂ. ಆರೋಪಕ್ಕೆ ಖಡಾಖಂಡಿತ ತಿರುಗೇಟು

ಸಂಜಯ್ ಪಾಟೀಲ್ ಅವರ ಆರೋಪಗಳನ್ನು ತೀವ್ರವಾಗಿ ಖಂಡಿಸಿದ ಅವರು, “800 ಕೋಟಿ ರೂಪಾಯಿ ಅಕ್ರಮ ಎಸಗಿದ ಕಾರಣಕ್ಕೆ ವಿಜಯ್ ಮಲ್ಯ ದೇಶ ತೊರೆದು ಲಂಡನ್‌ಗೆ ಓಡಿಹೋದರು. ಹಾಗಿರುವಾಗ ನನ್ನ ವಿರುದ್ಧ 5 ಸಾವಿರ ಕೋಟಿ ರೂಪಾಯಿ ಅವ್ಯವಹಾರ ಮಾಡಲು ಹೇಗೆ ಸಾಧ್ಯ? 2017ರಲ್ಲಿ ನಾನು 10 ಕೋಟಿ ವೆಚ್ಚದಲ್ಲಿ ಕಾರ್ಖಾನೆ ಸ್ಥಾಪಿಸುತ್ತಿದ್ದಾಗ, ಸಂಜಯ್ ಪಾಟೀಲ್ ಅವರೇ ನನ್ನ ವಿರುದ್ಧ ದೂರು ನೀಡಿ ಇನ್‌ಕಮ್ ಟ್ಯಾಕ್ಸ್ (IT) ದಾಳಿ ಮಾಡಿಸಿದ್ದರು. ಎರಡು ಬಾರಿ ಶಾಸಕರಾಗಿದ್ದರೂ ಅವರು ಜನರಿಗಾಗಿ ಏನನ್ನೂ ಮಾಡಲಿಲ್ಲ. ನಾನು ಶಾಸಕಿಯಾಗಿ ಮಾತ್ರವಲ್ಲ, ಈ ಭಾಗದ ಮಗಳಾಗಿ ಕೆಲಸ ಮಾಡುತ್ತಿದ್ದೇನೆ; ಇದನ್ನು ಸಹಿಸಿಕೊಳ್ಳಲಾಗದೆ ಐಟಿ ಅಥವಾ ಇಡಿ (ED) ದಾಳಿಯ ಬೆದರಿಕೆ ಹಾಗೂ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.”

ಗೆಣಸು ಸಂಸ್ಕರಣಾ ಕಾರ್ಖಾನೆಗೆ ಜಾಗ ನೀಡಲು ಮನವಿ

ಬೆಳಗಾವಿ ಗ್ರಾಮೀಣ ಭಾಗದಲ್ಲಿ ಗೆಣಸಿನ (ರತಾಳೆ) ಬೆಳೆ ಹೆಚ್ಚಾಗಿ ಬೆಳೆಯುವುದರಿಂದ, ರೈತರ ಹಿತದೃಷ್ಟಿಯಿಂದ ಗೆಣಸು ಸಂಸ್ಕರಣಾ ಕಾರ್ಖಾನೆ ಸ್ಥಾಪಿಸುವುದಾಗಿ ಪ್ರಕಟಿಸಿದರು.
“ಈ ಕಾರ್ಖಾನೆಗೆ ಸುಮಾರು 5 ಎಕರೆ ಜಾಗದ ಅಗತ್ಯವಿದೆ.

ಬೆಳಗಾವಿ ಅಥವಾ ಅಂಬೇವಾಡಿ ಬಳಿ ಬಾಡಿಗೆಗೆ ಅಥವಾ ಖರೀದಿಗೆ ಸೂಕ್ತ ಜಾಗ ಸಿಕ್ಕರೆ, ನಾನೇ ಸ್ವಂತ ಹಣ ಹೂಡಿಕೆ ಮಾಡಲು ಸಿದ್ಧಳಿದ್ದೇನೆ. ಈ ಕಾರ್ಖಾನೆಯಿಂದ ಗೆಣಸಿನ ಉಪಉತ್ಪನ್ನಗಳನ್ನು ತಯಾರಿಸಿ ರೈತರಿಗೆ ಉತ್ತಮ ಆರ್ಥಿಕ ನೆರವು ನೀಡಲು ಸಾಧ್ಯವಾಗುತ್ತದೆ ಎಂದರು.”

‘ಗೃಹಲಕ್ಷ್ಮಿ’ ಮತ್ತು ಮಹಾರಾಷ್ಟ್ರದ ‘ಲಾಡ್ಕಿ ಬಹಿನ್’ ಯೋಜನೆ ಪ್ರಸ್ತಾಪ

ಗೃಹಲಕ್ಷ್ಮಿ ಯೋಜನೆ ಹಣದ ಕುರಿತು ವಿರೋಧ ಪಕ್ಷಗಳ ಟೀಕೆಗೆ ಉತ್ತರಿಸಿದ ಅವರು, “ಎರಡು ತಿಂಗಳು ಹಣ ಬಂದಿಲ್ಲ ಎಂದು ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ. ಕರ್ನಾಟಕದಲ್ಲಿ ಸುಮಾರು 1 ಕೋಟಿ 25 ಲಕ್ಷ ಮಹಿಳೆಯರಿಗೆ ಪ್ರತಿ ತಿಂಗಳು ಹಣ ತಲುಪಿಸಲಾಗುತ್ತಿದೆ. ತಾಂತ್ರಿಕ ಕಾರಣಗಳಿಂದ ಅಥವಾ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆಯಾಗುವುದು ಸ್ವಲ್ಪ ತಡವಾಗಬಹುದು. ಇದುವರೆಗೆ ಪ್ರತಿಯೊಬ್ಬ ಮಹಿಳೆಗೆ ಸುಮಾರು 70 ಸಾವಿರ ರೂಪಾಯಿವರೆಗೆ ಅನುಕೂಲವಾಗಿದೆ.”

ಮಹಾರಾಷ್ಟ್ರದ ಉದಾಹರಣೆ ನೀಡಿದ ಅವರು, “ಕರ್ನಾಟಕ ಸರ್ಕಾರದ ವಿರುದ್ಧ ಬೆಟ್ಟು ಮಾಡುವ ಮುನ್ನ ವಿರೋಧ ಪಕ್ಷದವರು ಮಹಾರಾಷ್ಟ್ರದ ‘ಲಾಡ್ಕಿ ಬಹಿನ್’ ಯೋಜನೆಯ ಕಥೆ ಏನಾಗಿದೆ ಮತ್ತು ಅಲ್ಲಿ ಎಷ್ಟು ಕಂತುಗಳನ್ನು ನೀಡಿದ್ದಾರೆ ಎಂಬುದನ್ನು ಯೋಚಿಸಲಿ. ನಾವು ಕೆಲಸ ಮಾಡುವವಳು, ಆದರೆ ಇವರು ಮನೆಯಲ್ಲೇ ಕುಳಿತು ವಾಟ್ಸಾಪ್‌ನಲ್ಲಿ ಆರೋಪ ಮಾಡುವವರು,” ಎಂದು ತಿರುಗೇಟು ನೀಡಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (21)
    ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ
    October 17, 2026 | 0
  • Road trip (17)
    ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ
    October 17, 2026 | 0
  • Untitled design 2026 10 17T102455.179
    ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ
    October 17, 2026 | 0
  • Your paragraph text (94)
    ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!
    October 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version