• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ LPG ಸಿಲಿಂಡರ್ ಕೊರತೆ: ದೂರು ಸಲ್ಲಿಕೆಗೆ ಆಹಾರ ಇಲಾಖೆಯಿಂದ ಸಹಾಯವಾಣಿ ಆರಂಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 16, 2026 - 6:36 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 16T183604.082

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಕಂಡುಬರುತ್ತಿರುವ ಹಿನ್ನೆಲೆ, ಕೆಲವು ಕಡೆಗಳಲ್ಲಿ ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಸಿಲಿಂಡರ್‌ಗಳನ್ನು ಮಾರಾಟ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಈ ಪರಿಸ್ಥಿತಿಗೆ ಕಡಿವಾಣ ಹಾಕಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, LPG ವಿತರಣೆಗೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲು ವಿಶೇಷ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ.

ಬೆಂಗಳೂರಿನಲ್ಲಿಯೂ ಗ್ಯಾಸ್‌ ಸಿಲಿಂಡರ್‌ ಸರಬರಾಜು ಕುರಿತು ಕೆಲವು ಗ್ರಾಹಕರಿಂದ ಅಸಮಾಧಾನ ವ್ಯಕ್ತವಾಗುತ್ತಿರುವ ಹಿನ್ನೆಲೆ, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸುಲಭವಾಗಿ ತಿಳಿಸಲು ಈ ಹೆಲ್ಪ್‌ಲೈನ್ ವ್ಯವಸ್ಥೆ ಮಾಡಲಾಗಿದೆ. ಗ್ರಾಹಕರು ಬುಕ್ಕಿಂಗ್ ಮಾಡಿದ ನಂತರ ಸಿಲಿಂಡರ್‌ ವಿತರಣೆಯಲ್ಲಿ ವಿಳಂಬವಾಗುವುದು, ಏಜೆನ್ಸಿಗಳಿಂದ ಅನಾವಶ್ಯಕ ಹಣ ವಸೂಲಿ, ಅಥವಾ ಕಾಳಸಂತೆಯಲ್ಲಿ ಹೆಚ್ಚು ಬೆಲೆಗೆ ಮಾರಾಟ ಮಾಡುವಂತಹ ಘಟನೆಗಳ ಬಗ್ಗೆ ದೂರು ನೀಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RelatedPosts

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು

ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ: ವಿಧಾನಸಭೆಯಿಂದ ಅಧಿಕೃತ ಆದೇಶ ಹೊರಕ್ಕೆ!

ಆಯುರ್ವೇದ-ಯೋಗಕ್ಕೆ ಜಾಗತಿಕ ಮಾನ್ಯತೆ : ಡಾ. ವಿ ಎಸ್‍ವಿ. ಪ್ರಸಾದ್

ADVERTISEMENT
ADVERTISEMENT

ಆಹಾರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಪಾತರಾಜು ಈ ಕುರಿತು ಮಾತನಾಡಿ, ರಾಜ್ಯದಲ್ಲಿ LPG ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ತೈಲ ಕಂಪನಿಗಳು ಅಗತ್ಯ ಪ್ರಮಾಣದಲ್ಲಿ ಸಿಲಿಂಡರ್‌ಗಳ ದಾಸ್ತಾನು ಮಾಡಿಕೊಂಡಿದ್ದು, ಗ್ಯಾಸ್ ಏಜೆನ್ಸಿಗಳು ಗ್ರಾಹಕರು ಬುಕ್ಕಿಂಗ್ ಮಾಡಿದ ನಂತರ ನಿಗದಿತ ಸಮಯದಲ್ಲಿ ವಿತರಣೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದರು.

ಆದರೆ ಕೆಲವು ದುರುದ್ದೇಶದ ವ್ಯಕ್ತಿಗಳು ಮತ್ತು ಮಧ್ಯವರ್ತಿಗಳು ಸಿಲಿಂಡರ್ ಕೊರತೆಯನ್ನು ದುರುಪಯೋಗಪಡಿಸಿಕೊಂಡು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಸಾರ್ವಜನಿಕರು ಯಾವುದೇ ಭಯ ಅಥವಾ ಸಂಕೋಚವಿಲ್ಲದೆ ಸಂಬಂಧಿತ ಮಾಹಿತಿಯನ್ನು ಸರ್ಕಾರಕ್ಕೆ ತಿಳಿಸಬೇಕು ಎಂದು ಅವರು ಮನವಿ ಮಾಡಿದರು.

ಸಹಾಯವಾಣಿ ಸಂಖ್ಯೆ

LPG ಸಿಲಿಂಡರ್ ವಿತರಣೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಅಥವಾ ಅಕ್ರಮದ ಬಗ್ಗೆ ದೂರು ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 080-22264966 ಸಹಾಯವಾಣಿ ಸಂಖ್ಯೆಯನ್ನು ಪ್ರಕಟಿಸಿದೆ. ಈ ಸಂಖ್ಯೆಗೆ ಕರೆ ಮಾಡಿ ಸಮಸ್ಯೆಯನ್ನು ವಿವರಿಸಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಮಾರಾಟದ ವಿರುದ್ಧ ರಾಜ್ಯಾದ್ಯಂತ ಆಹಾರ ಇಲಾಖೆ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದೆ. ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ನಡೆಸಿದ ದಾಳಿಗಳಲ್ಲಿ ಒಟ್ಟು 514 ಎಲ್‌ಪಿಜಿ ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ.

ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ಕಡೆಗಳಲ್ಲಿ 5 ಎಫ್‌ಐಆರ್‌ಗಳು ದಾಖಲಾಗಿವೆ. ದಾವಣಗೆರೆ ಎಪಿಎಂಸಿ, ಬೆಂಗಳೂರಿನ ಪೀಣ್ಯ, ಚಿಕ್ಕಜಾಲ, ಕೆಂಗೇರಿ ಮತ್ತು ಕೋಲಾರದ ಕೆಜಿಎಫ್ ಪ್ರದೇಶಗಳಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆಹಾರ ಇಲಾಖೆಯ ಕಾರ್ಯದರ್ಶಿ ಎಂ. ಕನಗವಲ್ಲಿ ತಿಳಿಸಿದ್ದಾರೆ.

ತೈಲ ಕಂಪನಿಗಳೊಂದಿಗೆ ಸಚಿವ ಮುನಿಯಪ್ಪ ಸಭೆ

ರಾಜ್ಯದಲ್ಲಿ LPG ಸರಬರಾಜು ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ನಡೆಯಿತು. ಬೆಂಗಳೂರಿನ ವಸಂತನಗರದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ತೈಲ ಮತ್ತು ಅನಿಲ ಕಂಪನಿಗಳ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ LPG ಸರಬರಾಜಿನ ಸ್ಥಿತಿ, ವಿತರಣೆಯ ವೇಗ, ಹಾಗೂ ಗ್ರಾಹಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು. ಜೊತೆಗೆ ಭವಿಷ್ಯದಲ್ಲಿ ಯಾವುದೇ ಕೊರತೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸರ್ಕಾರವು ಸಾರ್ವಜನಿಕರಿಗೆ ಅಗತ್ಯವಾದ LPG ಸಿಲಿಂಡರ್‌ಗಳನ್ನು ಸಮಯಕ್ಕೆ ಸರಿಯಾಗಿ ತಲುಪಿಸುವುದು ತನ್ನ ಪ್ರಮುಖ ಜವಾಬ್ದಾರಿ ಎಂದು ಸಚಿವರು ತಿಳಿಸಿದ್ದಾರೆ. ಯಾವುದೇ ಅಕ್ರಮ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಮತ್ತೊಮ್ಮೆ ಎಚ್ಚರಿಕೆ ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (35)

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ದಾಟಿ ಬಂದ 45,000 ಟನ್ ಎಲ್‌ಪಿಜಿ ಟ್ಯಾಂಕರ್!

by ಶ್ರೀದೇವಿ ಬಿ. ವೈ
May 2, 2026 - 10:58 pm
0

BeFunky collage (33)

ಭಾರತದ ಬತ್ತಳಿಕೆಗೆ ಬಂತು ಹೈಪರ್ ಸಾನಿಕ್ ಮಿಸೈಲ್

by Hemanth Kumar S
May 2, 2026 - 10:44 pm
0

BeFunky collage (32)

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

by ಶ್ರೀದೇವಿ ಬಿ. ವೈ
May 2, 2026 - 10:24 pm
0

BeFunky collage (31)

ದೆಹಲಿಯಲ್ಲಿ ದುರಂತ: ಬಾತ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವ ನ್ಯಾಯಾಧೀಶರ ಶವ!

by ಶ್ರೀದೇವಿ ಬಿ. ವೈ
May 2, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
  • Untitled design 2026 05 02T140353.924
    CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
  • Untitled design 2026 05 02T131904.404
    ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version