ಮಂಡ್ಯ: ಸೆ.26, 2025: ಮಂಡ್ಯದ ಮಹಿಳಾ ಕಾಲೇಜು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಬೈಕ್ ಸೈಕಲ್‌ವಾಕ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಡ್ಯದ ಮಹಿಳಾ ಕಾಲೇಜು ಸಮೀಪ ಹೊಸದಾಗಿ ನಿರ್ಮಿಸಲಾದ ಸೈಕಲ್‌ವಾಕ್‌ನ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ವೇಗವಾಗಿ ಚಲಿಸುತ್ತಿದ್ದ ಬೈಕ್‌ನ ರಭಸಕ್ಕೆ ಇಬ್ಬರು ಸವಾರರ ದೇಹ ಛಿದ್ರವಾಗಿ ಸ್ಥಳದಲ್ಲೆ ಸಾವನಪ್ಪಿದ್ದಾರೆ.ಮೃತರನ್ನು ಡ್ಯಾನಿಲ್ (20) ಮತ್ತು ಜೋಶ್ (20) ಎಂದು ಗುರುತಿಸಲಾಗಿದೆ. ಇವರು ಮಂಡ್ಯದ ಉದಯಗಿರಿ ಮತ್ತು ಯತ್ತಗದಹಳ್ಳಿ ನಿವಾಸಿಗಳಾಗಿದ್ದಾರೆ.
ಮೃತ ಯುವಕರು ಬೆಂಗಳೂರಿನಿಂದ ಮಂಡ್ಯಕ್ಕೆ ಬೈಕ್‌ನಲ್ಲಿ ಆಗಮಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸೈಕಲ್‌ವಾಕ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆಗೆ ಒಳಗಾಗುವ ಮೊದಲೇ ಮೃತಪಟ್ಟಿದ್ದಾರೆ. ಈ ಘಟನೆ ಮಂಡ್ಯ ನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಘಟನೆಯ ಕುರಿತು ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ. ಬೈಕ್‌ನ ವೇಗ, ರಸ್ತೆಯ ಸ್ಥಿತಿಗತಿ, ಮತ್ತು ಸೈಕಲ್‌ವಾಕ್ ಕಂಬದ ನಿರ್ಮಾಣದ ಕುರಿತು ವಿವರವಾದ ತನಿಖೆ ನಡೆಯಲಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಪೊಲೀಸರು, ಘಟನೆಯ ಸಂಪೂರ್ಣ ವಿವರಗಳನ್ನು ಸಂಗ್ರಹಿಸುವ ಪ್ರಯತ್ನದಲ್ಲಿದ್ದಾರೆ.





