ಮಂಡ್ಯ, ನವೆಂಬರ್ 18: ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದ ಮಂಡ್ಯ ಜಿಲ್ಲೆಯ ಭಕ್ತರ ಬಸ್ ಕೇರಳದಲ್ಲಿ ಚಾಲಕನ ನಿಯಂತ್ರ ತಪ್ಪಿ ಪಲ್ಟಿ ಹೊಡೆದಿದೆ. ಆದರೆ ಬಸ್‌ನಲ್ಲಿದ್ದ 33 ಮಂದಿ ಮಾಲಾಧಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈ ದುರಂತ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿ (ಏರಿಮಲೈ) ಸಮೀಪದ ತಟ್ಟಿಪಿಟ್ಟಂ ಎಂಬಲ್ಲಿ ನಡೆದಿದೆ. ಕೇರಳದತ್ತ ಪ್ರಯಾಣ ಮುಂದುವರೆದ ಬಸ್ ಬೆಳಗ್ಗೆ ಏರಿಮಲೈ–ತಟ್ಟಿಪಿಟ್ಟಮ್ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಪಲ್ಟಿ ಹೊಡೆದಿದೆ. ಅಪಘಾತಕ್ಕೀಡಾದ ಬಸ್ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದವರಾಗಿದ್ದಾರೆ. ಈ ಗ್ರಾಮದ ಅಯ್ಯಪ್ಪ ಭಕ್ತರು ಶಬರಿಮಲೆ ಮಾಲಾಧಾರಿಗಳಾಗಿ 41 ದಿನಗಳ ವ್ರತವನ್ನು ಪಾಲಿಸಿ, ಕಪ್ಪು ವಸ್ತ್ರ ಧರಿಸಿ, ಮಾಲೆ ಹಾಕಿಕೊಂಡು ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದರು.
ಅಪಘಾತ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಸ್ಥಳೀಯರು ಮತ್ತು ಇತರ ಯಾತ್ರಿಗಳ ಸಹಾಯದಿಂದ ಎಲ್ಲ ಭಕ್ತರನ್ನು ಬಸ್‌ನಿಂದ ಹೊರತೆಗೆದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕೆಲವರಿಗೆ ಎರುಮೇಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ KSRTC ಬಸ್: 29 ಪ್ರಯಾಣಿಕರಿಗೆ ಗಾಯ
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮೂರ್ಕಿ ಕ್ರಾಸ್ ಬಳಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಬಸ್‌ನಲ್ಲಿದ್ದ 29 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಈ ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯ ವಿವರ
ಬಾದಾಮಿ ಪ್ರದೇಶದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಸೂಳೆಮೂರ್ಕಿ ಕ್ರಾಸ್ ಬಳಿ ತೀವ್ರ ವೇಗದಲ್ಲಿ ಸಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯಿಂದ ಹಳ್ಳಕ್ಕೆ ಉರುಳಿ ಪಲ್ಟಿಯಾಗಿದೆ. ಲಕ್ಷ ದೀಪೋತ್ಸದ ಹಿನ್ನೆಲೆ ಅನೇಕ ಭಕ್ತರು ಬಾದಾಮಿಯಿಂದ ಧರ್ಮಸ್ಥಳಕ್ಕೆ ಸಾರಿಗೆ ಬಸ್ ಮೂಲಕ ಪ್ರಯಾಣಿಸುತ್ತಿದ್ದರು.. ಬಸ್‌ನಲ್ಲಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ ವಿವಿಧ ವಯೋಮಾನದ ಪ್ರಯಾಣಿಕರು ಇದ್ದರು. ಉರುಳಿದ ಬಸ್ ಹಳ್ಳದಲ್ಲಿ ಸಿಲುಕಿ ಹಾಕಿಕೊಂಡಿದ್ದು, ಸ್ಥಳೀಯರು ಮತ್ತು ರಸ್ತೆಯಲ್ಲಿ ಸಾಗುತ್ತಿದ್ದ ಇತರ ವಾಹನಗಳ ಚಾಲಕರು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.
ಗಾಯಗೊಂಡ 29 ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾದರೆ, ಕೆಲವರಿಗೆ ಗಂಭಿರ ಗಾಯಗಳಾಗಿವೆ. ತಲೆಗೆ, ಕೈಕಾಲುಗಳಿಗೆ ಮತ್ತು ಬೆನ್ನಿನ ಭಾಗಕ್ಕೆ ಗಾಯಗಳಾಗಿವೆ. ಸ್ಥಳೀಯರು ಮತ್ತು ಪೊಲೀಸರು ಆಗಮಿಸಿ ಗಾಯಾಳುಗಳನ್ನು ತಕ್ಷಣ ಹೊನ್ನಾವರ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯಕೀಯ ತಂಡ ತುರ್ತು ಚಿಕಿತ್ಸೆ ನೀಡಲಾಗಿತ್ತಿದೆ. ಕೆಲವು ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಅಥವಾ ಮಂಗಳೂರಿನ ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ಸಾಧ್ಯತೆಯಿದೆ.
