ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯವೇ ದಲಿತರನ್ನು ಬಹಿಷ್ಕರಿಸಿರುವ ಆರೋಪ ಕೇಳಿಬಂದಿದೆ. 7 ದಲಿತ ಕುಟುಂಬಗಳು ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿದ್ದು, ನೆರೆಹೊರೆಯವರು ಈ ಕುಟುಂಬಗಳೊಂದಿಗೆ ಮಾತನಾಡದಂತೆ ಕುಲದ ಮುಖಂಡರು ಆದೇಶಿಸಿದ್ದಾರೆ.
ಬಹಿಷ್ಕಾರಕ್ಕೊಳಗಾದ ಕುಟುಂಬಗಳು ತಮ್ಮ ಸಮುದಾಯದ ಮುಖಂಡರ ವಿರುದ್ಧ ಮಾತನಾಡಿದ ಆರೋಪದ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕುಲದ ಮುಖಂಡರು ಸ್ಥಳೀಯರಿಗೆ ಈ 7 ಕುಟುಂಬಗಳೊಂದಿಗೆ ಯಾವುದೇ ರೀತಿಯ ಸಾಮಾಜಿಕ ಸಂಪರ್ಕವಿಡದಂತೆ ಆದೇಶಿಸಿದ್ದಾರೆ.ಇದರಿಂದ ಬಹಿಷ್ಕಾರಕ್ಕೊಳಗಾದ ಕುಟುಂಬಗಳಿಗೆ ತೀವ್ರ ಸಮಸ್ಯೆ ಉಂಟಾಗಿದೆ
ತಮಗಾದ ಅನ್ಯಾಯದ ವಿರುದ್ಧ ನ್ಯಾಯ ಕೋರಿ ಜೊತೆಗೆ, ಜಿಲ್ಲಾಡಳಿತದ ಹಸ್ತಕ್ಷೇಪವನ್ನು ಕೋರಿ ಅರ್ಜಿ ಸಲ್ಲಿಸಲು, ಬಹಿಷ್ಕಾರಕ್ಕೊಳಗಾದ ಕುಟುಂಬಗಳು ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು ಮತ್ತು ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.





