ಬೆಂಗಳೂರು, ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆಗೆ ವಹಿಸಬೇಕೆಂದು ಸಂಸದ ತೇಜಸ್ವಿ ಸೂರ್ಯ ಗೃಹ ಸಚಿವ ಅಮಿತ್ ಷಾ ರವರಿಗೆ ಪತ್ರ ಬರೆದಿದ್ದರೆ.
ಮಂಗಳೂರಿನ ಬಜ್ಪೆಯಲ್ಲಿ ಮೇ 1 ರಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕ್ರೂರ ಹತ್ಯೆಯ ಬಗ್ಗೆ ತೀವ್ರ ದುಃಖ ಮತ್ತು ಕಳವಳದಿಂದ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಸಾರ್ವಜನಿಕ ಸ್ಥಳದಲ್ಲಿ ನಡೆದ ಈ ಘೋರ ಅಪರಾಧವು ಕರಾವಳಿ ಪ್ರದೇಶದ ಹಿಂದೂ ಸಮುದಾಯದಲ್ಲಿ ಭಯ ಮತ್ತು ಅಭದ್ರತೆಯ ವಾತಾವರಣವನ್ನು ಸೃಷ್ಟಿಸಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ರಾಗಿರುವತೇಜಸ್ವಿ ಸೂರ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಯಲ್ಲಿ, ಕರಾವಳಿ ಪ್ರದೇಶವು 2022 ರಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಸೇರಿದಂತೆ ಹಲವಾರು ಹತ್ಯೆಗಳಿಗೆ ಸಾಕ್ಷಿಯಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ನಿಷೇಧಿತ ಸಂಘಟನೆಗಳ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ಬೆದರಿಕೆಯನ್ನು ಒಡ್ಡುತ್ತಿವೆ.
ಹಿಂದೆ ನಡೆದ ಹಲವು ಪ್ರಕರಣಗಳಲ್ಲಿ ಪಿಎಫ್‌ಐ ಇರುವುದನ್ನು ಎನ್‌ಐಎ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿತ್ತು, ಅದೇ ಮಾದರಿಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎನ್‌ಐಎಗೆ ವರ್ಗಾಯಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.