ಮುಡಾ ಹಗರಣ: ಇಡಿ ಕೋರ್ಟ್‌ಗೆ, ಸಿದ್ದರಾಮಯ್ಯಗೆ ಟೆನ್ಷನ್ ಶುರು!

Film 2025 04 02t172145.746

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ತನಿಖೆ ನಡೆದಿದ್ದು, ಈಗ ಜಾರಿ ನಿರ್ದೇಶನಾಲಯ (ಇಡಿ) ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಲೋಕಾಯುಕ್ತ ಸಲ್ಲಿಸಿದ ತನಿಖಾ ವರದಿಯನ್ನು ತಿರಸ್ಕರಿಸುವಂತೆ ಇಡಿ ಕೋರಿದ್ದು, ಸಿದ್ದರಾಮಯ್ಯ ಅವರಿಗೆ ಹೊಸ ಸವಾಲು ಎದುರಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಗರಣದ ತನಿಖೆಯನ್ನು ಮೈಸೂರು ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲ ನಡೆಸಿವೆ. ಲೋಕಾಯುಕ್ತ ಅಧಿಕಾರಿಗಳು ತಾವು ನಡೆಸಿದ ತನಿಖಾ ವರದಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಈ ತನಿಖಾ ವರದಿಯನ್ನು ತಿರಸ್ಕರಿಸುವಂತೆ ಇಡಿ ನ್ಯಾಯಾಲಯಕ್ಕೆ ಮನವಿ ಮಾಡಿದೆ.

ಇಡಿ ವಿರುದ್ಧ ಪ್ರಿಯಾಂಕ್​ ಖರ್ಗೆ ವಾಗ್ದಾಳಿ

ರಾಜ್ಯದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಇಡಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಇಡಿ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಹೇಳಿದಂತೆ ಇಡಿ ಕೆಲಸ ಮಾಡುತ್ತದೆ. ಯಾವ ಆಧಾರದ ಮೇಲೆ ತನಿಖೆ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಇಡಿ, ಸಿಬಿಐ, ಐಟಿ ಪೊಲಿಟಿಕಲ್ ಮಾಸ್ಟರ್ಸ್ ಹೇಳಿದಂತೆ ಕೇಳುತ್ತವೆ.  ಬಿಜೆಪಿ ವಿರುದ್ಧದ ತನಿಖೆ ಏಕೆ ಬಹಿರಂಗವಾಗುವುದಿಲ್ಲ?” ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು.

ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಅಂದರೆ 14 ನಿವೇಶನ ಕೊಟ್ಟಿದ್ದಾರೆ ಇದು ಚರ್ಚೆಗೆ ಕಾರಣವಾಗಿತ್ತು. ವಿಜಯನಗರ ಬಡಾವಣೆಯಲ್ಲಿ 14 ನಿವೇಶನ ಪತ್ನಿ ಪಾರ್ವತಿ ಅವರಿಗೆ ಮಂಜೂರು ಆಗಲು, ಸಿದ್ದರಾಮಯ್ಯ ಅವರು ಪ್ರಭಾವ ಬೀರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

 

Exit mobile version