ಬೆಂಗಳೂರು, ಅಕ್ಟೋಬರ್ 1, 2025: ಬೆಂಗಳೂರಿನ ಎರಡು ಪ್ರತ್ಯೇಕ ಘಟನೆಗಳಲ್ಲಿ ಜಿಮ್ ಟ್ರೈನರ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್ ಬಳಿಯ ಹೆಬ್ಬಗೋಡಿಯ ಅನಂತನಗರದ ರಿಪ್ಟ್ ಜಿಮ್‌ನಲ್ಲಿ ಕೆಲಸ ಮಾಡುತ್ತಿದ್ದ ಜಿಮ್ ಟ್ರೈನರ್ ಸಂದೀಪ್ ಮೇಲೆ ಐವರು ಆರೋಪಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಂದೀಪ್ ಜಿಮ್‌ನಲ್ಲಿ ತರಬೇತಿಯ ಸಂದರ್ಭದಲ್ಲಿ ಅನುಷಾ ಎಂಬ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದ. ಇಬ್ಬರೂ ಪೋನ್ ನಂಬರ್ ಸಂಖ್ಯೆಯನ್ನು ವಿನಿಮಯ ಮಾಡಿಕೊಂಡು ದಿನನಿತ್ಯ ಚಾಟ್ ಮಾಡುತ್ತಿದ್ದರು. ಈ ವಿಷಯ ಗಮನಕ್ಕೆ ಬಂದಾಗ ಅನುಷಾಳ ಸಹೋದರರಾದ ಗೌತಮ್ ಮತ್ತು ಅರುಣ್ ಆಕೆಯ ಮೊಬೈಲ್ ಪರಿಶೀಲಿಸಿದ್ದಾರೆ. ಅನುಷಾ ತನ್ನ ಫೋನ್ ಹ್ಯಾಕ್ ಆಗಿದೆ ಎಂದು ಆರೋಪಿಸಿದ್ದಾಳೆ. ಇದರಿಂದ ಕೋಪಗೊಂಡ ಗೌತಮ್, ಅರುಣ್ ಮತ್ತು ಇನ್ನಿತರರು ಜಿಮ್‌ಗೆ ನುಗ್ಗಿ ಸಂದೀಪ್‌ನ ಮೇಲೆ ದಾಳಿ ನಡೆಸಿದ್ದಾರೆ. ಜಿಮ್‌ನಲ್ಲಿದ್ದ ರಾಡ್‌ನಿಂದ ತಲೆಗೆ ಗಂಭೀರವಾಗಿ ಹೊಡೆದಿದ್ದಾರೆ.
ಗಾಯಗೊಂಡ ಸಂದೀಪ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆನೇಕಲ್ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖೆ ಆರಂಭವಾಗಿದೆ.