• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೈಸೂರಿನಲ್ಲಿ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ತಾರಾಲಯ ಉದ್ಘಾಟನೆ: ವಿಶೇಷತೆಗಳೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 13, 2026 - 11:59 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled Design 2026 11 13T115811.251

ಮೈಸೂರು: ಅರಮನೆಗಳ ನಗರಿ ಮೈಸೂರಿನ ಮುಕುಟಕ್ಕೆ ಮತ್ತೊಂದು ಹೆಗ್ಗಳಿಕೆ ಸೇರ್ಪಡೆಯಾಗಲಿದೆ. ಆಕಾಶ, ಗ್ರಹಗಳು, ನಕ್ಷತ್ರಗಳು ಹಾಗೂ ದೂರದ ಗೆಲಾಕ್ಸಿಗಳ ಅದ್ಭುತ ಲೋಕವನ್ನು ಕಣ್ಣೆದುರೇ ನೋಡುವ ಅನುಭವ ನೀಡುವ ಅತ್ಯಾಧುನಿಕ ತಾರಾಲಯ ಮೈಸೂರಿನಲ್ಲಿ ತಲೆ ಎತ್ತಿದೆ. ವಿಶ್ವದಲ್ಲೇ ಮೊದಲ ಬಾರಿಗೆ 15 ಡಿಗ್ರಿ ಓರೆಯಾದ ಎಲ್‌ಇಡಿ ಡೋಮ್ ತಂತ್ರಜ್ಞಾನದಲ್ಲಿ ನಿರ್ಮಿಸಿರುವ ಈ ವಿಶಿಷ್ಟ ತಾರಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿದ್ದಾರೆ.

ಚಾಮುಂಡಿಬೆಟ್ಟದ ತಪ್ಪಲಿನ ತಾವರೆಕಟ್ಟೆ ಸಮೀಪ ನಿರ್ಮಾಣಗೊಂಡಿರುವ ಈ ತಾರಾಲಯವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮೈಸೂರಿಗೆ ಹೊಸ ಗುರುತನ್ನು ತಂದುಕೊಡುವ ನಿರೀಕ್ಷೆಯಿದೆ. ಸುಮಾರು 120 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಬೃಹತ್ ಯೋಜನೆಯನ್ನು ರೂಪಿಸಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯವು ಇದಕ್ಕಾಗಿ ಮೂರು ಎಕರೆ ಜಾಗವನ್ನು ಒದಗಿಸಿದ್ದು, ಶ್ರೀ ಜಯಚಾಮರಾಜ ಒಡೆಯರ್ ಉನ್ನತ ಕಲಿಕಾ ಕೇಂದ್ರದ ಆವರಣದಲ್ಲಿ ತಾರಾಲಯ ನಿರ್ಮಾಣವಾಗಿದೆ.

RelatedPosts

ಪಿಂಕ್ ಲೈನ್ ಮೆಟ್ರೋ ಟಿಕೆಟ್ ದರ ಫಿಕ್ಸ್: ಎಲ್ಲಿಂದ ಎಲ್ಲಿಗೆ ಎಷ್ಟು? ಇಲ್ಲಿದೆ ಮಾಹಿತಿ

ಪಿಂಕ್ ಲೈನ್ ಮೆಟ್ರೋಗೆ ಇಂದು ಮೋದಿ ಚಾಲನೆ: ಬೆಂಗಳೂರಿನ ಮೆಟ್ರೋ ಜಾಲಕ್ಕೆ ಮತ್ತೊಂದು ಗರಿ

ಕರ್ನಾಟಕದಲ್ಲಿ ಚಳಿ ಅಬ್ಬರ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ: ಸ್ವಾಗತ ಕೋರಿದ ಸಿಎಂ ಡಿಕೆಶಿ

ADVERTISEMENT
ADVERTISEMENT

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಸಹಕಾರದಿಂದ ಈ ಯೋಜನೆ ಸಾಕಾರಗೊಂಡಿದೆ.

ಪ್ರೊಜೆಕ್ಟರ್ ಇಲ್ಲ, ಇಡೀ ಗುಮ್ಮಟವೇ ಪರದೆ!

ಈ ತಾರಾಲಯದ ಅತ್ಯಂತ ಪ್ರಮುಖ ಆಕರ್ಷಣೆಯೇ ಅದರ ವಿನೂತನ ತಂತ್ರಜ್ಞಾನ. ಸಾಮಾನ್ಯವಾಗಿ ತಾರಾಲಯಗಳಲ್ಲಿ ಪ್ರೊಜೆಕ್ಟರ್‌ಗಳ ಮೂಲಕ ಗುಮ್ಮಟದ ಪರದೆಯ ಮೇಲೆ ಆಕಾಶಕಾಯಗಳ ದೃಶ್ಯಗಳನ್ನು ಪ್ರದರ್ಶಿಸಲಾಗುತ್ತದೆ. ಆದರೆ ಮೈಸೂರಿನಲ್ಲಿ ನಿರ್ಮಾಣವಾಗಿರುವ ಈ ಅತ್ಯಾಧುನಿಕ ತಾರಾಲಯದಲ್ಲಿ ಸಂಪೂರ್ಣ ಗುಮ್ಮಟವನ್ನೇ ಎಲ್‌ಇಡಿ ಪರದೆಯಾಗಿ ವಿನ್ಯಾಸಗೊಳಿಸಲಾಗಿದೆ.

ಸುಮಾರು 15 ಮೀಟರ್ ವ್ಯಾಪ್ತಿಯ ಗುಮ್ಮಟವನ್ನು 15 ಡಿಗ್ರಿ ಓರೆಯಾದ ವಿನ್ಯಾಸದಲ್ಲಿ ನಿರ್ಮಿಸಲಾಗಿದೆ. ಈ ವಿಶೇಷ ವಿನ್ಯಾಸದಲ್ಲಿ 8K ರೆಸಲ್ಯೂಶನ್ ತಂತ್ರಜ್ಞಾನದ ಮೂಲಕ ಗ್ರಹಗಳು, ನಕ್ಷತ್ರಗಳು, ಗೆಲಾಕ್ಸಿಗಳು ಹಾಗೂ ಬ್ರಹ್ಮಾಂಡದ ವಿಸ್ಮಯಕಾರಿ ದೃಶ್ಯಗಳನ್ನು ಪ್ರದರ್ಶಿಸಲಾಗುತ್ತದೆ. ಇದರಿಂದ ವೀಕ್ಷಕರು ಕೇವಲ ಪರದೆಯ ಮೇಲೆ ಆಕಾಶವನ್ನು ನೋಡುವುದಕ್ಕಿಂತ, ಬ್ರಹ್ಮಾಂಡದ ಮಧ್ಯದಲ್ಲೇ ಕುಳಿತಿರುವಂತಹ ಅನುಭವ ಪಡೆಯಲಿದ್ದಾರೆ.

ಫ್ರಾನ್ಸ್‌ನ RSA Cosmos ಮತ್ತು ಜಪಾನ್‌ನ Konica Minolta ಸಂಸ್ಥೆಗಳು ಅಭಿವೃದ್ಧಿಪಡಿಸಿರುವ SkyExplorer ಸಾಫ್ಟ್‌ವೇರ್ ಈ ತಾರಾಲಯದ ಪ್ರದರ್ಶನ ವ್ಯವಸ್ಥೆಯ ಪ್ರಮುಖ ಭಾಗವಾಗಿದೆ. ಒಂದೇ ಬಾರಿಗೆ ಸುಮಾರು 150 ಮಂದಿ ಕುಳಿತು ಬ್ರಹ್ಮಾಂಡದ ಅದ್ಭುತಗಳನ್ನು ವೀಕ್ಷಿಸಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳಿಗೆ ಖಗೋಳ ವಿಜ್ಞಾನ ಕಲಿಕೆಯ ಹೊಸ ಅವಕಾಶ

ಈ ತಾರಾಲಯ ಕೇವಲ ಮನರಂಜನೆ ಅಥವಾ ಪ್ರವಾಸಿ ಆಕರ್ಷಣೆಯ ಕೇಂದ್ರವಾಗಿ ಉಳಿಯುವುದಿಲ್ಲ. ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಯುವ ವಿಜ್ಞಾನಿಗಳಿಗೆ ಖಗೋಳ ವಿಜ್ಞಾನದ ಆಳವಾದ ಅಧ್ಯಯನ ನಡೆಸಲು ಅನುಕೂಲವಾಗುವಂತೆ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಬೆಂಗಳೂರಿನ ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (IIA) ಮತ್ತು ಮೈಸೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಇಲ್ಲಿ COSMOS ಕಾಸ್ಮಾಲಜಿ ತರಬೇತಿ ಕೇಂದ್ರ ಕಾರ್ಯನಿರ್ವಹಿಸಲಿದೆ. ಭಾರತದ ಅತ್ಯಾಧುನಿಕ ದೂರದರ್ಶಕಗಳಿಂದ ಸಂಗ್ರಹವಾಗುವ ವೈಜ್ಞಾನಿಕ ದತ್ತಾಂಶವನ್ನು ವಿಶ್ಲೇಷಿಸುವುದು, ಬ್ರಹ್ಮಾಂಡದ ರಚನೆ ಹಾಗೂ ಖಗೋಳ ವಿದ್ಯಮಾನಗಳ ಕುರಿತು ಅಧ್ಯಯನ ನಡೆಸುವುದು ಸೇರಿದಂತೆ ಹಲವು ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಉದ್ದೇಶ ಹೊಂದಲಾಗಿದೆ.

ಇದರಿಂದ ಮೈಸೂರು ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿಯೂ ಮಹತ್ವದ ಕೇಂದ್ರವಾಗಿ ಬೆಳೆಯುವ ಸಾಧ್ಯತೆಯಿದೆ.

ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ ಮೈಸೂರಿಗೆ ಆಗಮಿಸಲಿದ್ದು, ತಾರಾಲಯ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

  • ಮಧ್ಯಾಹ್ನ 3:20: ಮೈಸೂರಿನ ಲಲಿತಮಹಲ್ ಹೆಲಿಪ್ಯಾಡ್‌ಗೆ ಆಗಮನ.
  • ಸಂಜೆ 3:50: ಅತ್ಯಾಧುನಿಕ ತಾರಾಲಯದ ಉದ್ಘಾಟನೆ.
  • ನಂತರ: ಸಾರ್ವಜನಿಕ ಸಭೆಯಲ್ಲಿ ಭಾಗಿ.
  • ಸಂಜೆ 5:45: ಕಾರ್ಯಕ್ರಮ ಮುಕ್ತಾಯ.
  • ಸಂಜೆ 6:00: ಮೈಸೂರು ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ.

ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕಾಗಿ ಸುಮಾರು 8 ಸಾವಿರ ಜನರು ಭಾಗವಹಿಸಬಹುದಾದ ಬೃಹತ್ ವೇದಿಕೆಯನ್ನು ಸಿದ್ಧಪಡಿಸಲಾಗಿದೆ. ಅಗತ್ಯ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 13T115811.251

ಮೈಸೂರಿನಲ್ಲಿ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ತಾರಾಲಯ ಉದ್ಘಾಟನೆ: ವಿಶೇಷತೆಗಳೇನು?

by ಶಾಲಿನಿ ಕೆ. ಡಿ
November 13, 2026 - 11:59 am
0

Untitled Design 2026 11 13T112411.130

ಪಿಂಕ್ ಲೈನ್ ಮೆಟ್ರೋ ಟಿಕೆಟ್ ದರ ಫಿಕ್ಸ್: ಎಲ್ಲಿಂದ ಎಲ್ಲಿಗೆ ಎಷ್ಟು? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
November 13, 2026 - 11:26 am
0

Untitled Design 2026 11 13T110810.424

ಪಿಂಕ್ ಲೈನ್ ಮೆಟ್ರೋಗೆ ಇಂದು ಮೋದಿ ಚಾಲನೆ: ಬೆಂಗಳೂರಿನ ಮೆಟ್ರೋ ಜಾಲಕ್ಕೆ ಮತ್ತೊಂದು ಗರಿ

by ಶಾಲಿನಿ ಕೆ. ಡಿ
November 13, 2026 - 11:08 am
0

Untitled Design 2026 11 13T105205.657

ಕರ್ನಾಟಕದಲ್ಲಿ ಚಳಿ ಅಬ್ಬರ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

by ಶಾಲಿನಿ ಕೆ. ಡಿ
November 13, 2026 - 10:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 13T112411.130
    ಪಿಂಕ್ ಲೈನ್ ಮೆಟ್ರೋ ಟಿಕೆಟ್ ದರ ಫಿಕ್ಸ್: ಎಲ್ಲಿಂದ ಎಲ್ಲಿಗೆ ಎಷ್ಟು? ಇಲ್ಲಿದೆ ಮಾಹಿತಿ
    November 13, 2026 | 0
  • Untitled Design 2026 11 13T110810.424
    ಪಿಂಕ್ ಲೈನ್ ಮೆಟ್ರೋಗೆ ಇಂದು ಮೋದಿ ಚಾಲನೆ: ಬೆಂಗಳೂರಿನ ಮೆಟ್ರೋ ಜಾಲಕ್ಕೆ ಮತ್ತೊಂದು ಗರಿ
    November 13, 2026 | 0
  • Untitled Design 2026 11 13T105205.657
    ಕರ್ನಾಟಕದಲ್ಲಿ ಚಳಿ ಅಬ್ಬರ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ
    November 13, 2026 | 0
  • Untitled Design 2026 11 13T102900.496
    ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ: ಸ್ವಾಗತ ಕೋರಿದ ಸಿಎಂ ಡಿಕೆಶಿ
    November 13, 2026 | 0
  • Untitled Design 2026 11 12T175602.430
    ಲಕ್ಷ್ಮೀ ಪೂಜೆ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ: 11 ಮಂದಿ ಬಂಧನ
    November 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version