ಭಾರತೀಯ ನೌಕಾ ದಿನಾಚರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ

Untitled design 2025 12 04T230727.641

ಕಾರವಾರ, ಡಿ.4: ಭಾರತೀಯ ನೌಕಾ ದಿನಾಚರಣೆಯ ಪ್ರಯುಕ್ತ ಕಾರವಾರದ ಐ.ಎನ್.ಎಸ್ ಕದಂಬ ನೌಕಾನೆಲೆಯ , ನೌಕಾದಳ ಭವನದ ಆವರಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿದ್ದರು.

1971ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಯುದ್ಧದಲ್ಲಿ ಡಿ.4ರಂದು ಕರಾಚಿಯ ಬಂದರಿನ ಮೇಲೆ ದಾಳಿ ನಡೆಸಿ ಭಾರತವು ವಿಜಯ ಸಾಧಿಸಿದ ನೆನಪಿಗೆ ಭಾರತೀಯ ನೌಕಾದಿನ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ನೌಕಾ ಸಿಬ್ಬಂದಿ ವಾದ್ಯ ಪರಿಕರಗಳಲ್ಲಿ ದೇಶಭಕ್ತಿ ಗೀತೆಗಳನ್ನು ನುಡಿಸಿದ, ಬಳಿಕ ಬ್ಯಾಂಡ್ ಸಿಬ್ಬಂದಿ ಬೀಟಿಂಗ್ ರಿಟ್ರೀಟ್ ಮೂಲಕ ನೌಕಾಪಡೆಯ ಸಿಬ್ಬಂದಿಯ ತ್ಯಾಗ, ಬಲಿದಾನ ಮತ್ತು ಸಾಮರ್ಥ್ಯವನ್ನು ಸ್ಮರಿಸಿದರು. ನಂತರ ನೌಕಾಪಡೆಯ ಧ್ವಜದ ಅವರೋಹಣ ಮಾಡಲಾಯಿತು.

ಸಂಭ್ರಮಾಚರಣೆಯ ಭಾಗವಾಗಿ ನೌಕಾಪಡೆಯ ನೌಕೆಗಳಿಗೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ನೌಕೆಗಳಿಂದ ಸಿಡಿಮದ್ದುಗಳನ್ನು ಸಿಡಿಸಲಾಯಿತು. ನೌಕಾಪಡೆಯ ಸಿಬ್ಬಂದಿ, ನೌಕಾ ಅಗ್ನಿವೀರರು, ನೌಕಾನೆಲೆ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕರ್ನಾಟಕ ನೌಕಾ ನೆಲೆಯ ಮುಖ್ಯಸ್ಥ ಫ್ಲ್ಯಾಗ್ ಕಮಾಂಡೆoಟ್ ಆಫಿಸರ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್, ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ, ಜಿ. ಪಂ. ಸಿಇಓ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ದೀಪನ್ ಎಂ. ಎನ್. , ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಹಾಗೂ ನೌಕಾಪಡೆಯ ಅಧಿಕಾರಿಗಳು ಮತ್ತಿತರರು ಇದ್ದರು.

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಮುಂಚೂಣಿಯಲ್ಲಿ ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್

ನವದೆಹಲಿ: ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾದ ಉಪ ರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯ ಆಯ್ಕೆಯಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರ ಹೆಸರು ಮುಂಚೂಣಿಯಲ್ಲಿತ್ತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಈ ಸಂಬಂಧ ಭಾನುವಾರ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಸೋಮವಾರದಂದು ಬಿಜೆಪಿ ತನ್ನ ಅಧಿಕೃತ ಅಭ್ಯರ್ಥಿಯ ಹೆಸರನ್ನು ಘೋಷಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ಎನ್‌ಡಿಎ ಮಿತ್ರಪಕ್ಷಗಳ ಸಭೆ:

ಮಂಗಳವಾರ ಎನ್‌ಡಿಎ ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮಿತ್ರಪಕ್ಷಗಳು ತಮ್ಮ ಬೆಂಬಲವನ್ನು ವ್ಯಕ್ತಪಡಿಸಲಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಭೆಯಲ್ಲಿ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ. ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನವಾಗಿದೆ. “ನಾಮಪತ್ರ ಸಲ್ಲಿಕೆಯ ದಿನ ಬಿಜೆಪಿಯು ತನ್ನ ಶಕ್ತಿಪ್ರದರ್ಶನ ಮಾಡಲಿದೆ. ಬಿಜೆಪಿ ಅಧಿಕಾರದಲ್ಲಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ,” ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ವಿರೋಧ ಪಕ್ಷಗಳ ಕುತೂಹಲ:

ಕಳೆದ ವಾರ ಎನ್‌ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ಅಭ್ಯರ್ಥಿ ಆಯ್ಕೆಯ ನಿರ್ಧಾರವನ್ನು ಪ್ರಧಾನಿ ಮೋದಿ ಅವರಿಗೆ ಬಿಟ್ಟಿದ್ದವು. ಸೆಪ್ಟೆಂಬರ್ 9 ರಂದು ಮತದಾನ ನಡೆಯಲಿದೆ. ವಿರೋಧ ಪಕ್ಷಗಳು ತಮ್ಮದೇ ಆದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತವೆಯೇ ಎಂಬುದು ಕುತೂಹಲ ಮೂಡಿಸಿದೆ.

ಪಕ್ಷ ನಿಷ್ಠರಿಗೆ ಆದ್ಯತೆ:

ಜಗದೀಪ್ ಧನಕರ್ ಅವರ ವರ್ತನೆಯಿಂದ ಮುಜುಗರಕ್ಕೊಳಗಾಗಿರುವ ಬಿಜೆಪಿ ವರಿಷ್ಠರು ಈ ಬಾರಿ ಪಕ್ಷದ ನಿಷ್ಠಾವಂತರಿಗೆ ಆದ್ಯತೆ ನೀಡಲು ನಿರ್ಧರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಮತ್ತು ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಇದರ ಜೊತೆಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಬಿಹಾರ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್, ಮತ್ತು ಆರ್‌ಎಸ್‌ಎಸ್ ನಾಯಕ ಶೇಷಾದ್ರಿಚಾರಿ ಅವರ ಹೆಸರುಗಳೂ ಕೇಳಿಬಂದಿವೆ.

Exit mobile version