• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶೀಘ್ರದಲ್ಲೇ ಕಬ್ಬನ್ ಪಾರ್ಕ್ ಬಾಲಭವನದಲ್ಲಿ ಸ್ಕೆಟಿಂಗ್ ಬೋರ್ಡ್ ಪಾರ್ಕ್ ಆರಂಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 16, 2026 - 11:33 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 16T112929.504

RelatedPosts

ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ

ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?

ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಬೆಂಗಳೂರು ಸೇರಿ 15 ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ

ADVERTISEMENT
ADVERTISEMENT

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿರುವ ಕಬ್ಬನ್ ಪಾರ್ಕ್ (Cubbon Park) ಮತ್ತೊಂದು ಹೊಸ ಆಕರ್ಷಣೆಯ ಕೇಂದ್ರವಾಗಲು ಸಜ್ಜಾಗಿದೆ. ಮಕ್ಕಳ ನೆಚ್ಚಿನ ತಾಣವಾಗಿರುವ ಬಾಲಭವನ (Balabhavana) ಇದೀಗ ಕೇವಲ ಮನರಂಜನೆಯ ಕೇಂದ್ರವಾಗಿರದೆ, ಕ್ರೀಡಾ ಪ್ರತಿಭೆಗಳನ್ನು ಬೆಳೆಸುವ ಮಹತ್ವದ ವೇದಿಕೆಯಾಗಲು ಮುಂದಾಗಿದೆ. ಬಾಲಭವನ ಆವರಣದಲ್ಲಿ ಅತಿ ಶೀಘ್ರದಲ್ಲೇ ಆಧುನಿಕ ಸ್ಕೆಟಿಂಗ್ ಬೋರ್ಡ್ ಪಾರ್ಕ್ (Skateboard Park) ನಿರ್ಮಾಣವಾಗಲಿದೆ.

ವಾರಾಂತ್ಯಗಳು ಹಾಗೂ ರಜಾದಿನಗಳಲ್ಲಿ ಮಕ್ಕಳೊಂದಿಗೆ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವೇ ಕಬ್ಬನ್ ಪಾರ್ಕ್. ಪ್ರಕೃತಿ ಸೌಂದರ್ಯ, ಆಟದ ಮೈದಾನಗಳು, ಶೈಕ್ಷಣಿಕ ಚಟುವಟಿಕೆಗಳಿಗಾಗಿ ಪ್ರಸಿದ್ಧವಾಗಿರುವ ಬಾಲಭವನಕ್ಕೆ ಈಗ ಮತ್ತೊಂದು ಸಾಹಸಮಯ ಕ್ರೀಡೆ ಸೇರ್ಪಡೆಯಾಗುತ್ತಿದೆ. ಇದರಿಂದ ಮಕ್ಕಳು ಆಟದ ಜೊತೆಗೆ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಅವಕಾಶ ದೊರೆಯಲಿದೆ.

ಈ ಯೋಜನೆಯನ್ನು ಬಾಲಭವನ ಸೊಸೈಟಿ ಮತ್ತು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಸುಮಾರು 1.5 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸ್ಕೆಟಿಂಗ್ ಬೋರ್ಡ್ ಪಾರ್ಕ್ ನಿರ್ಮಾಣವಾಗಲಿದ್ದು, ಇದು ರಾಜ್ಯದಲ್ಲೇ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ ಪಾರ್ಕ್‌ಗಳಲ್ಲಿ ಒಂದಾಗಲಿದೆ ಎಂಬ ನಿರೀಕ್ಷೆಯಿದೆ.

ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ಮ್ಯೂಸಿಯಂ ಹಿಂಭಾಗದಲ್ಲಿರುವ ಬೋಟಿಂಗ್ ಪ್ರದೇಶದ ಸಮೀಪ, ಬಾಲಭವನದ ಅರ್ಧ ಎಕರೆ ಜಾಗದಲ್ಲಿ ಈ ಪಾರ್ಕ್ ನಿರ್ಮಾಣವಾಗಲಿದೆ. ನಗರ ಮಧ್ಯಭಾಗದಲ್ಲೇ ಇಂತಹ ಕ್ರೀಡಾ ಸೌಲಭ್ಯ ಲಭ್ಯವಾಗುತ್ತಿರುವುದು ಪೋಷಕರು ಹಾಗೂ ಮಕ್ಕಳಲ್ಲಿ ವಿಶೇಷ ಉತ್ಸಾಹ ಮೂಡಿಸಿದೆ.

ಹೈಬ್ರಿಡ್ ಮಾದರಿಯಲ್ಲಿ ವಿನ್ಯಾಸಗೊಳ್ಳುತ್ತಿರುವ ಈ ಸ್ಕೆಟಿಂಗ್ ಪಾರ್ಕ್‌ನಲ್ಲಿ ಒಂದೇ ಸಮಯದಲ್ಲಿ ಸುಮಾರು 40 ಮಂದಿ ಸ್ಕೆಟಿಂಗ್ ಬೋರ್ಡ್ ಬಳಸುವ ಅವಕಾಶ ಇರಲಿದೆ. ಪ್ರಾರಂಭಿಕ ಹಂತದಿಂದ ಹಿಡಿದು ಉನ್ನತ ಮಟ್ಟದ ತರಬೇತಿ ಪಡೆಯುವವರಿಗೆ ಸೂಕ್ತವಾಗುವಂತೆ ಪಾರ್ಕ್ ರೂಪುಗೊಳ್ಳಲಿದೆ. ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ವಿನ್ಯಾಸ ಸಿದ್ಧಪಡಿಸಲಾಗುತ್ತಿದೆ.

ಇದು ಒಲಿಂಪಿಕ್ಸ್ ಮಟ್ಟದ ಸೌಲಭ್ಯಗಳನ್ನು ಹೊಂದಿರುವ ಉದ್ದೇಶದಿಂದಲೇ ರೂಪುಗೊಳ್ಳುತ್ತಿದೆ. ಐದು ವರ್ಷ ಮೇಲ್ಪಟ್ಟ ಮಕ್ಕಳಲ್ಲಿ ಸ್ಕೆಟಿಂಗ್ ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸುವುದು, ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಭವಿಷ್ಯದ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಕ್ರೀಡಾಪಟುಗಳಾಗಿ ರೂಪಿಸುವುದು ಇದರ ಮುಖ್ಯ ಗುರಿಯಾಗಿದೆ.

ಅಧಿಕಾರಿಗಳ ಮಾಹಿತಿಯಂತೆ, ಜನವರಿ ಅಂತ್ಯದೊಳಗೆ ಕಾಮಗಾರಿ ಆರಂಭವಾಗಲಿದ್ದು, ಎಲ್ಲವೂ ಯೋಜನೆಯಂತೆ ನಡೆದರೆ ಮೇ ತಿಂಗಳ ವೇಳೆಗೆ ಸ್ಕೆಟಿಂಗ್ ಬೋರ್ಡ್ ಪಾರ್ಕ್ ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದೆ. ಬೇಸಿಗೆ ರಜೆಯ ವೇಳೆಗೆ ಮಕ್ಕಳಿಗೆ ಈ ಪಾರ್ಕ್ ದೊಡ್ಡ ಆಕರ್ಷಣೆಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 19T102447.287

ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ

by ಶಾಲಿನಿ ಕೆ. ಡಿ
March 19, 2026 - 10:31 am
0

Untitled design 2026 03 19T093907.354

ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?

by ಶಾಲಿನಿ ಕೆ. ಡಿ
March 19, 2026 - 9:40 am
0

Untitled design 2026 03 19T091120.402

ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
March 19, 2026 - 9:12 am
0

Untitled design 2026 03 19T084614.725

ಯುಗಾದಿ ದಿನ 5 ತಪ್ಪುಗಳನ್ನು ಮಾಡಬೇಡಿ!: ಇಲ್ಲಿ ತಿಳಿದುಕೊಳ್ಳಿ ಶುಭ ರಹಸ್ಯ

by ಶಾಲಿನಿ ಕೆ. ಡಿ
March 19, 2026 - 8:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 19T102447.287
    ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ
    March 19, 2026 | 0
  • Untitled design 2026 03 19T093907.354
    ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?
    March 19, 2026 | 0
  • Untitled design 2026 03 19T091120.402
    ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ
    March 19, 2026 | 0
  • Untitled design 2026 03 19T075109.543
    ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಬೆಂಗಳೂರು ಸೇರಿ 15 ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ
    March 19, 2026 | 0
  • Untitled design 2026 03 18T232556.488
    ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version