ತೀವ್ರ ಚಳಿಗೆ ತತ್ತಿಸಿದ ಉ.ಕರ್ನಾಟಕ: 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Untitled design 2025 12 14T223605.026

ವಿಜಯಪುರ,ಡಿ.14: ರಾಜ್ಯದ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳು ಕಳೆದ ಒಂದು ದಶಕದಲ್ಲೇ ಅತ್ಯಂತ ತೀವ್ರವಾದ ಚಳಿಯ ವಾತಾವರಣಕ್ಕೆ ಥಂಡಾ ಹೊಡೆದಿವೆ. ಕನಿಷ್ಠ ತಾಪಮಾನವು ದಾಖಲೆಯ ಮಟ್ಟಕ್ಕೆ ಕುಸಿದಿದ್ದು, ಜನಜೀವನ ತತ್ತರಿಸಿ ಹೋಗಿದೆ. ಈ ತೀವ್ರ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (IMD) ಯು ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದ ಒಟ್ಟು 9 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿ, ಮುಂದಿನ ಎರಡು ದಿನಗಳ ಕಾಲ ಜನರಿಗೆ ತೀವ್ರ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

ಈ ಬಾರಿ ಚಳಿಗಾಲದ ಆರಂಭದಲ್ಲೇ ಉತ್ತರ ಕರ್ನಾಟಕದಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಕುಸಿತವು ಕಳೆದ 10 ವರ್ಷಗಳಲ್ಲಿ ಎರಡನೆಯ ಕನಿಷ್ಠ ಮಟ್ಟವಾಗಿದೆ. ಪ್ರಮುಖವಾಗಿ ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ರಾಜ್ಯದಲ್ಲಿಯೇ ಅತಿ ಕಡಿಮೆ ತಾಪಮಾನ ದಾಖಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಕೇವಲ 7 ಡಿಗ್ರಿ ಸೆಲ್ಸಿಯಸ್‌ (7°C) ತಾಪಮಾನ ದಾಖಲಾಗಿದ್ದು, ಜನರ ದೈನಂದಿನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. 2023ರಲ್ಲಿ ವಿಜಯಪುರದಲ್ಲಿ 6.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಈ ಬಾರಿ ಮತ್ತೆ ತಾಪಮಾನ ಕನಿಷ್ಠ ಮಟ್ಟಕ್ಕೆ ಇಳಿದಿರುವುದು ಕಂಡುಬಂದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಎರಡೂ ದಿನಗಳ ಕಾಲ ಶೀತಗಾಳಿ ಬೀಸಲಿದ್ದು, ತಾಪಮಾನವು 6 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುವ ಸಾಧ್ಯತೆ ಇದೆ.

ಭಾರೀ ಚಳಿಯ ಹಿನ್ನೆಲೆಯಲ್ಲಿ ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದ ಒಂಬತ್ತು ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಅಲರ್ಟ್ ತೀವ್ರ ಎಚ್ಚರಿಕೆಯ ಸಂಕೇತವಾಗಿದ್ದು, ಜನರು ಅಪಾಯವನ್ನು ಎದುರಿಸುವ ಸಾಧ್ಯತೆ ಇದೆ ಎಂದು ಸೂಚಿಸಲಾಗಿದೆ.

ಆರೆಂಜ್ ಅಲರ್ಟ್ ಘೋಷಿಸಲಾದ ಜಿಲ್ಲೆಗಳು ಕಲಬುರ್ಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಈ ಎಲ್ಲ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ, ಅಂದರೆ ಡಿಸೆಂಬರ್ 16ರವರೆಗೂ ತೀವ್ರ ಚಳಿ ಮತ್ತು ಶೀತಗಾಳಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಸದಾ ಬಿಸಿಲಿರುವ ಉತ್ತರ ಕರ್ನಾಟಕ ಭಾಗದ ಜನರಿಗೆ ಈ ಶೀತಗಾಳಿ ತೀವ್ರ ತೊಂದರೆಯನ್ನುಂಟು ಮಾಡಿದೆ. ಹಿರಿಯರು ಮತ್ತು ಚಿಕ್ಕ ಮಕ್ಕಳು ಹೆಚ್ಚು ಜಾಗರೂಕತೆಯಿಂದ ಇರಬೇಕಿದೆ.

ತೀವ್ರ ಚಳಿಯಿಂದ ಜನರನ್ನು ರಕ್ಷಿಸಲು ಜಿಲ್ಲಾಡಳಿತವು ಸ್ಥಳೀಯವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮನವಿ ಮಾಡಿದೆ. ಹವಾಮಾನ ತಜ್ಞರು ಮತ್ತು ವೈದ್ಯರು ಈ ಕೆಳಗಿನ ಸಲಹೆಗಳನ್ನು ನೀಡಿದ್ದಾರೆ:

ಒಟ್ಟಿನಲ್ಲಿ, ಅಸಹಜವಾಗಿ ಕುಸಿದಿರುವ ತಾಪಮಾನವು ಉತ್ತರ ಕರ್ನಾಟಕದ ಜನರಿಗೆ ತೀವ್ರ ಸವಾಲನ್ನು ಒಡ್ಡಿದೆ. ಮುಂದಿನ 48 ಗಂಟೆಗಳ ಕಾಲ ಪರಿಸ್ಥಿತಿ ಇನ್ನೂ ಬಿಗಡಾಯಿಸುವ ಸಾಧ್ಯತೆ ಇರುವುದರಿಂದ, ಜನರು ಮತ್ತು ಜಿಲ್ಲಾಡಳಿತವು ಎಚ್ಚರಿಕೆಯಿಂದ ಇರುವುದು ಅನಿವಾರ್ಯವಾಗಿದೆ.

Exit mobile version