ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ಫಿಕ್ಸ್..! ಸಂಪುಟ ಅಷ್ಟೇ ಅಲ್ಲ ಸಿಎಂ ಬದಲಾಗೋದು ಪಕ್ಕಾ..?

Untitled design 2025 10 22t172812.433

ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವವನ್ನು ಕೇಂದ್ರೀಕರಿಸಿ ‘ನವೆಂಬರ್ ಕ್ರಾಂತಿ’ ಚರ್ಚೆಗಳು ಪ್ರಚಲಿತದಲ್ಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಯು ಈ ಚರ್ಚೆಗಳಿಗೆ ಮತ್ತಷ್ಟು ಕಾರಣವಾಗಿದೆ.

ಈ ಬಗ್ಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ , ವೈಚಾರಿಕವಾಗಿ ಪ್ರಗತಿಪರ ತತ್ವ-ಸಿದ್ಧಾಂತ ಇರುವ ನಾಯಕರು ಪಕ್ಷಕ್ಕೆ ಬೇಕು. ಇದರ ಜೊತೆಗೇ, “ಸತೀಶ್ ಜಾರಕಿಹೊಳಿಯವರು ಈ ಜವಾಬ್ದಾರಿ ನಿಭಾಯಿಸುತ್ತಾರೆ” ಮತ್ತು “ಜಾರಕಿಹೊಳಿ ಅವರು ಮಾದರಿಯಾಗಿ ನಮ್ಮನ್ನು ಮುನ್ನಡೆಸುತ್ತಾರೆ” ಎಂದು ಹೇಳಿದ್ದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ದಲಿತ ಸಮುದಾಯದ ಪ್ರಮುಖ ನಾಯಕರಾದ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂದು ಸುಳಿವು ನೀಡಿದಂತೆ ಕಾಣುತ್ತದೆ.

ಇತ್ತ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಲವಾರು ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕಾಗಿ ದೇಗುಲಗಳಿಗೆ ಭೇಟಿ ನೀಡಿ ಡಿಕೆಶಿ ಪೂಜೆ ಸಲ್ಲಿಸಿತ್ತಿದ್ದಾರೆ ಎಂದು ಗಾಸಿಪ್‌ಗಳು ಕೇಳಿಬಂದಿವೆ.

ನವೆಂಬರ್‌ ಕ್ರಾಂತಿ ಎಂದರೆ ಏನು ಎಂಬುದನ್ನ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ, ರಾಜಕೀಯದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನದಲ್ಲಿ ಬದಲಾವಣೆ, ಪ್ರಸ್ತುತ ಸಚಿವ ಸಂಪುಟದಲ್ಲಿ ಬದಲಾವಣೆಯಾಗಬಹುದು ಅಥವಾ ಹೊಸ ಶಾಸಕರಿಗೆ ಅವಕಾಶ ನೀಡಬಹುದು. ಅಥವಾ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಪದವಿಯಲ್ಲಿ ಬದಲಾವಣೆ ಆಗಬಹುದು ಎಂದು ರಾಜಕೀಯ ವಲಯಗಳಲ್ಲಿ ಕೇಳಿರುತ್ತಿದೆ.

ಯತೀಂದ್ರ ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಒಳಗೆ ನಾಯಕತ್ವದ ಭವಿಷ್ಯವನ್ನು ಕುರಿತು ನಡೆಯುತ್ತಿರುವ ಚರ್ಚೆಗೆ ಒಂದು ಹೊಸ ಆಯಾಮವನ್ನು ಸೃಷ್ಠಿಸಿದೆ. ಸತೀಶ್ ಜಾರಕಿಹೊಳಿ ಮತ್ತು ಡಿ.ಕೆ. ಶಿವಕುಮಾರ್ ಅವರ ನಡುವೆ ನೇರ ಪೈಪೋಟಿ ಇದೆಯೇ ಅಥವಾ ಇದು ಪಕ್ಷದ ಒಳಗಿನ ವಿವಿಧ ಗುಂಪುಗಳ ಕುತಂತ್ರವೇ ಎಂಬುದನ್ನ ಕಾದು ನೋಡಬೇಕಿದೆ.

Exit mobile version