ಚಿತ್ರದುರ್ಗ ಬಸ್ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ

Untitled design 2025 12 25T090104.601

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತವು ದೇಶವನ್ನೇ ಬೆಚ್ಚಿಬೀಳಿಸಿದೆ. 17 ಮಂದಿ ಸಜೀವ ದಹನವಾದ ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಸಂಕಷ್ಟದ ಸಮಯದಲ್ಲಿ ಮೃತರ ಕುಟುಂಬಗಳ ಜೊತೆ ನಿಲ್ಲುವ ಭರವಸೆ ನೀಡಿರುವ ಅವರು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಆರ್ಥಿಕ ನೆರವನ್ನು ಘೋಷಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣ ‘X’ ಮೂಲಕ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಕರ್ನಾಟಕದ ಚಿತ್ರದುರ್ಗದಲ್ಲಿ ಸಂಭವಿಸಿದ ರಸ್ತೆ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳನ್ನು ಸೂಚಿಸುತ್ತೇನೆ. ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ಬರೆದುಕೊಂಡಿದ್ದಾರೆ.

ಅಲ್ಲದೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 21ಕ್ಕೂ ಹೆಚ್ಚು ಪ್ರಯಾಣಿಕರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ:

ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪ್ರಧಾನಮಂತ್ರಿಯವರು ಆರ್ಥಿಕ ನೆರವು ಘೋಷಿಸಿದ್ದಾರೆ.

ಈ ಮೊತ್ತವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಪಾವತಿಸಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಘಟನೆಯ ಹಿನ್ನೆಲೆ:

ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಬಸ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ರಭಸಕ್ಕೆ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿತ್ತು. ಪರಿಣಾಮ 10ಕ್ಕೂ ಹೆಚ್ಚು ಜನರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದರು. ಲಾರಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಈ ಮಹಾ ದುರಂತಕ್ಕೆ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇನ್ನೂ ಗಾಯಾಳುಗಳ ಪರಿಸ್ಥಿತಿ ಚಿಂತಾಜನಕವಾಗಿರುವುದರಿಂದ ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಈ ಅಪಘಾತದಿಂದ ಬಸ್‌ನ ಚಾಲಕ ಹಾಗೂ ನಿರ್ವಹಕ ಗ್ರೇಟ್‌ ಎಸ್ಕೇಪ್‌ ಆಗಿದ್ದಾರೆ. ಇನ್ನೂ ಘಟನೆ ನಡೆದ ಸ್ಥಳದಲ್ಲಿ 30 ಕೀ.ಮಿ ರಸ್ತೆ ಸಂಪೂರ್ಣ ಟ್ರಾಪಿಕ್‌ ಜಾಮ್‌ ಆಗಿತ್ತು, ಅದನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸಧ್ಯ ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.

Exit mobile version