• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 15, 2026 - 8:05 pm
in ಕರ್ನಾಟಕ
0 0
0
11 (9)

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಒಟ್ಟು 85 ಪದಕಗಳನ್ನು ಗೆದ್ದ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿಯಾಗಿ ಅಭಿನಂದಿಸಿದರು. ಪದಕ ವಿಜೇತ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ, ಅವರ ಸಾಧನೆಯನ್ನು ಶ್ಲಾಘಿಸಿ ಭವಿಷ್ಯದ ಕ್ರೀಡಾ ಯಶಸ್ಸಿಗೆ ಶುಭ ಹಾರೈಸಿದರು.

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಕ್ರೀಡಾಪಟುಗಳು ತಮ್ಮ ಸಹಿ ಹಾಕಿದ ಜೆರ್ಸಿಗಳನ್ನು ಹಾಗೂ ಸಹಿ ಮಾಡಿದ ಹಾಕಿ ಸ್ಟಿಕ್‌ ಅನ್ನು ಅವರಿಗೆ ಹಸ್ತಾಂತರಿಸಿದರು. ಇದೇ ವೇಳೆ ಕ್ರೀಡಾಪಟುಗಳು ಪ್ರಧಾನಿಗೆ ಶಲ್ಯ ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಅವರು ಆತ್ಮೀಯವಾಗಿ ಸಂವಾದ ನಡೆಸಿದರು.

RelatedPosts

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನಾಳೆ ಪ್ರಮಾಣವಚನ ಸ್ವೀಕಾರ

ADVERTISEMENT
ADVERTISEMENT

ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 2026ರ ಏಷ್ಯನ್ ಗೇಮ್ಸ್ ಭಾರತಕ್ಕೆ ಹಲವು ಕಾರಣಗಳಿಂದ ಸ್ಮರಣೀಯವಾಗಿದೆ ಎಂದು ಹೇಳಿದರು. ಪುರುಷರ ಹಾಗೂ ಮಹಿಳೆಯರ ಹಾಕಿ ತಂಡಗಳು ಚಿನ್ನದ ಪದಕ ಗೆದ್ದಿರುವುದು ವಿಶೇಷ ಸಾಧನೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಅದರಲ್ಲೂ ಮಹಿಳಾ ಹಾಕಿ ತಂಡವು ಬರೋಬ್ಬರಿ 44 ವರ್ಷಗಳ ಸುದೀರ್ಘ ಕಾಯುವಿಕೆಗೆ ತೆರೆ ಎಳೆದು ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಕ್ರಿಕೆಟ್‌ನಲ್ಲಿಯೂ ಭಾರತದ ಪುರುಷ ಮತ್ತು ಮಹಿಳಾ ತಂಡಗಳು ಸತತ ಎರಡನೇ ಬಾರಿಗೆ ಪದಕಗಳನ್ನು ಗೆದ್ದು ಹಿಂದಿನ ಸಾಧನೆಯನ್ನು ಪುನರಾವರ್ತಿಸಿವೆ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದರು. ಕಬಡ್ಡಿಯಲ್ಲೂ ಭಾರತದ ಪುರುಷ ಮತ್ತು ಮಹಿಳಾ ತಂಡಗಳು ಚಿನ್ನದ ಪದಕ ಗೆದ್ದು ದೇಶದ ಕೀರ್ತಿ ಹೆಚ್ಚಿಸಿವೆ ಎಂದು ಅವರು ಶ್ಲಾಘಿಸಿದರು.

ಅರ್ಚರಿಯಲ್ಲಿ ಭಾರತೀಯ ಕ್ರೀಡಾಪಟುಗಳು ಐದು ಚಿನ್ನದ ಪದಕಗಳನ್ನು ಗೆದ್ದಿರುವುದನ್ನು ಪ್ರಧಾನಿ ವಿಶೇಷವಾಗಿ ಉಲ್ಲೇಖಿಸಿದರು. ಶೂಟಿಂಗ್‌ನಲ್ಲಿ ಭಾರತದ ಕ್ರೀಡಾಪಟುಗಳ ಅದ್ಭುತ ಪ್ರದರ್ಶನವನ್ನು ಮೆಚ್ಚಿದ ಅವರು, ಬಾಕ್ಸಿಂಗ್ ಮತ್ತು ಕುಸ್ತಿಯಲ್ಲಿಯೂ ಪ್ರಮುಖ ಯಶಸ್ಸು ದೊರೆತಿದೆ ಎಂದರು.

ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. 28 ವರ್ಷಗಳ ಬಳಿಕ ಭಾರತ ವೇಟ್‌ಲಿಫ್ಟಿಂಗ್‌ನಲ್ಲಿ ಪದಕ ಗೆದ್ದಿರುವುದು ಮತ್ತೊಂದು ಮಹತ್ವದ ಸಾಧನೆ ಎಂದು ಪ್ರಧಾನಿ ಮೋದಿ ಹೇಳಿದರು. ದೇಶದ ಕ್ರೀಡಾಪಟುಗಳ ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸವನ್ನು ಅವರು ಅಭಿನಂದಿಸಿದರು.

ಐಚಿ-ನಗೋಯಾ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಟ್ಟು 21 ಚಿನ್ನ, 27 ಬೆಳ್ಳಿ ಮತ್ತು 37 ಕಂಚು ಸೇರಿದಂತೆ 85 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಮೂರು ವರ್ಷಗಳ ಹಿಂದೆ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 106 ಪದಕಗಳನ್ನು ಗೆದ್ದು ಐತಿಹಾಸಿಕ ದಾಖಲೆ ನಿರ್ಮಿಸಿತ್ತು. ಈ ಬಾರಿ ಒಟ್ಟು ಪದಕಗಳ ಸಂಖ್ಯೆ ಕಡಿಮೆಯಾಗಿದ್ದರೂ, 85 ಪದಕಗಳ ಸಾಧನೆಯು ಭಾರತದ ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಎರಡನೇ ಅತ್ಯಂತ ಯಶಸ್ವಿ ಅಭಿಯಾನವಾಗಿ ದಾಖಲಾಗಿದೆ.

ಭಾರತೀಯ ಕ್ರೀಡಾಪಟುಗಳ ಈ ಸಾಧನೆ ಮುಂದಿನ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಿಗೆ ಹೊಸ ಉತ್ಸಾಹ ನೀಡಲಿದೆ ಎಂದು ಪ್ರಧಾನಿ ಮೋದಿ ಶುಭ ಹಾರೈಸಿದರು. ದೇಶದ ಯುವ ಕ್ರೀಡಾಪಟುಗಳು ಇದೇ ರೀತಿಯ ಪರಿಶ್ರಮ ಮತ್ತು ಆತ್ಮವಿಶ್ವಾಸದೊಂದಿಗೆ ಮುನ್ನಡೆಯಬೇಕು ಎಂದು ಅವರು ಕರೆ ನೀಡಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (10)
    ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!
    October 15, 2026 | 0
  • 11 (8)
    ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!
    October 15, 2026 | 0
  • 11 (4)
    ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ
    October 15, 2026 | 0
  • 11 (2)
    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನಾಳೆ ಪ್ರಮಾಣವಚನ ಸ್ವೀಕಾರ
    October 15, 2026 | 0
  • ₹111.68 (1)
    ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version