ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ತಮ್ಮ ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಮೋದಿ, ಇಂದು ನಾವು ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವಾಗ, ಕರ್ನಾಟಕದ ಜನರ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ಗೌರವಿಸುತ್ತೇವೆ.
ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ…
— Narendra Modi (@narendramodi) November 1, 2025
ಸಾಹಿತ್ಯ, ಕಲೆ, ಸಂಗೀತ ಮತ್ತು ಇತರ ಕ್ಷೇತ್ರಗಳಲ್ಲಿ ಪ್ರಕಾಶಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ನಾವು ಆಚರಿಸುತ್ತೇವೆ. ಈ ರಾಜ್ಯ ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.





