ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ: ಕನ್ನಡದಲ್ಲೇ ತಮ್ಮ ಖುಷಿ ಹಂಚಿಕೊಂಡ ನಮೋ

Untitled design 2025 11 27T213858.628

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರ ಶುಕ್ರವಾರ ಬೆಳಗ್ಗೆ ಉಡುಪಿಯ ಐತಿಹಾಸಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ನಡೆಯಲಿರುವ ‘ಲಕ್ಷ ಕಂಠ ಗೀತಾ ಪಾರಾಯಣ’ ಮಹಾಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬೃಹತ್ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲ ವರ್ಗದ ಜನರು ಒಟ್ಟಾಗಿ ಭಗವದ್ಗೀತೆಯ ಪಠಣ ಮಾಡಲಿದ್ದು, ಇದನ್ನು ವಿಶ್ವದ ಅತಿದೊಡ್ಡ ಗೀತಾ ಪಠಣ ಕಾರ್ಯಕ್ರಮವೆಂದೇ ಕರೆಯಲಾಗುತ್ತಿದೆ.

ಪ್ರಧಾನಿ ಮೋದಿ ಅವರು ಈ ಭೇಟಿಯ ಬಗ್ಗೆ ಎಕ್ಸ್‌ನಲ್ಲಿ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. “ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನ್ನ ಬದುಕಿನ ಗೌರವದ ಕ್ಷಣ. ಈ ಮಠವು ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಸಾಂಸ್ಕೃತಿಕ-ಆಧ್ಯಾತ್ಮಿಕ ಕೇಂದ್ರವಾಗಿದೆ. ಸಮಾಜ ಸೇವೆ, ಶಿಕ್ಷಣ ಮತ್ತು ಆಧ್ಯಾತ್ಮಿಕತೆಯಲ್ಲಿ ಇದು ಮುಂಚೂಣಿಯಲ್ಲಿದೆ ಎಂದು ಬರೆದುಕೊಂಡಿದ್ದಾರೆ.

ಪ್ರಯಾಣ ಮಾರ್ಗ ಮತ್ತು ಕಾರ್ಯಕ್ರಮದ ವಿವರ

ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಮೂರು ಹಂತದ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿದೆ:

ಈ ಭೇಟಿಯಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಸಂಭ್ರಮ ಮನೆ ಮಾಡಿದೆ. ದೇಶದ ಪ್ರಧಾನಿ ಶ್ರೀಕೃಷ್ಣ ಮಠಕ್ಕೆ ಬರುತ್ತಿರುವುದು ಸ್ಥಳೀಯರಿಗೆ ಹೆಚ್ಚಿ ಸಂತೋಷ ತಂದುಕೊಟ್ಟಿದೆ.

Exit mobile version