• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ

ಕವಿತಾ by ಕವಿತಾ
July 24, 2026 - 3:26 pm
in ಕರ್ನಾಟಕ, ಕ್ರೀಡೆ
0 0
0
Untitled design (17)

ಬೆಂಗಳೂರು, (ಜುಲೈ 24): ದೇಶದಲ್ಲಿರುವ ವೈಮಾನಿಕ ತರಬೇತಿ ಶಾಲೆಗಳಲ್ಲಿ ಅತ್ಯಂತ ಹಳೆಯದಾಗಿರುವ ಹಾಗೂ ರಾಜ್ಯ ಸರ್ಕಾರ ನಡೆಸುವ ಅಗ್ರಮಾನ್ಯ ವೈಮಾನಿಕ ತರಬೇತಿ ಶಾಲೆಯಾಗಿರುವ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆಗೆ  (GFTS) ಮರುಜೀವ ನೀಡಿ ಮತ್ತೇ ಪ್ರಸ್ತುತ ಸಾಲಿನಲ್ಲಿ ಪುನಾರಾರಂಭ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು, ಕಂದಾಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಮುಜರಾಯಿ ಇಲಾಖೆ ಸಚಿವರಾದ  ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.

ಈ ಕುರಿತಂತೆ ಇಂದು ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆಯ ಪರಿಶೀಲನೆ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಬಡ ಮಕ್ಕಳು ಹಾಗೂ ಮಧ್ಯಮ ವರ್ಗದ ಮಕ್ಕಳ ವೈಮಾನಿಕ ಕನಸನ್ನು ನನಸು ಮಾಡಲು ಸರ್ಕಾರದ ವತಿಯಿಂದ 1940ರಲ್ಲಿ ಪ್ರಾರಂಭವಾದ ಈ ಸರ್ಕಾರಿ ವೈಮಾನಿಕ ತರಬೇತಿ ಶಾಲೆಯ (GFTS) ಪರವಾನಗಿಯು ಡಿಸೆಂಬರ್ 2023ರಲ್ಲಿ ಕಾರಣಾಂತರಗಳಿಂದ ರದ್ದಾಗಿತ್ತು. ಇದೀಗ ಕೇಂದ್ರ ಸರ್ಕಾರದ DGCA ವತಿಯಿಂದ 16.07.2026 ರಿಂದ 15.07.2031 ರವರೆಗೆ  (5 ವರ್ಷಗಳು) ಪರವಾನಿಗೆ ದೊರಕಿದ್ದು, ಶಾಲೆಯನ್ನು ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ನವೀಕರಿಸಲಾಗಿದೆ ಎಂದರು.

RelatedPosts

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ADVERTISEMENT
ADVERTISEMENT

ಸದರಿ ಸರ್ಕಾರಿ ವಿಮಾನ ಚಾಲನಾ ತರಬೇತಿ ಶಾಲೆಯಲ್ಲಿ ಒಬ್ಬರು ಮುಖ್ಯ ವಿಮಾನ ಬೋಧಕರು (CFI) ಹಾಗೂ ಇಬ್ಬರು ವಿಮಾನ ಬೋಧಕರ ನೇಮಕವಾಗಿದೆ. ಇಲ್ಲಿ ಒಟ್ಟು 5 ವಿಮಾನಗಳಿದ್ದು, ಅವುಗಳಲ್ಲಿ 3 ವಿಮಾನಗಳು (Cessna 172P, Cessna 172S, Tecnam P 2006T) ಪೂರ್ಣ ಹಾರಾಟ ಸುಸ್ಥಿತಿಯಲ್ಲಿವೆ. ಉಳಿದೆರೆಡು ವಿಮಾನಗಳನ್ನು ತುರ್ತಾಗಿ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಹಿಂದಿನಂತೆ PPL (ಖಾಸಗಿ ಪೈಲಟ್), CPL (ವಾಣಿಜ್ಯ ಪೈಲಟ್) ಹಾಗೂ Multi Engine Endorsement ತರಬೇತಿ ಮುಂದುವರಿಯಲಿದೆ.  ಒಟ್ಟು 30 ವಿದ್ಯಾರ್ಥಿಗಳ ತರಬೇತಿ ಸಾಮರ್ಥ್ಯವಿದ್ದು, ಹೊಸ ವಿದ್ಯಾರ್ಥಿಗಳ ಪ್ರವೇಶಾತಿಯನ್ನು ಶೀಘ್ರದಲ್ಲಿ ಆರಂಭಿಸಲಾಗುವುದು ಎಂದು ಹೇಳಿದರು.

ದೇಶದದಲ್ಲಿ ವೈಮಾನಿಕ ಸೇವೆ ನೀಡುತ್ತಿರುವ ಹಲವಾರು ಖಾಸಗಿ ಸಂಸ್ಥೆಗಳು ಸಾವಿರಾರು ಹೊಸ ವಿಮಾನಗಳ ಖರೀದಿಗೆ ಮುಂದಾಗಿವೆ,   ಭವಿಷ್ಯದಲ್ಲಿ 35000 ಕ್ಕೂ ಹೆಚ್ಚು ಪೈಲೆಟ್ ಗಳ ಬೇಡಿಕೆ ಸೃಷ್ಟಿಯಾಗಲಿದೆ ಎಂದು ತಜ್ಞರು ತಿಳಿಸಿರುತ್ತಾರೆ. ಬೇಡಿಕೆಗೆ ತಕ್ಕಂತೆ ಖಾಸಗಿ ವೈಮಾನಿಕ ತರಬೇತಿ ಶಾಲೆಗಳಲ್ಲಿ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಕೋಟಿಗಟ್ಟಲೇ ಹಣ ನೀಡಲು ಸಾಧ್ಯವಾಗುವುದಿಲ್ಲ, ಇದನ್ನು ಮನಗಂಡು ಲಕ್ಷಗಳಲ್ಲಿ ಮಧ್ಯಮ ವರ್ಗದ ಮಕ್ಕಳಿಗೆ ತರಬೇತಿ ನೀಡಲು ಸರ್ಕಾರ ಮುಂದಾಗಿದೆ.

DGCA ಅಧಿಕಾರಿಗಳು ರನ್ವೇ ಸುರಕ್ಷತೆ ಹಾಗೂ ಹಾರಾಟ ಪರೀಕ್ಷೆ ನಡೆಸಿ ತೃಪ್ತಿಕರವಾಗಿರುವುದನ್ನು ದೃಢಪಡಿಸಿರುವುದರಿಂದ ತರಬೇತಿಯನ್ನು ಸಂಪೂರ್ಣ ಸುರಕ್ಷಿತವಾಗಿ ನಡೆಸಲಾಗುತ್ತದೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆವತಿಯಿಂದ ವಿದ್ಯಾರ್ಥಿವೇತನ ಸೌಲಭ್ಯ ಸಹ ಇರುತ್ತದೆ ಎಂದು ತಿಳಿಸಿದರು.

ಈ ಶಾಲೆಯ ಸುತ್ತಲಿನ 2.7 ಕಿ.ಮೀ  ಪ್ರದೇಶ ವ್ಯಾಪ್ತಿಯಲ್ಲಿ 45 ಮೀಟರ್ ಎತ್ತರಕ್ಕಿಂತ ಹೆಚ್ಚಿನ ಎತ್ತರದ ಕಟ್ಟಡಗಳನ್ನು ಕಟ್ಟಲು ಅವಕಾಶವಿರುವುದಿಲ್ಲ, ಶಾಲೆಯ ಪಕ್ಕದಲ್ಲಿರುವ 10 ಎಕ್ಕರೆ ಭೂಮಿಯನ್ನು ಸುಪರ್ದಿಗೆ ತೆಗೆದುಕೊಂಡಲ್ಲಿ ಮತ್ತಷ್ಟು ವಿಸ್ತರಿಸಬಹುದಾಗಿದೆ ಎನ್ನುವ ಉದ್ದೇಶದಿಂದ ಈಗಗಾಗಲೇ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಮೈಸೂರು ಮತ್ತು ಹಾಸನ ವಿಮಾನ ನಿಲ್ದಾಣಗಳನ್ನು ತರಬೇತಿಗೆ ಬಳಸಿಕೊಳ್ಳಲು ಯೋಜಿಸಲಾಗುತ್ತಿದ್ದು, ಈ ಸಂಸ್ಥೆ ಮುಚ್ಚುವ ಯಾವುದೇ ಉದ್ದೇಶವಿಲ್ಲ ಎಂದರು.

ಮರುನಾಮಕರಣ:

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ಮತ್ತಷ್ಟು ಕ್ರಿಯಾಶೀಲಗೊಳಿಸುವ ಉದ್ದೇಶದಿಂದ ಯುವ ಸಬಲೀಕರಣ ಹಾಗೂ ಕ್ರೀಡಾ ಮತ್ತು ನಾಗರೀಕ ವಿಮಾನಯಾನ ಇಲಾಖೆ ಎಂದು ನಾಮಕರಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್ ಹಾಗೂ 5 ಲಕ್ಷ ಸಹಾಯ ಧನ :

ಪೋಲ್ ವಾಲ್ಟ್ ಕ್ರೀಡೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಅಮೋಘ ಸಾಧನೆ ಮಾಡುವ ಮೂಲಕ ಜಪಾನ್ ನಲ್ಲಿ ನಡೆಯಲಿರುವ ಏಷಿಯನ್ ಗೇಮ್ಸ್ ಸ್ಪರ್ಧೆಗೆ ತಯಾರಿ ನಡೆಸಿರುವ ಶಿವಮೊಗ್ಗ ಮೂಲದ ಸಿಂಧುಶ್ರೀ ಗಣೇಶ್ ಅವರಿಗೆ ಇದೇ ಸಂದರ್ಭದಲ್ಲಿ ತಲಾ ಎರಡೂವರೆ ಲಕ್ಷ ರೂ ಬೆಲೆ ಬಾಳುವ ಅಂತರರಾಷ್ಟ್ರೀಯ ಗುಣಮಟ್ಟದ 3 ಪೋಲ್ ಗಳನ್ನು ನೀಡಿ ಗೌರವಿಸಿದರು.

ಶಿವಮೊಗ್ಗ ಮೂಲದ ಸಿಂಧುಶ್ರೀ ಬಹಳ ಬಡತನದಿಂದ ಬಂದ ಹೆಣ್ಣು ಮಗುವೊಂದನ್ನು ಇಂದು ಕ್ರೀಡಾ ಇಲಾಖೆಯ ಮೂಲಕ ಅಂತರರಾಷ್ಟ್ರೀಯ ಕ್ರೀಡಾಪಟುವನ್ನಾಗಿ ತಯಾರಿ ಮಾಡಲಾಗಿದೆ, ಪೋಲ್ ವಾಲ್ಟ್ ಕ್ರೀಡೆಯಲ್ಲಿ 4.02 ಮೀಟರ್ ಎತ್ತರ ಕ್ಲೀಯರ್ ಮಾಡುವ ಮೂಲಕ, ಜಪಾನ್ ನಲ್ಲಿ ನಡೆಯಲಿರುವ ಏಷಿಯನ್ ಗೇಮ್ಸ್ ಗೆ ಕ್ವಾಲಿಪೈ ಆಗಿದ್ದಾರೆ, ಕ್ರೀಡಾ ಇಲಾಖೆವತಿಯಿಂದ ಅಗತ್ಯವಿರುವ  ಅಂತರರಾಷ್ಟ್ರೀಯ ಗುಣಮಟ್ಟದ 3 ಕೋಲುಗಳನ್ನು ವಿದೇಶದಿಂದ ತರಿಸಿ ಕೊಡಲಾಗಿದೆ. ಇದರೊಂದಿಗೆ 5 ಲಕ್ಷ ಸಹಾಯ ಧನ ಒದಗಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಯುಕ್ತರಾದ ಎಮ್ ಎನ್ ಅನುಚೇತ್ ಹಾಗೂ ಸರ್ಕಾರಿ ವೈಮಾನಿಕ ತರಬೇತಿ ಶಾಲೆಯ ಪ್ರಾಂಶುಪಾಲ ಬಸವರಾಜ್ ಅವರು ಉಪಸ್ಥಿತರಿದ್ದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T153658.306

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

by ಶಾಲಿನಿ ಕೆ. ಡಿ
September 19, 2026 - 3:37 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)
    ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)
    ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್
    September 19, 2026 | 0
  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
  • ಹ್ಮೋ (45)
    ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version