ರಾಜ್ಯಕ್ಕೆ ದ್ವಿತೀಯ ಪಿಯುಸಿ ಟಾಪರ್ಸ್ ಯಾರು?

Untitled design 2025 04 08t162300.573

ಬೆಂಗಳೂರು, ಏಪ್ರಿಲ್ 8: ರಾಜ್ಯದ ಪ್ರಿ-ಯುನಿವರ್ಸಿಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆಗಳಿಂದ ರಾಜ್ಯದಾದ್ಯಂತ ಸಂಭ್ರಮದ ವಾತಾವರಣವಿದೆ. ಈ ಬಾರಿ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಮುಂಚೂಣಿಗೆ ಬಂದು ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ.

ಕಲಾ ವಿಭಾಗ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡ್ತಿದ್ದ ಸಂಜನಾಬಾಯಿ ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ. ಹುಬ್ಬಳ್ಳಿಯ ಸರ್ಕಾರಿ‌ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ‌ ನಾಗವೇಣಿ 600 ಅಂಕಗಳಿಗೆ 593 ಅಂಕಪಡೆದುಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ವಿದ್ಯಾರ್ಥಿ ಮಲ್ಕಣ್ಣ ತಳವಾರ 600 ಅಂಕಗಳಿಗೆ 589 ಅಂಕ ಪಡೆದಿದ್ದಾರೆ.

ವಾಣಿಜ್ಯ ವಿಭಾಗ

ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ ಎಸ್ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 599 ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿದ್ದಾರೆ. ರಾಮನಗರ ಮಾಗಡಿ ತಾಲೂಕಿನ ಬಿಜಿಎಸ್ ಕಾಲೇಜಿನ ವಿದ್ಯಾರ್ಥಿ ಸ್ವರೂಪ್ ಎಂ. ರಾಜ್ಯಕ್ಕೆ 7ನೇ ಸ್ಥಾನ ಪಡೆದಿದ್ದಾರೆ. ಕೋಲಾರ ನಗರದ ಮಹಿಳಾ ಸಮಾಜ ಕಾಲೇಜಿನ ಭಾರ್ಗವಿ 600 ಅಂಕಕ್ಕೆ 597 ಅಂಕ ಗಳಿಸಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪದ ಕಾಲೇಜು ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿ 600ಕ್ಕೆ 598 ಅಂಕ ಪಡೆದಿದ್ದಾರೆ. ತುಮಕೂರಿನ ವಿದ್ಯಾನಿಧಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಶ್ರೀ ಲಕ್ಷ್ಮೀ 600 ಅಂಕಗಳಿಗೆ 596 ಅಂಕ ಪಡೆದಿದ್ದಾರೆ.

ವಿಜ್ಞಾನ ವಿಭಾಗ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಶ್ರೇಯಾ ಹಾಗೂ ಅಮೂಲ್ಯ ಕಾಮತ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 597 ಅಂಕ ಗಳಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ವಿದ್ಯಾರ್ಥಿನಿ ದೀಕ್ಷಾ.ಆರ್ 600 ಕ್ಕೆ 599 ಅಂಕ ಪಡೆದಿದ್ದಾರೆ. ದಾವಣಗೆರೆ ಸರ್ ಎಂವಿ ಕಾಲೇಜಿನ ವಿದ್ಯಾರ್ಥಿನಿ ಅದಿತಿ ಅಂಗಡಿ 600ಕ್ಕೆ 597 ಅಂಕ ಪಡೆದಿದ್ದಾರೆ. ಚಿಕ್ಕಬಳ್ಳಾಪುರದ ಎಸ್ ಜೆಸಿಐಟಿ ಕಾಲೇಜು ವಿದ್ಯಾರ್ಥಿ ಯಶಸ್ ಗೌಡ ವಿಜ್ಙಾನ ವಿಭಾಗದಲ್ಲಿ 600 ಕ್ಕೆ 596 ಅಂಕ ಗಳಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
Exit mobile version