• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 25, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೊಲೀಸರನ್ನು ಹರಕೆಯ ಕುರಿ ಮಾಡಿದ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 6, 2025 - 3:47 pm
in Flash News, ಕರ್ನಾಟಕ
0 0
0
Web 2025 06 06t154524.426

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತ ಘಟನೆಯಲ್ಲಿ ಸರ್ಕಾರವೇ ಅಪರಾಧಿ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಈ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಟ ಮಾಡುತ್ತೇವೆ.ಈ ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‌.ಅಶೋಕ, “ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಕಾನೂನನ್ನು ಕಗ್ಗತ್ತಲಿನಲ್ಲಿಟ್ಟಿದ್ದಾರೆ. ಆರ್‌ಸಿಬಿ ತಂಡ ಐಪಿಎಲ್‌ ಗೆದ್ದಿದ್ದರೆ, ಕೆಪಿಸಿಸಿ ತಂಡ ಫೋಟೋಗೆ ಫೋಸ್‌ ನೀಡಿದೆ. ಸಿದ್ದರಾಮಯ್ಯನವರೇ ಬ್ಯಾಟ್ಸ್‌ಮನ್‌ ಹಾಗೂ ಡಿ.ಕೆ.ಶಿವಕುಮಾರ್‌ ಬೌಲರ್‌ ಆಗಿದ್ದಾರೆ.ಸಿದ್ದರಾಮಯ್ಯನವರನ್ನು ಬೋಲ್ಡ್‌ ಮಾಡಬೇಕೆಂದು ಡಿ.ಕೆ.ಶಿವಕುಮಾರ್‌ ಪ್ರಯತ್ನ ಮಾಡುತ್ತಿದ್ದರೆ, ಐದು ವರ್ಷ ಸೆಂಚುರಿ ಹೊಡೆಯಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ರಾಜ್ಯದ ಜನರು ಹಿಟ್‌ ವಿಕೆಟ್‌ ಆಗಿದ್ದಾರೆ,” ಎಂದು ವ್ಯಂಗ್ಯವಾಡಿದರು.

RelatedPosts

ಭಾರತೀಯರಿಗೆ ಉದ್ಯೋಗ ಕೊಡಬೇಡಿ: ಅಮೆರಿಕದ ಕಂಪನಿಗಳಿಗೆ ಟ್ರಂಪ್ ಖಡಕ್ ಆದೇಶ

ವಸತಿ ಶಾಲೆಯಲ್ಲಿ ಊಟ ಸೇವಿಸಿದ 6 ವಿದ್ಯಾರ್ಥಿಗಳು ಅಸ್ವಸ್ಥ

ಬೇರೆಯವರ ಬ್ಯಾಗ್‌ನಲ್ಲಿ ಚಿನ್ನ ಇಟ್ಟು ಎಸ್ಕೇಪ್ ಆದ ಭೂಪ

ಒಟಿಟಿ ವೇದಿಕೆಗಳಲ್ಲಿ ಅಶ್ಲೀಲತೆಗೆ ಕಡಿವಾಣ: 18 ಒಟಿಟಿ, 19 ವೆಬ್‌ಸೈಟ್‌ಗಳಿಗೆ ನಿಷೇಧ ಹೇರಿದ ಕೇಂದ್ರ!

ADVERTISEMENT
ADVERTISEMENT

ವೇದಿಕೆಯಲ್ಲಿ ಕಾಂಗ್ರೆಸ್‌ ನಾಯಕರ ಕೈಯಲ್ಲೇ ಟ್ರೋಫಿ ಇತ್ತು. ವರ್ಷಾನುಗಟ್ಟಲೆ ಶ್ರಮವಹಿಸಿ ಆಟವಾಡಿದ ಆಟಗಾರರನ್ನು ಮೂಲೆಗೆ ತಳ್ಳಿದ್ದರು. ಈ ಸಂಭ್ರಮಾಚರಣೆ ಆತುರದ ತೀರ್ಮಾನವೆಂದು ಕಾಂಗ್ರೆಸ್‌ನ ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ನ ಸಮರ್ಪಣಾ ಸಮಾವೇಶ ಮಾಡುವ ಮುನ್ನ, ಬೆಂಗಳೂರಿನಲ್ಲಿ ಪ್ರವಾಹ ಬಂದರೂ ಬಹಳಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಯುವಜನರಿಗೆ ಸಂಬಂಧಿಸಿದಂತೆ ಕ್ರೀಡಾ ಕಾರ್ಯಕ್ರಮ ಮಾಡುವಾಗ ಸಿದ್ಧತೆಯನ್ನೇ ಮಾಡಿಕೊಂಡಿಲ್ಲ. ಕಾಂಗ್ರೆಸ್‌ನ ಸಮಾವೇಶಕ್ಕೆ ಮಾಡಿದ್ದ ಸಿದ್ಧತೆಯ ಒಂದು ಪರ್ಸೆಂಟ್‌ನಷ್ಟು ಸಮಯವನ್ನು ಇಲ್ಲಿ ನೀಡಿದ್ದರೆ ಯುವಜನರ ಬದುಕು ಉಳಿಯುತ್ತಿತ್ತು ಎಂದರು.

ಆಯುಕ್ತರ ಅಮಾನತು

ಕರ್ನಾಟಕದ ಇತಿಹಾಸದಲ್ಲಿ ಮೊದಲ ಸಲ ಪೊಲೀಸ್‌ ಆಯುಕ್ತರನ್ನು ಅಮಾನತು ಮಾಡಲಾಗಿದೆ. ಜನರು ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ಜೊತೆಗಿದ್ದೇವೆ ಎಂದು ಹೇಳುತ್ತಿದ್ದಾರೆ. ಕಾಲ್ತುಳಿತಕ್ಕೆ ಸಿಲುಕಿ ನಿತ್ರಾಣರಾಗಿದ್ದ ಯುವಕ ಯುವತಿಯರನ್ನು ಪೊಲೀಸರು ಕೈಯಲ್ಲಿ ಎತ್ತಿಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿ ಯಾವುದೇ ಕಾಂಗ್ರೆಸ್‌ ಕಾರ್ಯಕರ್ತರು ಇರಲಿಲ್ಲ. ಆದರೆ ಈಗ ಪೊಲೀಸರನ್ನೇ ಅಮಾನತು ಮಾಡಲಾಗಿದೆ. ನಾವು ನ್ಯಾಯ ಸಿಗುವವರೆಗೂ ರಾಜಕಾರಣ ಮಾಡುತ್ತೇವೆ. ಯಾರನ್ನೋ ಹರಕೆಯ ಕುರಿ ಮಾಡುವುದರ ವಿರುದ್ಧ ನಾವು ರಾಜಕಾರಣ ಮಾಡುತ್ತೇವೆ ಎಂದರು.

ಪೊಲೀಸ್‌ ಆಯುಕ್ತರಿಂದ ಅನುಮತಿ ನೀಡಲು ನಿರಾಕರಿಸಲಾಗಿತ್ತು, ಆದರೆ ಆರ್‌ಸಿಬಿ ಫ್ರಾಂಚೈಸಿಯವರು ಸಂಜೆ ಕಾರ್ಯಕ್ರಮ ಮಾಡಬೇಕೆಂದು ನಿರ್ಧರಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಬರೆಯಲಾಗಿದೆ. ಅಂದರೆ ಇದು ಅನಧಿಕೃತ ಕಾರ್ಯಕ್ರಮವಾಗಿದೆ. 144 ಸೆಕ್ಷನ್‌ ಹಾಕಿದ್ದರೆ ಕಾರ್ಯಕ್ರಮಕ್ಕೆ ಯಾರೂ ಬರುತ್ತಿರಲಿಲ್ಲ. ಇದು ಅನಧಿಕೃತ ಎಂದಮೇಲೆ ಆ ಸೆಕ್ಷನ್‌ ಹಾಕಿ ಕಾರ್ಯಕ್ರಮವನ್ನು ರದ್ದು ಮಾಡಬೇಕಿತ್ತು. ಸರ್ಕಾರಕ್ಕೆ ಮುಜುಗರವಾಗಿದ್ದರಿಂದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ನಾವೆಲ್ಲರೂ ಸರ್ಕಾರವೇ ಅಪರಾಧಿ, ತಪ್ಪಿತಸ್ಥರೇ ಸರ್ಕಾರದವರು ಎಂದು ಹೇಳುತ್ತಿದ್ದೇವೆ. ಪ್ರಾಂಚೈಸಿಯವರಿಗೆ ಕಾರ್ಯಕ್ರಮ ಮಾಡು ಎಂದು ಸೂಚನೆ ನೀಡಿದವರು ಯಾರು? ಕ್ರಿಕೆಟಿಗರನ್ನು ಕರೆದುಕೊಂಡು ಬಂದವರು ಯಾರು? ಎಂದು ಪ್ರಶ್ನೆ ಮಾಡಿದರು.

ಎರಡು ಕಡೆ ಕಾರ್ಯಕ್ರಮ ನಡೆಸುವುದು ಬೇಡ ಎಂದು ಪೊಲೀಸರು ಹೇಳಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಘಟನೆ ನಡೆದಿಲ್ಲ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ ಎಂದು ಹೇಳಿದ್ದಾರೆ. ಈ ಎರಡೂ ಸ್ಥಳಗಳು ಅಕ್ಕಪಕ್ಕದಲ್ಲೇ ಇವೆ. ಪೊಲೀಸರು ಅನುಮತಿ ನೀಡದಿದ್ದರೂ, ಕಾಂಗ್ರೆಸ್‌ ಸರ್ಕಾರ ಕಾನೂನು ಕೈಗೆ ತೆಗೆದುಕೊಂಡು ಕಾರ್ಯಕ್ರಮ ನಡೆಸಿದೆ. ಎಲ್ಲರೂ ಫೋಟೋ ಶೂಟ್‌ನಲ್ಲಿ ನಿರತರಾಗಿದ್ದರೇ ಹೊರತು, ಜನರ ಬಗ್ಗೆ ಯಾರೂ ಯೋಚಿಸಲಿಲ್ಲ ಎಂದರು.

ಸರ್ಕಾರವೇ ಅಪರಾಧಿ

ಮೊದಲು ಜಿಲ್ಲಾಧಿಕಾರಿಯಿಂದ ತನಿಖೆ ನಡೆಯಲಿದೆ ಎಂದು ಹೇಳಿದರು. ಸಿಐಡಿಯಿಂದ ತನಿಖೆ ನಡೆಯಲಿದೆ ಎಂದು ಹೇಳಿದ್ದಾರೆ. ಇದು ಕೂಡ ಮುಡಾ, ವಾಲ್ಮೀಕಿ ನಿಗಮದ ಹಗರಣದಂತೆಯೇ ಮುಚ್ಚಿಹೋಗಲಿದೆ. ಇಲ್ಲಿ ಸರ್ಕಾರವೇ ಅಪರಾಧಿಯಾಗಿರುವುದರಿಂದ, ಸರ್ಕಾರದಲ್ಲಿರುವ ಯಾರೂ ತನಿಖೆ ಮಾಡಬಾರದು. ಇದನ್ನು ನ್ಯಾಯಾಧೀಶರೇ ತನಿಖೆ ಮಾಡಬೇಕು. ಅನುಮತಿ ನೀಡಲು ಒತ್ತಡ ಹೇರಿದವರು ಯಾರು, ಕಾರ್ಯಕ್ರಮ ನಡೆಸಲು ಸೂಚನೆ ನೀಡಿದವರು ಯಾರು ಎಂಬುದು ಗೊತ್ತಾಗಬೇಕಿದೆ. ಅಲ್ಲಿಯವರೆಗೂ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 07 25t165747.333

ಭಾರತೀಯರಿಗೆ ಉದ್ಯೋಗ ಕೊಡಬೇಡಿ: ಅಮೆರಿಕದ ಕಂಪನಿಗಳಿಗೆ ಟ್ರಂಪ್ ಖಡಕ್ ಆದೇಶ

by ಶಾಲಿನಿ ಕೆ. ಡಿ
July 25, 2025 - 5:08 pm
0

Untitled design 2025 07 25t164322.335

ವಸತಿ ಶಾಲೆಯಲ್ಲಿ ಊಟ ಸೇವಿಸಿದ 6 ವಿದ್ಯಾರ್ಥಿಗಳು ಅಸ್ವಸ್ಥ

by ಶಾಲಿನಿ ಕೆ. ಡಿ
July 25, 2025 - 4:43 pm
0

Untitled design 2025 07 25t161646.290

ಹೃತಿಕ್-ತಾರಕ್ ಡೆಡ್ಲಿ ವಾರ್.. 400Cr ವಿಶ್ಯುವಲ್ ಟ್ರೀಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 25, 2025 - 4:18 pm
0

Untitled design 2025 07 25t155448.547

ಬೇರೆಯವರ ಬ್ಯಾಗ್‌ನಲ್ಲಿ ಚಿನ್ನ ಇಟ್ಟು ಎಸ್ಕೇಪ್ ಆದ ಭೂಪ

by ಶಾಲಿನಿ ಕೆ. ಡಿ
July 25, 2025 - 4:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 25t165747.333
    ಭಾರತೀಯರಿಗೆ ಉದ್ಯೋಗ ಕೊಡಬೇಡಿ: ಅಮೆರಿಕದ ಕಂಪನಿಗಳಿಗೆ ಟ್ರಂಪ್ ಖಡಕ್ ಆದೇಶ
    July 25, 2025 | 0
  • Untitled design 2025 07 25t164322.335
    ವಸತಿ ಶಾಲೆಯಲ್ಲಿ ಊಟ ಸೇವಿಸಿದ 6 ವಿದ್ಯಾರ್ಥಿಗಳು ಅಸ್ವಸ್ಥ
    July 25, 2025 | 0
  • Untitled design 2025 07 25t155448.547
    ಬೇರೆಯವರ ಬ್ಯಾಗ್‌ನಲ್ಲಿ ಚಿನ್ನ ಇಟ್ಟು ಎಸ್ಕೇಪ್ ಆದ ಭೂಪ
    July 25, 2025 | 0
  • 111 (48)
    ಒಟಿಟಿ ವೇದಿಕೆಗಳಲ್ಲಿ ಅಶ್ಲೀಲತೆಗೆ ಕಡಿವಾಣ: 18 ಒಟಿಟಿ, 19 ವೆಬ್‌ಸೈಟ್‌ಗಳಿಗೆ ನಿಷೇಧ ಹೇರಿದ ಕೇಂದ್ರ!
    July 25, 2025 | 0
  • 111 (45)
    ಕನ್ನಡಿಗರಿಗೆ ಬಿಗ್ ಶಾಕ್: ಇನ್ಮುಂದೆ ಗೋವಾದಲ್ಲಿ ವಾಹನ ಖರೀದಿಸುವಂತಿಲ್ಲ, ಹೊಸ ಕಾನೂನು!
    July 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version