ರಾಯಚೂರು: ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿ ಮೂವರು ಸಮೂಹಿಕ ಸತ್ಯಾಚಾರ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಮಾನ್ವಿ ಬಸ್ ನಿಲ್ದಾಣದಲ್ಲಿ ನಿಂತಿದ್ದ 8 ನೇ ತರಗತಿ ವಿದ್ಯಾರ್ಥಿನಿಯನ್ನ, ಮನೆಗೆ ಡ್ರಾಪ್ ಮಾಡುವ ನೆಪದಲ್ಲಿ ಬಾಲಕಿಯನ್ನ ಕರೆದೊಯ್ದಿದ್ದಾರೆ. ನಂತರ ಬಾಲಕಿಯನ್ನ, ಮೂವರು ಗುಡ್ಡಗಾಡು ಪ್ರದೇಶಕ್ಕೆ ಕೊಂಡೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಾಲಕಿ ಮನೆಗೆ ಬಂದ ನಂತರ ತನ್ನ ತಾಯಿ ಬಳಿ ನಡೆದ ಘಟನೆ ವಿವರಿಸಿದ್ದಾಳೆ. ಬಳಿಕ ಕುಂಟುಂಬಸ್ಥರು ಮಾನ್ವಿ ಪೊಲೀಸ್ ಠಾಣೆಗೆ ದೂರು ನೀಡಿ, ಪ್ರಕರಣವನ್ನು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ,ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.