• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್ ‌ಸರ್ಕಾರಕ್ಕೆ 2 ವರ್ಷ, ಹಟ್ಟಿ,‌ ತಾಂಡಾಗಳ 1 ಲಕ್ಷ ಜನರಿಗೆ‌ ಪಟ್ಟಾ ಖಾತೆ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 11, 2025 - 6:03 pm
in Flash News, ಕರ್ನಾಟಕ
0 0
0
Untitled design 2025 05 11t180128.270

ರಾಮನಗರ : “ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.20 ರಂದು ವಿಜಯನಗರದಲ್ಲಿ ನಡೆಯುವ ಸಮಾವೇಶದಲ್ಲಿ ತಾಂಡಾ,‌‌ ಹಟ್ಟಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಿರುವ 1 ಲಕ್ಷ ಜನರಿಗೆ ಪಟ್ಟಾ ಖಾತೆ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ರಾಮನಗರದಲ್ಲಿ ಭಾನುವಾರ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ‘ಯುವ ಪರ್ವ’ ಸಮಾವೇಶದಲ್ಲಿ ಮಾತನಾಡಿದರು.

RelatedPosts

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!

ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ

ADVERTISEMENT
ADVERTISEMENT

“ಕಾಂಗ್ರೆಸ್ ‌ಸರ್ಕಾರ ಅಧಿಕಾರಕ್ಕೆ ಬಂದ ನಂತರ‌ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಯುವಕರಿಗೆ ಯುವನಿಧಿ ಮೂಲಕ ನೆರವಿಗೆ ನಿಂತಿದೆ. ಮಹಿಳೆಯರ ಪರವಾಗಿ ಐತಿಹಾಸಿಕ ಯೋಜನೆಗಳನ್ನು ತಂದು ಇತಿಹಾಸ ನಿರ್ಮಾಣ ಮಾಡಿರುವುದು ಕಾಂಗ್ರೆಸ್ ಪಕ್ಷ. ಉಚಿತ ಬಸ್, ಗೃಹಲಕ್ಷ್ಮೀ ಸೇರಿದಂತೆ ಅನೇಕ ಯೋಜನೆಗಳನ್ನು ದಳ, ಬಿಜೆಪಿಯವರು ನೀಡಿದ್ದಾರೆಯೇ” ಎಂದು ಪ್ರಶ್ನಿದರು.

ಯುವ ಕಾಂಗ್ರೆಸ್ ಪಕ್ಷ ನಾಯಕತ್ವ ಬೆಳೆಸುವ ಪ್ರಯೋಗ ಶಾಲೆ. ನೀವು ನಾಯಕರಾಗಿ ಬೆಳೆಯಬೇಕು ಎಂದರೆ ತಳಮಟ್ಟದಿಂದ ಕೆಲಸ ಮಾಡಬೇಕು. ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸಬೇಕು. ಯುವಕರಿಗೆ ನಿಮ್ಮ ಶಕ್ತಿಯ ಅರಿವಿಲ್ಲ‌. ಯಾರೋ ಮಾಡುವ ಟೀಕೆಗಳಿಗೆ ಹೆದರಬಾರದು” ಎಂದರು.

“ನಿಮ್ಮ ಏರಿಯಾ, ಬೂತ್ ಮಟ್ಟದಲ್ಲಿ ನೀವು ಪ್ರಬಲವಾಗಿ ಬೆಳೆಯಬೇಕು. ನೀವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯಬೇಕು. ಜನರ ಮನಸ್ಸನ್ನು ಗೆಲ್ಲಬೇಕು. ನಿಮ್ಮನ್ನು ನಾಯಕರನ್ನಾಗಿ ರೂಪಿಸಬೇಕು ಎನ್ನುವುದು ನನ್ನ ಗುರಿ,‌ ಹಿಂಬಾಲಕರನ್ನಾಗಿ ಮಾಡುವುದಲ್ಲ. ನೀವು ನನ್ನ ಸಹಪಾಠಿಗಳು” ಎಂದರು.

“ಯುವ ಹಾಗೂ ವಿದ್ಯಾರ್ಥಿ ಕಾಂಗ್ರೆಸ್ ಮೂಲಕ ಬೆಳೆದವರು ಪಕ್ಷವನ್ನು ಎಂದಿಗೂ ಬಿಟ್ಟು ಹೋಗುವುದಿಲ್ಲ. ಬೂತ್, ಪಂಚಾಯತಿ, ವಾರ್ಡ್ ಮಟ್ಟದಲ್ಲಿ ನಿಮಗೆ ನೀಡಿದ ಜವಾಬ್ದಾರಿ ನಿಭಾಯಿಸಿದಾಗ, ಪಕ್ಷಕ್ಕೆ ಹೆಚ್ಚಿನ ಮತಗಳನ್ನು ತಂದುಕೊಟ್ಟಾಗ ಮಾತ್ರ ನೀವು ನಾಯಕರಾಗಿ ಹೊರಹೊಮ್ಮಬಹುದು. ಆಗ ಶಾಸಕರು ನಿಮ್ಮನ್ನು ಹುಡುಕಿಕೊಂಡು ಬಂದು ಅಧಿಕಾರ ನೀಡುವ ಕೆಲಸ ಮಾಡುತ್ತಾರೆ” ಎಂದು ಹೇಳಿದರು.

“ಅಧಿಕಾರ ಎಂದಿಗೂ ಶಾಶ್ವತವಲ್ಲ. ದೇವೇಗೌಡರು ಈ‌ ರಾಜ್ಯದ ಮುಖ್ಯಮಂತ್ರಿಗಳಾಗಿ ನಂತರ ಪ್ರಧಾನಿಯಾದರು ಅವರಿಂದ ತೆರವಾದ ಸ್ಥಾನಕ್ಕೆ ಚಿತ್ರನಟ ಅಂಬರೀಶ್ ಅವರನ್ನು ನಿಲ್ಲಿಸಿದ್ದರು. ನಾವು ಅಂದು ಹೋರಾಟ ಮಾಡಿ ಸಿ.ಎಂ.ಲಿಂಗಪ್ಪ ಅವರನ್ನು ನಿಲ್ಲಿಸಿ ಗೆಲ್ಲಿಸಿದೆವು” ಎಂದು ಹೇಳಿದರು.

“ಬಿಜೆಪಿ,‌ ದಳ, ಕಾಂಗ್ರೆಸ್ ಹೀಗೆ ರಾಜಕೀಯದಲ್ಲಿ ಯಾವುದು ಶಾಶ್ವತವಲ್ಲ. 8 ಬಾರಿ ಶಾಸಕನಾಗಿರುವ ನಾನು,‌ ದೇಶದ ಪ್ರಧಾನಿಗಳಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ ಎನ್ನುವುದೆಲ್ಲಾ ರಾಜಕೀಯದಲ್ಲಿ ಕ್ಷಣಿಕ.‌ ರಾಮನಗರ, ಮೈಸೂರು, ಮಂಡ್ಯದಲ್ಲಿ ನಾವು ಗೆದ್ದಿಲ್ಲವೇ. ಮೈಸೂರು ಭಾಗದಲ್ಲಿ 40 ಕ್ಕೂ ಹೆಚ್ಚು ಸ್ಥಾನ ಗೆದ್ದಿದ್ದೇವೆ. ಸೋತಿರುವ ಕ್ಷೇತ್ರದಲ್ಲಿ ಮುಂದೆ ಗೆಲ್ಲಲು ಪ್ರಯೋಗ ಪ್ರಾರಂಭ ಮಾಡಿದ್ದೇವೆ” ಎಂದರು.

“ನಾನು ಶಾಸಕ, ಮಂತ್ರಿ ಆಗಿದ್ದಾಗಲೂ ಸಹ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷನಾಗಿದ್ದೆ. ಆನಂತರ ರಾಜಿನಾಮೆ ನೀಡಿ ಕೆ.ಆರ್.ಪುರಂ ನಾರಾಯಣಸ್ವಾಮಿ ಅವರು, ಆನೇಕಲ್ ಶಿವಣ್ಣ ಅವರಿಗೆ ಅಧ್ಯಕ್ಷ ಸ್ಥಾನ ವಹಿಸಿಕೊಂಡರು. ದೇಶದ ಮೊದಲ ಪ್ರಧಾನಿಗಳಾದ ನೆಹರು ಅವರು ಅಲಹಾಬಾದ್ ಮುನಿಸಿಪಾಲಿಟಿಯ ಅಧ್ಯಕ್ಷರಾಗಿದ್ದರು. ಕೆಂಗಲ್ ಹನುಮಂತಯ್ಯ ಅವರು ಬೆಂಗಳೂರು ಮುನಿಸಿಪಾಲಿಟಿಯ ಸದಸ್ಯರು, ‌ಅಧ್ಯಕ್ಷರಾಗಿದ್ದರು. ರಾಜಗೋಪಾಲಚಾರಿ, ಬಿ.ಡಿ.ಜತ್ತಿ ಹೀಗೆ ಅನೇಕರು ತಳಮಟ್ಟದಿಂದ ಬೆಳೆದು ನಾಯಕರಾಗಿ ಹೊರಹೊಮ್ಮಿದವರು” ಎಂದು ಹೇಳಿದರು.

“ಒಮ್ಮೆ ರಾಜೀವ್ ಗಾಂಧಿ ಅವರ ಬಳಿ ಸ್ಥಳೀಯ ಸಂಸ್ಥೆ ವ್ಯವಸ್ಥೆ ನಮ್ಮಲ್ಲಿ ಇದೆಯಲ್ಲಾ ಎಂದು ಕೇಳಿದ್ದೆ. ಆಗ ಅವರು ಇಡೀ ದೇಶದಲ್ಲಿ ಈ ವ್ಯವಸ್ಥೆ ಬರಬೇಕು. ಪಂಚಾಯತಿಯಿಂದ ಪಾರ್ಲಿಮೆಂಟ್ ವರೆಗೆ ನಾಯಕರ ಉಗಮವಾಗಬೇಕು ಎಂದು ಹೇಳಿದರು‌. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50 ಮತ್ತು ಹಿಂದುಳಿದ ವರ್ಗಕ್ಕೆ ಶೇ.50 ರಷ್ಟು ಮೀಸಲಾತಿ ನೀಡಲಾಗಿದೆ” ಎಂದು ತಿಳಿಸಿದರು.

ಈ ದೇಶದ ಜನರಿಗೆ ಶಾಲೆ, ಆಸ್ಪತ್ರೆ, ಭೂಮಿ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನೀಡಿದವರು ನಾವು. ಗ್ಯಾರಂಟಿ ಯೋಜನೆಗಳ ಮೂಲಕ ದಾಖಲೆ ಬರೆದಿದ್ದೇವೆ. ಹೊರಗಡೆಯಿಂದ ಬಂದವರಂತೆ ಪ್ರಚಾರಕ್ಕೆ ಏನೋ ಒಂದು ಹೇಳುವವರಲ್ಲ ನಾವು” ಎಂದರು.

“ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕರೆಯಲು ಮುಂದಾಗಿದ್ದೇವೆ. ಏಕೆಂದರೆ ಇಲ್ಲಿನ ಭೂಮಿ ಮೌಲ್ಯ ಹೆಚ್ಚಾಗಲಿದೆ, ಜನರ ಬದುಕು ಬದಲಾಗಲಿದೆ. ಇದು ನಮ್ಮ‌ ಜಿಲ್ಲೆ, ನಮ್ಮ ಸ್ವಾಭಿಮಾನ. ಬೆಂಗಳೂರಿಗೆ ನಾವು ಹೋಗುವುದು ತಪ್ಪಿ ನಮ್ಮನ್ನೇ ಬಳಸಿಕೊಳ್ಳುವ ಕಾಲ ಮುಂದಕ್ಕೆ ಬರಬೇಕು. ಸುರೇಶ್ ಅವರು ಸ್ಪರ್ಧಿಸುವ ಕ್ಷೇತ್ರವನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಎಂದು ಏಕೆ ಕರೆಯಲಾಗುತ್ತದೆ. ನಮ್ಮ ಹೆಸರನ್ನು ಬಿಟ್ಟು ಕೊಡುವುದಿಲ್ಲ” ಎಂದು ಹೇಳಿದರು.

“ಗ್ರೇಟರ್ ಬೆಂಗಳೂರು ಎಂದು ಮಾಡಲು ಹೊರಟಿದ್ದೇವೆ. ಇದನ್ನು ಕೈ ಬಿಡಿ ಎಂದು ದೇವೆಗೌಡರು, ಸಂಸದ ಮಂಜುನಾಥ್ ಅವರು ಪತ್ರ ಬರೆದಿದ್ದರು. ಈ ಹಿಂದೆ ಇದಕ್ಕೆ ಸಹಿ ಹಾಕಿದವರು ಕುಮಾರಸ್ವಾಮಿ‌. ಆದರೆ ಅವರಿಗೆ ಇದನ್ನು ಮುಂದುವರೆಸಲು ಆಗುವುದಿಲ್ಲ. ಈಗ ನಾನೇಕೆ ಅದನ್ನು ಡಿನೋಟಿಫಿಕೇಷನ್ ಮಾಡಲಿ. ಕೇಸನ್ನು ಹಾಕಿಸಿಕೊಳ್ಳಲು ನಾನು ತಯಾರಿಲ್ಲ. ರೈತರಿಗೆ ನಾಲ್ಕು ಪಟ್ಟು ಪರಿಹಾರ ದೊರೆಯುವಂತೆ ಮಾಡುತ್ತೇನೆ. ಯೋಗೇಶ್ವರ್, ಇಕ್ಬಾಲ್ ಅವರೆಲ್ಲಾ ಸೇರಿ ನಿಮ್ಮ ಬದುಕನ್ನು ಭದ್ರ ಮಾಡುತ್ತೇವೆ” ಎಂದರು.

“ಈ ಹಿಂದೆ ಅಧಿಕಾರದಲ್ಲಿ ಇದ್ದಾಗ ಏಕೆ ಒಂದೇ ಒಂದು ಜಿಲ್ಲಾಸ್ಪತ್ರೆ ಮಾಡಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ತನಕ ವಿಶ್ವವಿದ್ಯಾಲಯ ಕಟ್ಟಡವಿರಲಿಲ್ಲ” ಎಂದರು.

“ರಾಜ್ಯದಾದ್ಯಂತ 100 ಕಾಂಗ್ರೆಸ್ ಕಚೇರಿಗಳನ್ನು ಕಟ್ಟಲಾಗುತ್ತಿದೆ. ಬೆಂಗಳೂರಿನಲ್ಲಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸುವ ಸಂದರ್ಭದಲ್ಲಿಯೇ ಇಲ್ಲಿಯೂ ನೆರವೇರಿಸಲಾಗುತ್ತದೆ. ಚನ್ನಪಟ್ಟಣ ತಾಲ್ಲೂಕಿನ ಅಧ್ಯಕ್ಷರು ಎಲ್ಲರೂ ‌ಸೇರಿ 50 ಲಕ್ಷ‌ ದೇಣಿಗೆ ಸಂಗ್ರಹ ಮಾಡಲಾಗುವುದು ಎಂದು ಹೇಳಿದ್ದಾರೆ. ಕನಕಪುರದಲ್ಲಿ ಇರುವ ಜಾಗವನ್ನು ಹರಾಜಿನಲ್ಲಿ ಮಾರಾಟ ಮಾಡಿ ಆ ಹಣವನ್ನು ಸಹ ರಾಮನಗರ ಕಚೇರಿಗೆ ನೀಡಲಾಗುವುದು” ಎಂದರು.

“ನಾವೊಬ್ಬರೇ ಕಚೇರಿ ಕಟ್ಟಬಹುದು.‌ ಆದರೆ ಎಲ್ಲರೂ ಕೈ ಜೋಡಿಸಬೇಕು. ಆಗ ಮಾತ್ರ ಇದು ನನ್ನದು, ನನ್ನ ಪಕ್ಷ‌ ಎನ್ನುವ ಅಭಿಮಾನವಿರುತ್ತದೆ. ದಾನಿಗಳ ಹೆಸರು ಶಾಶ್ವತವಾಗಿ ಉಳಿಯಬೇಕು ಎಂದು ದಾನಿಗಳ ಹೆಸರಿರುವ ಫಲಕಗಳನ್ನು ಅಳವಡಿಸಲಾಗುವುದು. ಒಂದು ವರ್ಷದೊಳಗೆ ಜಿಲ್ಲಾ ಕಾಂಗ್ರೆಸ್ ಕಟ್ಟಡ ನಿರ್ಮಾಣವಾಗುವಂತೆ ನೋಡಿಕೊಳ್ಳಲಾಗುವುದು. ಕಟ್ಟಡಕ್ಕೆ ದೇಣಿಗೆ ನೀಡುವವರು ಚೆಕ್ ಮುಖಾಂತರ ನೀಡಬೇಕು ಎಂದು ಮನವಿ. 5 ರಿಂದ 2 ಲಕ್ಷದ ಒಳಗೆ ಹಣ ನೀಡಿದರು ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

ರಾಮನಗರ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡಿರುವ ಚಂದ್ರ ಸಾಗರ್ ಮತ್ತು ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದರು.

ನೂತನ ಕಾಂಗ್ರೆಸ್ ‌ಕಚೇರಿ ನಿರ್ಮಾಣದ ಬಗ್ಗೆ ಕೇಳಿದಾಗ, “ಈ ಹಿಂದೆ ಇದ್ದ ಜಾಗದ ವಿರುದ್ದ ಪ್ರಕರಣ‌ ದಾಖಲಿಸಿದ ಪರಿಣಾಮ ಅದನ್ನು ಕೈ ಬಿಡಲಾಯಿತು. ಈಗ ಇರುವ ಕಚೇರಿ ಪಕ್ಕದ ಜಾಗವನ್ನು ನಾನೇ ಖರೀದಿ ಮಾಡಿ ಪಕ್ಷಕ್ಕೆ ನೀಡಿದ್ದೇನೆ. ಜನರ ಕಚೇರಿಯಾಗಬೇಕು ಎಂದು ಎಲ್ಲರಿಂದ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ” ಎಂದರು.

ಸರ್ಕಾರಕ್ಕೆ ಎರಡು ವರ್ಷ ಸಂಭ್ರಮದ‌ ಬಗ್ಗೆ ಕೇಳಿದಾಗ, “ಮೇ.20 ಕ್ಕೆ ಸಂಭ್ರಮಾಚರಣೆ ಮಾಡುವ ಆಲೋಚನೆಯಿದೆ‌. ಆದರೆ ಯುದ್ದದ ಭೀತಿ ಇರುವ ಕಾರಣಕ್ಕೆ ಆಲೋಚನೆ ಮಾಡಲಾಗುತ್ತಿದೆ” ಎಂದರು.

ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ‌ಮಾಡಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ‌ನೀಡಬೇಕು. ನಾನು ಪ್ರತಿಕ್ರಿಯೆ ನೀಡಿ ಗೊಂದಲ ಮಾಡುವುದಕ್ಕೆ ಇಷ್ಟವಿಲ್ಲ. ದೇಶದ ಗೌರವ ಉಳಿಸಲು ನಾವು ಹೋರಾಟ ಮಾಡೋಣ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 15T132337.507

ಜುಲೈ 15 ರಿಂದ ಆಗಸ್ಟ್ 15ರವರೆಗೆ ಕೆಂಪುಕೋಟೆ ಬಂದ್; ಪ್ರವಾಸಿಗರಿಗೆ ನೋ ಎಂಟ್ರಿ!

by ಶಾಲಿನಿ ಕೆ. ಡಿ
July 15, 2026 - 1:24 pm
0

ಷ್ಯ (14)

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

by ಶಾಲಿನಿ ಕೆ. ಡಿ
July 15, 2026 - 1:14 pm
0

ಷ್ಯ (13)

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

by ಶಾಲಿನಿ ಕೆ. ಡಿ
July 15, 2026 - 12:46 pm
0

Untitled design 2026 07 15T123134.370

ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!

by ಶಾಲಿನಿ ಕೆ. ಡಿ
July 15, 2026 - 12:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
  • ಷ್ಯ (9)
    ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version