• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಮನಗರ ಜಿಲ್ಲೆ ಅಭಿವೃದ್ಧಿಗೆ ರೂ.500 ಕೋಟಿಗೂ ಹೆಚ್ಚು ಅನುದಾನ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 11, 2025 - 11:19 pm
in Flash News, ಕರ್ನಾಟಕ
0 0
0
Untitled design 2025 05 11t231835.564

ರಾಮನಗರ : “ರಾಮನಗರ ಪಟ್ಟಣ ಪ್ರದೇಶದ ಅಭಿವೃದ್ಧಿಗೆ ರೂ.150 ಕೋಟಿ, ನೀರಾವರಿ ಇಲಾಖೆಯಿಂದ ರೂ. 400 ಕೋಟಿ ಅನುದಾನ ನೀಡಲಾಗಿದೆ. ಸತ್ತೇಗಾಲದಿಂದ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ತರಲಾಗುತ್ತಿದೆ. ಜಿಲ್ಲಾ ಕೇಂದ್ರಕ್ಕೆ ಹೊಸರೂಪ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ರಾಮನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು.

RelatedPosts

ಬೆಂಗಳೂರಲ್ಲಿ ವರುಣನ ಆರ್ಭಟ: 3 ಗಂಟೆ ಆರೇಂಜ್ ಅಲರ್ಟ್, ಬಿರುಗಾಳಿ ಸಹಿತ ಮಳೆ!

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಸಿಬಿಬಿಯಿಂದ ಪುತ್ರಿ ಕೃತಿಕಾಗೆ ಕ್ಲೀನ್ ಚಿಟ್

ಧಗಧಗನೇ ಹೊತ್ತಿ ಉರಿದ ಶಾಲಾ ಬಸ್ : ಓರ್ವ ವ್ಯಕ್ತಿ ಸಜೀವ ದಹನ

ಕರ್ನಾಟಕದಲ್ಲಿ ಭಾರೀ ಮಳೆ: ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಿಗೆ ಹಳದಿ ಅಲರ್ಟ್

ADVERTISEMENT
ADVERTISEMENT

“100 ಎಕರೆ ಪ್ರದೇಶವನ್ನು ಗುರುತಿಸಿ ಬಡವರಿಗೆ ನಿವೇಶನ ಹಂಚುವ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಶೀಘ್ರದಲ್ಲಿಯೇ ಇದರ ಬಗ್ಗೆ ಸಭೆ ನಡೆಸಲಾಗುವುದು. ಚನ್ನಪಟ್ಟಣದಲ್ಲಿ 2 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಹಂಚಲಾಗಿದೆ. ವಸತಿ ಸಚಿವ ಜಮೀರ್ ಅವರು ನಿವೇಶನ ಅಭಿವೃದ್ಧಿಗೆ ಎಂದು ರೂ.40 ಕೋಟಿ ಹಣ ಮೀಸಲಿಟ್ಟಿದ್ದಾರೆ. ನಿಮ್ಮ ಊರಿನಲ್ಲಿಯೇ ಉದ್ಯೋಗ ದೊರೆಯುವಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದರು.

“ನಾವು ಮಾಡುವ ಕೆಲಸಗಳಿಗೆ ಟೀಕೆ‌ ಮಾಡುತ್ತಾರೆ. ಟೀಕೆಗಳು ಸಾಯುತ್ತವೆ,‌‌‌ ಕೆಲಸಗಳು ಉಳಿಯುತ್ತವೆ. ನಮ್ಮ ನಾಲ್ಕು ಜನ ಶಾಸಕರು ನಿಮ್ಮ‌ ಜೊತೆ ಸದಾ ಇರುತ್ತಾರೆ. ಇಲ್ಲಿಂದ‌ ಬಿಟ್ಟು ಹೋದವರ ಬಗ್ಗೆ ಚಿಂತೆ ಮಾಡಬೇಡಿ.‌ ಬಡತನ, ಸಿರಿತನ‌ ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತ” ಎಂದರು.

ಖಾಲಿ ಟ್ರಂಕು, ಖಾಲಿ ಮಾತು

“ಯಾರೇ ಎಷ್ಟೇ ಕುತಂತ್ರ ಮಾಡಿದರೂ ಬೆಂಗಳೂರು ದಕ್ಷಿಣ ಹೆಸರನ್ನು ಅಳಿಸಲು ಸಾಧ್ಯವಿಲ್ಲ. 25-30 ವರ್ಷ ಅವಕಾಶವನ್ನು ಬೆಂಗಳೂರಿನಿಂದ ದೆಹಲಿವರೆಗೆ ನೀಡಿದ್ದೀರಿ. ಆದರೂ ಬರೇ ಬುಟ್ಟಿ ಬೇವಿನ ಸೊಪ್ಪು ನಂದೆ ಬೆಳಗು ಪೂಜಾರಿ ಅನ್ನುವಂತಾಯಿತು. ಬರೀ ಖಾಲಿ ಟ್ರಂಕು, ಖಾಲಿ ಮಾತು” ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಹೆಸರು ಹೇಳದೆ ಕುಟುಕಿದರು.

“ಹಲವು ವರ್ಷಗಳ ನಂತರ ರಾಮನಗರ ನಗರಸಭೆ ಕಾಂಗ್ರೆಸ್ ತೆಕ್ಕೆಗೆ ಬಂದಿದೆ. ನಿಮ್ಮ ಸಹಕಾರದಿಂದ, ನಿಮ್ಮ ಅಭಿವೃದ್ಧಿಗೆ ನಾವು ಸಿದ್ದರಾಗಿದ್ದೇವೆ” ಎಂದು ಹೇಳಿದರು.

ಅಂಬೇಡ್ಕರ್ ಅವರು ಸರ್ವ ಜನಾಂಗದ ನಾಯಕ

“ಕೇವಲ ಪರಿಶಿಷ್ಟ ಜಾತಿ, ಪಗಂಡಕ್ಕೆ ಮಾತ್ರ ಸೀಮಿತ ಮಾಡಿ ಅಂಬೇಡ್ಕರ್ ಅವರನ್ನು ಕಟ್ಟಿ ಹಾಕಲಾಗುತ್ತಿದೆ. ಸರ್ವರಿಗೂ ಸಮಪಾಲು, ಸಮಬಾಳು ಎಂದು ಸಂವಿಧಾನದ ಮೂಲಕ ಸಮಾನತೆ ತಂದವರು. ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ ನೆರವಾದವರು. ನಮ್ಮನ್ನು ನಾವೇ ಆಳಿಕೊಳ್ಳುವುದಕ್ಕೆ ಶಕ್ತಿ ತುಂಬಿದವರು” ಎಂದರು.

“ಪ್ರತಿದಿನ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನೆನಪಿಸಿಕೊಂಡು ದಿನ ಪ್ರಾರಂಭ ಮಾಡುತ್ತೇನೆ. ಎಲ್ಲಾ ವರ್ಗದ ಜನರನ್ನು ರಕ್ಷಣೆ ಮಾಡುವುದೇ ನಮ್ಮ ಗುರಿ. ಇದು ಅಂಬೇಡ್ಕರ್ ಅವರಿಂದ ಕಲಿತ ಪಾಠ. ಅವರನ್ನು ನೆನಪಿಸಿಕೊಳ್ಳದಿದ್ದರೆ ನಮಗೆ ನಾವು ಮಾಡಿಕೊಳ್ಳುವ ಮೋಸ. ಅವರ ಪ್ರತಿಮೆಗೆ ಪೂಜೆ ಮಾಡುವುದಕ್ಕಿಂತ ಪ್ರತಿಭೆಗೆ ಪೂಜೆ ಮಾಡಬೇಕು” ಎಂದು ಹೇಳಿದರು.

“2013- 2018 ರಲ್ಲಿ ಅಧಿಕಾರಕ್ಕೆ ಬಂದಾಗ ಪರಿಶಿಷ್ಟ ‌ಪಂಗಡ‌ ಮತ್ತು ಜಾತಿಯವರ ಅಭಿವೃದ್ಧಿಗೆ ಎಸ್‌ ಇ ಎಸ್ ಪಿ, ಟಿಎಸ್ ಪಿ ಅನುದಾನವನ್ನು ಮೀಸಲಿಡಲಾಯಿತು. ಇದು ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ಮಾತ್ರ ಸಾಧ್ಯವಾಯಿತು. ಸೋಲಾರ್ ಯೋಜನೆಯಲ್ಲಿ ಮೀಸಲಾತಿ ನೀಡಲಾಗಿದೆ. ಈಗ ಗುತ್ತಿಗೆಯಲ್ಲಿಯೂ ಸಹ ರೂ.2 ಕೋಟಿವರೆಗೆ ಮೀಸಲಾತಿ ನೀಡಲಾಗಿದೆ. ಇದು ಅಂಬೇಡ್ಕರ್ ಅವರು ನಮಗೆ ಕೊಟ್ಟಿರುವ ಶಕ್ತಿಯಿಂದ‌‌ ಸಾಧ್ಯವಾಯಿತು” ಎಂದು ಹೇಳಿದರು.

“ಇಡೀ ಪ್ರಪಂಚದಲ್ಲಿ ಅತ್ಯಂತ ಹೆಚ್ಚು ಪ್ರತಿಮೆಗಳಿರುವುದು ಅಂಬೇಡ್ಕರ್ ಅವರದ್ದು. ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗಿ ಪ್ರಮಾಣ ವಚನ ತೆಗೆದುಕೊಳ್ಳುವಾಗ ಸಂವಿಧಾ‌ನವನ್ನು ಕೈಯಲ್ಲಿ ಹಿಡಿದು ತೆಗೆದುಕೊಂಡರು. ಏಕೆಂದರೆ ಸಂವಿಧಾನ ಬದಲಾವಣೆ ಮಾಡುತ್ತಾರೆ ಎನ್ನುವ ಆತಂಕ ನಮಗೆಲ್ಲಾ ಎದುರಾಗಿತ್ತು. ಎದುರಾಳಿ ಪಕ್ಷಗಳು ಸಂವಿಧಾನ ಬದಲಾವಣೆ ಎನ್ನುವ ಆತಂಕ ಸೃಷ್ಟಿಸಿದ್ದವು” ಎಂದರು.

“ಮಹಾತ್ಮ ಗಾಂಧಿ ಅವರು ಕುಳಿತಂತಹ ಜಾಗದಲ್ಲಿ ನಮ್ಮ ನಾಡಿನ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿದ್ದಾರೆ. ಅವರ ಮುಖಂಡತ್ವದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮ ನಡೆಸಲಾಯಿತು. ಬುದ್ದ, ಬಸವ ಮನೆಬಿಟ್ಟ, ಏಸುಕ್ರಿಸ್ತ ಶಿಲುಬೆಗೆ ಏರಿದ, ಪೈಗಂಬರ್ ದಿವ್ಯವಾಣಿ ಕೇಳಿದ‌ ಘಳಿಗೆಯಲ್ಲಿ, ಭೀಮಾಬಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ನೀಡಿದ ಘಳಿಗೆಯಲ್ಲಿ ನಾವು ನೀವು ಸೇರಿದ್ದೇವೆ” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (16)

ಗೂಗಲ್ ಕ್ರೋಮ್ ಖರೀದಿಸಲು ಮುಂದಾದ ಭಾರತೀಯ ಮೂಲದ ಕಂಪನಿ

by ಶ್ರೀದೇವಿ ಬಿ. ವೈ
August 13, 2025 - 10:16 pm
0

Hubli tigers

ಮಹಾರಾಜ ಟಿ20 2025: ತಹಾ ತೂಫಾನ್ ಶತಕ, ಹುಬ್ಬಳ್ಳಿ ಟೈಗರ್ಸ್‌ಗೆ ರೋಚಕ ಜಯ

by ಶ್ರೀದೇವಿ ಬಿ. ವೈ
August 13, 2025 - 9:41 pm
0

Web (15)

ದರ್ಶನ್‌ಗೆ ಜೈಲಾ-ಬೇಲಾ? ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ಜಾಮೀನು ನಿರ್ಧಾರ!

by ಶ್ರೀದೇವಿ ಬಿ. ವೈ
August 13, 2025 - 9:13 pm
0

Web (14)

ಸಖತ್ ಸಸ್ಪೆನ್ಸ್ ಥ್ರಿಲ್ಲರ್ ‘ಶೋಧ’ ಟ್ರೇಲರ್ ರಿಲೀಸ್..ಆಗಸ್ಟ್ 22ರಿಂದ zee5ನಲ್ಲಿ ವೆಬ್ ಸರಣಿ ಸ್ಟ್ರೀಮಿಂಗ್

by ಶ್ರೀದೇವಿ ಬಿ. ವೈ
August 13, 2025 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (6)
    ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಸಿಬಿಬಿಯಿಂದ ಪುತ್ರಿ ಕೃತಿಕಾಗೆ ಕ್ಲೀನ್ ಚಿಟ್
    August 13, 2025 | 0
  • Untitled design (2)
    ಧಗಧಗನೇ ಹೊತ್ತಿ ಉರಿದ ಶಾಲಾ ಬಸ್ : ಓರ್ವ ವ್ಯಕ್ತಿ ಸಜೀವ ದಹನ
    August 13, 2025 | 0
  • Untitled design (1)
    ಕರ್ನಾಟಕದಲ್ಲಿ ಭಾರೀ ಮಳೆ: ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಿಗೆ ಹಳದಿ ಅಲರ್ಟ್
    August 13, 2025 | 0
  • ್ಗ್ಗಹಗಹ
    ಧರ್ಮಸ್ಥಳ ರಹಸ್ಯ: 13ನೇ ಪಾಯಿಂಟ್‌ನಲ್ಲಿ 14 ಅಡಿ ಅಗೆದರೂ ಸಿಗಲಿಲ್ಲ ಕಳೇಬರ
    August 12, 2025 | 0
  • ಕಕಹ
    ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳ ದಾಳಿ
    August 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version