ರಾಮನಗರ: ಅಡವಿ ಹೋಮ್ ಸ್ಟೇನಲ್ಲಿ ನಡೆದ ರೇವ್ ಪಾರ್ಟಿ ಆರೋಪದ ಹಿನ್ನೆಲೆಯಲ್ಲಿ ಕಗ್ಗಲೀಪುರ ಪೊಲೀಸರು ತಡರಾತ್ರಿ ದಾಳಿ ನಡೆಸಿ 130 ಜನರನ್ನು ಬಂಧಿಸಿದ್ದಾರೆ.
ಪೊಲೀಸರು ಮಧ್ಯರಾತ್ರಿ 3 ಗಂಟೆಗೆ ನಡೆಸಿದ ಈ ದಾಳಿಯಲ್ಲಿ ಪಾರ್ಟಿಯಲ್ಲಿ ಭಾಗವಹಿಸಿದ್ದ 130 ಜನರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ಭಾಗವಹಿಸಿದವರೆಲ್ಲರೂ ಬೆಂಗಳೂರಿನ ವಾಸಿಗಳಾಗಿದ್ದು, 150ಕ್ಕೂ ಹೆಚ್ಚು ಜನರು ಸೇರಿದ್ದ ಈ ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ಬಳಕೆಯ ಸಂಶಯ ಇರುವುದರಿಂದ ಎಲ್ಲಾ ಬಂಧಿತರನ್ನು ರಾಮನಗರ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಸದ್ಯ ಎಲ್ಲಾ ಬಂಧಿತರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಮಾದಕ ವಸ್ತುಗಳ ಬಳಕೆ ಇತ್ತೇ ಎಂಬುದನ್ನು ನಿರ್ಧರಿಸಲು ಈ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪೊಲೀಸರು ಮುಂದಿನ ಕಾನೂನು ಕ್ರಮಕ್ಕೆ ಮೆಡಿಕಲ್ ರಿಪೋರ್ಟ್‌ಗಾಗಿ ಕಾಯುತ್ತಿದ್ದಾರೆ.





