ಬೆಂಗಳೂರು: ‘ಕಾಂತಾರ’ ಚಿತ್ರದ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ರಿಷಬ್ ಶೆಟ್ಟಿ ಅವರು ಸ್ವಲ್ಪ ಸಮಯ ದೇವೇಗೌಡರೊಂದಿಗೆ ಮಾತನಾಡಿದರು.
ಕಳೆದ ವಾರ ಜ್ವರ ಮತ್ತು ಮೂತ್ರದ ಸೋಂಕಿನ ಸಮಸ್ಯೆಯಿಂದಾಗಿ ದೇವೇಗೌಡ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ವಾರದ ಚಿಕಿತ್ಸೆಯ ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ಅಕ್ಟೋಬರ್ 13ರಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.
ದೇವೇಗೌಡರ ವೈದ್ಯಕೀಯ ತಂಡವು ಅವರಿಗೆ ಕೆಲವು ದಿನಗಳ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದೆ. ವೈದ್ಯರು ಬಿಸಿಲು ಮತ್ತು ಧೂಳಿರುವ ವಾತಾವರಣಕ್ಕೆ ಹೋಗದಂತೆ ಮತ್ತು ಮರುಸೋಂಕು ತಗಲದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.