ಸಾಯಿ ಮಿನರಲ್ಸ್ ಗಣಿಗಾರಿಕೆ ಅಕ್ರಮ ಕೇಸ್: ಹೆಚ್‌ಡಿಕೆ ವಿರುದ್ಧ ರಾಜಭವನ ಕದ ತಟ್ಟಿದೆ ಲೋಕಾಯುಕ್ತ..!

ಸಾಯಿ ಮಿನರಲ್ಸ್ ಗಣಿಗಾರಿಕೆ ಅಕ್ರಮ ಹಗರಣ ಮತ್ತೆ ಮುನ್ನೆಲೆಗೆ..!

Hdk

ಸಾಯಿ ಮಿನರಲ್ಸ್ ಗಣಿಗಾರಿಕೆ ಅಕ್ರಮ ಪ್ರಕರಣ ಇದೀಗ್ ಮತ್ತೆ ಮುನ್ನಲೆಗೆ ಬಂದಿದೆ. ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಲೋಕಾಯುಕ್ತ ಮತ್ತೆ ರಾಜಭವನ ಕದ ತಟ್ಟಿದೆ.

ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 550 ಎಕರೆ ಗಣಿ ಭೂಮಿಯನ್ನು ಕಾನೂನುಬಾಹಿರವಾಗಿ ವಿನೋದ್ ಗೋಯಲ್ ಎಂಬವರಿಗೆ ಮಂಜೂರು ಮಾಡಲು ಸಹಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ವಿರುದ್ದ ಲೋಕಾಯುಕ್ತ ಮತ್ತೆ ರಾಜಭವನ ಕದ ತಟ್ಟಿದೆ. ಸರಿಸುಮಾರು 4500 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ಹಿಂದೆ ಲೋಕಾಯುಕ್ತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಪ್ರಾಸಿಕ್ಯೂಷನ್ ಮಂಜೂರಾತಿ ಕೋರಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಬೆಣ್ಣೆನಗರಿಯಲ್ಲಿ ಭೂ ಮಾಫಿಯಾ…ರೌಡಿಗಳ ದರ್ಬಾರ್!

ಲೋಕಾಯುಕ್ತ ನೀಡಿರುವ ದೋಷಾರೋಪ ಪಟ್ಟಿಯನ್ನು ಕನ್ನಡದಿಂದ ಇಂಗ್ಲೀಷಗೆ ತರ್ಜುಮೆ ಮಾಡಿ, ವರದಿ ಸಲ್ಲಿಸಿ ಎಂದು ರಾಜ್ಯಪಾಲರು ಸೂಚನೆ ನೀಡಿದ್ದರು. ಸೂಚನೆ ಬೆನ್ನಲ್ಲೆ ಲೋಕಾ ಇದೀಗ ಸರಿಸುಮಾರು 4 ಸಾವಿರದ 500 ಪುಟಗಳ ದೋಷಾರೋಪ ಪಟ್ಟಿ ತರ್ಜುಮೆ ರಾಜ್ಯಪಾಲರಿಗೆ ಕಳೆದ ವಾರ ಸಲ್ಲಿಸಿದ್ದಾರೆ.

ಏನಿದು ಪ್ರಕರಣ..?

2007ರ ಅಕ್ಟೋಬರ್ 5ರಂದು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಎನ್ಇಬಿ ರೇಂಜ್ ನಲ್ಲಿ 550 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಲೀಸ್ ನೀಡಲು ಲೈಸನ್ಸ್ ಗೆ ಅನುಮೋದಿಸುವ ಕಡತಕ್ಕೆ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಸಹಿ ಹಾಕಿದ್ದರು. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿ ಆಂಧ್ರಪ್ರದೇಶ ಮೂಲದ ಜಂತಕಲ್ ಮೈನಿಂಗ್ ಕಂಪನಿಯ ಸಹವರ್ತಿ ಸಂಸ್ಥೆಯಾಗಿತ್ತು. ಲೈಸನ್ಸ್ ನೀಡುವಂತೆ 29 ಅರ್ಜಿಗಳು ಸಲ್ಲಿಕೆಯಾಗಿದ್ದರೂ, ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಯ ಅರ್ಜಿಯನ್ನು ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ಅನುಮೋದನೆ ನೀಡಿದ್ದಾರೆ ಎಂಬ ಆರೋಪ ಕುಮಾರಸ್ವಾಮಿ ಮೇಲಿದೆ. ಸದ್ಯ ಲೋಕಾ ಎಸ್ ಐಟಿ ಈಗ ಸಂಪೂರ್ಣ ದೋಷಾರೋಪ ಪಟ್ಟಿ ಅನ್ನು ರಾಜಭವನಕ್ಕೆ ನೀಡಲಾಗಿದೆ.

ಬಸವರಾಜ ಕುಂಬಾರ, ಕ್ರೈಂ ಬ್ಯೂರೋ, ಗ್ಯಾರಂಟಿ ನ್ಯೂಸ್ 
Exit mobile version