• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿಧಾನಪರಿಷತ್’ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 14, 2026 - 12:16 pm
in ಕರ್ನಾಟಕ
0 0
0
Untitled design 2026 08 14T121515.868

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನವಾದ ಶುಕ್ರವಾರ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಬಹುಮತದ ಬೆಂಬಲದೊಂದಿಗೆ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಧ್ವನಿಮತದ ಮೂಲಕ ನಡೆದ ಚುನಾವಣೆಯಲ್ಲಿ ಸಲೀಂ ಅಹ್ಮದ್ ಪರವಾಗಿ 38 ಮತಗಳು ಚಲಾವಣೆಯಾಗಿದ್ದು, ಎನ್‌ಡಿಎ ಅಭ್ಯರ್ಥಿ ಬಿಜೆಪಿಯ ಪಿ.ಎಚ್. ಪೂಜಾರ್ ಪರವಾಗಿ 30 ಮತಗಳು ದಾಖಲಾಗಿವೆ.

ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ವಿಧಾನ ಪರಿಷತ್ತಿನ ಒಟ್ಟು 75 ಸದಸ್ಯರ ಪೈಕಿ ಕಾಂಗ್ರೆಸ್‌ಗೆ 38, ಬಿಜೆಪಿಗೆ 25, ಜೆಡಿಎಸ್‌ಗೆ 6 ಹಾಗೂ ಒಬ್ಬ ಪಕ್ಷೇತರ ಸದಸ್ಯರಿದ್ದಾರೆ. ಐದು ಸ್ಥಾನಗಳು ಖಾಲಿ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಸಂಖ್ಯಾಬಲವನ್ನು ಸಮರ್ಥವಾಗಿ ಬಳಸಿಕೊಂಡು ಸಭಾಪತಿ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

RelatedPosts

ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ

ವಾಲ್ಮೀಕಿ ಹಗರಣ: ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬೃಹತ್ ಪಾದಯಾತ್ರೆಗೆ ಸಜ್ಜು!

ADVERTISEMENT
ADVERTISEMENT

ಹಂಗಾಮಿ ಸಭಾಪತಿ ಪುಟ್ಟಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಭಾಪತಿ ಸ್ಥಾನಕ್ಕೆ ಒಟ್ಟು ಏಳು ಪ್ರಸ್ತಾವಗಳು ಸಲ್ಲಿಕೆಯಾಗಿದ್ದವು. ಅವುಗಳಲ್ಲಿ ಐದು ಪ್ರಸ್ತಾವಗಳು ಸಲೀಂ ಅಹ್ಮದ್ ಪರವಾಗಿದ್ದರಿಂದ ಧ್ವನಿಮತಕ್ಕೆ ಹಾಕಲಾಯಿತು. ಬಹುಮತದ ಬೆಂಬಲ ಪಡೆದ ಸಲೀಂ ಅಹ್ಮದ್ ಅವರನ್ನು ಅಧಿಕೃತವಾಗಿ ವಿಧಾನ ಪರಿಷತ್ ಸಭಾಪತಿಯಾಗಿ ಘೋಷಿಸಲಾಯಿತು.

1964ರ ಜನವರಿ 1ರಂದು ಜನಿಸಿದ ಸಲೀಂ ಅಹ್ಮದ್ ಅವರು ಎಂ.ಎ ಪದವೀಧರರಾಗಿದ್ದು, ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ತಂದೆ ಅಝೀಝ್ ಅಹ್ಮದ್ ಅವರ ಪ್ರೇರಣೆಯಲ್ಲಿ ವಿದ್ಯಾರ್ಥಿ ಚಳವಳಿಯಿಂದಲೇ ರಾಜಕೀಯ ಪ್ರವೇಶಿಸಿದ ಅವರು, 1982–86ರ ಅವಧಿಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಗುರುತಿಸಿಕೊಂಡರು.

ಎನ್‌ಎಸ್‌ಯುಐನಲ್ಲಿ ಬ್ಲಾಕ್ ಅಧ್ಯಕ್ಷ, ಬೆಂಗಳೂರು ನಗರ ಉಪಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅವರು, 1987ರಿಂದ 1993ರವರೆಗೆ ರಾಜ್ಯ ಎನ್‌ಎಸ್‌ಯುಐ ಅಧ್ಯಕ್ಷರಾಗಿದ್ದರು. ಬಳಿಕ 1993–97ರ ಅವಧಿಯಲ್ಲಿ ರಾಷ್ಟ್ರೀಯ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಹಾಗೂ ಭಾರತೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಿದರು.

2002ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸದಸ್ಯರಾದ ಸಲೀಂ ಅಹ್ಮದ್, 2018–20ರಲ್ಲಿ ತೆಲಂಗಾಣ ಉಸ್ತುವಾರಿಯಾಗಿ ಎಐಸಿಸಿ ಕಾರ್ಯದರ್ಶಿಯಾಗಿದ್ದರು. ನಂತರ 2020ರಿಂದ 2024ರವರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರ ವಹಿಸಿದರು.

1996ರಲ್ಲಿ ಮೊದಲ ಬಾರಿಗೆ ವಿಧಾನಸಭೆಯಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಅವರು, 2000–07ರ ಅವಧಿಯಲ್ಲಿ ಸರ್ಕಾರದ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸಿದರು. 2002ರಲ್ಲಿ ಮರುಆಯ್ಕೆಯಾಗಿದ್ದ ಅವರು, 2017–18ರಲ್ಲಿ ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾಗಿಯೂ ಸೇವೆ ಸಲ್ಲಿಸಿದರು. 2022ರಲ್ಲಿ ಹುಬ್ಬಳ್ಳಿ–ಧಾರವಾಡ, ಹಾವೇರಿ ಹಾಗೂ ಗದಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಮೂರನೇ ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದು, 2023ರಲ್ಲಿ ಮತ್ತೆ ಸರ್ಕಾರದ ಮುಖ್ಯ ಸಚೇತಕರಾಗಿ ನೇಮಕಗೊಂಡಿದ್ದರು.

ಸಲೀಂ ಅಹ್ಮದ್ ಅವರು 2012ರಿಂದ 2014ರವರೆಗೆ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಸಂಘಟನೆಯ (NYKS) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮಾಸ್ಕೋ, ದಕ್ಷಿಣ ಕೊರಿಯಾ ಹಾಗೂ ಅಮೆರಿಕದಲ್ಲಿ ನಡೆದ ಅಂತರರಾಷ್ಟ್ರೀಯ ಯುವ ಸಮ್ಮೇಳನಗಳು ಮತ್ತು ರಾಜಕೀಯ ಅಧ್ಯಯನ ನಿಯೋಗಗಳಲ್ಲಿ ಭಾರತೀಯ ಪ್ರತಿನಿಧಿಯಾಗಿ ಭಾಗವಹಿಸಿರುವ ಅನುಭವವೂ ಅವರ ರಾಜಕೀಯ ಜೀವನಕ್ಕೆ ವಿಶೇಷ ಮೆರುಗು ತಂದಿದೆ.

ವಿದ್ಯಾರ್ಥಿ ನಾಯಕತ್ವದಿಂದ ರಾಷ್ಟ್ರೀಯ ಕಾಂಗ್ರೆಸ್ ಸಂಘಟನೆಯವರೆಗೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಸಲೀಂ ಅಹ್ಮದ್ ಇದೀಗ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯಾಗಿ ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 14T123938.846

ನಾಳೆಯಿಂದ ಪುರುಷ, ಮಹಿಳಾ ಹಾಕಿ ವಿಶ್ವಕಪ್​ ಪ್ರಾರಂಭ

by ದಿಶಾ ಕೆ. ಎಸ್.
August 14, 2026 - 12:48 pm
0

Untitled design 2026 08 14T121515.868

ವಿಧಾನಪರಿಷತ್’ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

by ದಿಶಾ ಕೆ. ಎಸ್.
August 14, 2026 - 12:16 pm
0

Untitled design 2026 08 14T114503.538

ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

by ದಿಶಾ ಕೆ. ಎಸ್.
August 14, 2026 - 11:49 am
0

Untitled design 2026 08 14T110247.526

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by ದಿಶಾ ಕೆ. ಎಸ್.
August 14, 2026 - 11:13 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 14T114503.538
    ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ
    August 14, 2026 | 0
  • Untitled design 2026 08 14T105227.222
    ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ
    August 14, 2026 | 0
  • Untitled design 2026 08 14T103414.570
    ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ
    August 14, 2026 | 0
  • Untitled design 2026 08 14T082112.642
    ವಾಲ್ಮೀಕಿ ಹಗರಣ: ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬೃಹತ್ ಪಾದಯಾತ್ರೆಗೆ ಸಜ್ಜು!
    August 14, 2026 | 0
  • Untitled design 2026 08 14T080031.861
    “ಸಂಧ್ಯಾ ಕಿರಣ” ಆರೋಗ್ಯ ಯೋಜನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version