ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್‌ಗೆ ಮತ್ತೆ ಬೆಳ್ತಂಗಡಿ ಪೊಲೀಸರ ಬುಲಾವ್

Untitled design 2025 08 29t090953.300

ಮಂಗಳೂರು, ಆಗಸ್ಟ್ 29, 2025: ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಎಐ ವಿಡಿಯೋಗಳನ್ನು ಪ್ರಕಟಿಸಿ ಗೊಂದಲ ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ಬೆಳ್ತಂಗಡಿ ಪೊಲೀಸರು ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಈಗಾಗಲೇ ಎರಡು ದಿನಗಳ ಕಾಲ ವಿಚಾರಣೆಗೆ ಒಳಗಾಗಿರುವ ಸಮೀರ್, ಇಂದು ಮತ್ತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಎಸ್ಐಟಿ (ವಿಶೇಷ ತನಿಖಾ ತಂಡ) ಸಮೀರ್‌ನಿಂದ ಕಾಲ್ಪನಿಕ ವಿಡಿಯೋ ತಯಾರಿಕೆಗೆ ಬಳಸಿದ ಮೊಬೈಲ್, ಕಂಪ್ಯೂಟರ್ ಸೇರಿದಂತೆ ವಿವಿಧ ಸಾಧನಗಳನ್ನು ವಶಪಡಿಸಿಕೊಳ್ಳಲು ಸಿದ್ಧತೆ ನಡೆಸಿದೆ.

ಸಮೀರ್ ಎಂ.ಡಿ. ಧರ್ಮಸ್ಥಳದಲ್ಲಿ ಬಗ್ಗೆ ಎಐ ತಂತ್ರಜ್ಞಾನ ಬಳಸಿದ ವಿಡಿಯೋವನ್ನು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟಿಸಿದ್ದರು. ಈ ವಿಡಿಯೋ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವ ಉದ್ದೇಶ ಹೊಂದಿತ್ತು ಎಂದು ಆರೋಪಿಸಿ, ಧರ್ಮಸ್ಥಳ ಪೊಲೀಸರು ಜುಲೈ 12ರಂದು ಸಮೀರ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಆಗಸ್ಟ್ 19ರಂದು ಮಂಗಳೂರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದರು.

ಆಗಸ್ಟ್ 24 ಮತ್ತು 25ರಂದು ಸಮೀರ್ ಎಂ.ಡಿ. ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಪೊಲೀಸರು ಸಮೀರ್‌ಗೆ ವಿಡಿಯೋ ತಯಾರಿಕೆಯ ಉದ್ದೇಶ, ಫಂಡಿಂಗ್‌ನ ಮೂಲ, ಮತ್ತು ಸಂಚಿನ ಹಿಂದಿನ ವ್ಯಕ್ತಿಗಳ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಿದ್ದರು. ವಿಚಾರಣೆಯ ಸಂದರ್ಭದಲ್ಲಿ ಸಮೀರ್‌ನ ಧ್ವನಿ ದಾಖಲೀಕರಣವನ್ನೂ ಮಾಡಲಾಗಿದೆ. ಸಮೀರ್‌ನ ವಿಡಿಯೋಗಳು ಧರ್ಮಸ್ಥಳದ ಘನತೆಗೆ ಧಕ್ಕೆ ತಂದಿವೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಬಿಜೆಪಿಯಿಂದ ಎನ್‌ಐಎ ತನಿಖೆಗೆ ಒತ್ತಾಯಿಸಲಾಗಿದೆ.

Exit mobile version