ಬೆಂಗಳೂರು ಉತ್ತರ ಲೋಕಸಭಾ ಸಂಸದೆ ಆಗಿರುವ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬೆಟ್ಟಲಸೂರು ಗ್ರಾಮ ಪಂಚಾಯಿತಿ ಸದಸ್ಯರಾದ ತರಹುಣಸೆ ಗ್ರಾಮದ ರಾಜಣ್ಣನವರು ಹಾಗೂ ಸುಗ್ಗಟ್ಟು ಗ್ರಾಮದ ಕಾಂಗ್ರೆಸ್ ಮುಖಂಡರಾದ ವೀರಣ್ಣ, ಗಜೇಂದ್ರ, ಸುನೀಲ ಯಾದವ್ ಹಾಗೂ ಹಲವಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು, ನಮ್ಮ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಬಿಜೆಪಿ ಧ್ವಜವನ್ನು ನೀಡಿ ಸಂಸದೆ ಶೋಭಾ ಕರಂದ್ಲಾಜೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಹೆಚ್.ಸಿ.ತಮ್ಮೇಶ್ ಗೌಡ ಅವರು, ಬ್ಯಾಟರಾಯನಪುರ ಮಂಡಲ ಅಧ್ಯಕ್ಷರಾದ ಶ್ರೀ ಹನುಮಂತ ಗೌಡ ಅವರು, ಮೋರ್ಚಾದ ಎಲ್ಲಾ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ADVERTISEMENT
ADVERTISEMENT