ಯಾವುದೇ ಸಂಘಟನೆಯನ್ನು ಗುರಿಯಾಗಿಸಿಲ್ಲ: ಸಿದ್ದರಾಮಯ್ಯ ಸ್ಪಷ್ಟೀಕರಣ

Untitled design 2025 10 18t143307.445

ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಂಘ-ಸಂಸ್ಥೆಗಳ ಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶವು ಯಾವುದೇ ನಿರ್ದಿಷ್ಟ ಸಂಘಟನೆಯನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ಸಂಘ-ಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ನೀಡಬಾರದು ಎಂಬುದೇ ನಮ್ಮ ನಿಲುವು. ಈ ಆದೇಶವನ್ನು ಯಾವುದೇ ನಿರ್ದಿಷ್ಟ ಸಂಘಟನೆಯ ವಿರುದ್ಧ ಗುರಿಯಾಗಿಸಿಲ್ಲ.

ಕುಂದಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನವನ್ನು ಮುಂದಿರಿಸಿದ ವಿವಾದದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಕೂಡ ಇದೇ ರೀತಿಯ ಆದೇಶವನ್ನು ಹೊರಡಿಸಿತ್ತು. ಆ ಸಮಯದಲ್ಲಿ ಯಾರೂ ಇದನ್ನು ವಿರೋಧಿಸಲಿಲ್ಲ. ನಮ್ಮ ಸರ್ಕಾರವೂ ಅದೇ ಮಾರ್ಗಸೂಚಿಗಳನ್ನು ಅನುಸರಿಸುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿ ಜನರ ಹಿತಚಿಂತನೆ ಮಾಡುವುದನ್ನು ಬಿಟ್ಟು ರಾಜಕೀಯದಲ್ಲಿ ತೊಡಗಿದ್ದಾರೆ. ಅವರು ಸರ್ಕಾರದ ನೀತಿ ನಿಯಮಗಳನ್ನು ತಪ್ಪಾಗಿ ಅರ್ಥೈಸಿಕೊಂಡು ಅಸ್ಥಿರತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ದ ಕಿಡಿಕಾರಿದರು.

 ಸಾರ್ವಜನಿಕ ಸ್ಥಳಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ನಮ್ಮ ಪ್ರಥಮ ಕರ್ತವ್ಯ. ಯಾವುದೇ ಸಂಘಟನೆಯು ಸಾರ್ವಜನಿಕರಿಗೆ ಅಸೌಕರ್ಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Exit mobile version