ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Untitled design 2026 05 28T073811.130

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಇಂದು ದೊಡ್ಡ ಬೆಳವಣಿಗೆ ಉಂಟಾಗಿದೆ. ಕಳೆದ ಆರು ತಿಂಗಳಿಂದ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವದ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಗೊಂದಲಕ್ಕೆ ಇಂದು ತೆರೆ ಬೀಳಲಿದೆ. ಕರ್ನಾಟಕ ಕಂಡ ಸುಧೀರ್ಘ ಅವಧಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಲಿದ್ದಾರೆ. ಈ ಬೆಳವಣಿಗೆ ರಾಜ್ಯದ ಜನತೆ ಮತ್ತು ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಕುತೂಹಲ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.

ರಾಜೀನಾಮೆ ಹಿನ್ನೆಲೆ ಏನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವ ಸಹೋದರರಿಗಾಗಿ ಉಪಾಹಾರ ಕೂಟವನ್ನು ಆಯೋಜಿಸಿದ್ದರು. ಈ ಸಭೆಯಲ್ಲಿ ಹಲವಾರು ಪ್ರಮುಖ ಸಚಿವರು ಭಾಗವಹಿಸಿದ್ದು, ನಂತರದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆದಿದೆ. ಮಧ್ಯಾಹ್ನದ ನಂತರ, ಕಾಂಗ್ರೆಸ್ ಹೈಕಮಾಂಡ್‌ನ ಸೂಚನೆಯಂತೆ ರಾಹುಲ್ ಗಾಂಧಿ ಅವರ ನಿರ್ದೇಶನದ ಮೇರೆಗೆ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಅದರ ಬಳಿಕ ಅವರು ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ ಎಂದು  ಮೂಲಗಳು ತಿಳಿಸಿವೆ.

ಬೆಂಬಲಿಗರ ಆಕ್ರೋಶ

ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಅವರ ನಿಷ್ಠಾವಂತ ಬೆಂಬಲಿಗರು ಮತ್ತು ಅಭಿಮಾನಿಗಳು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬಾರದು ಎಂದು ಒತ್ತಾಯಿಸಿ ಕೆಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಸಿದ್ದರಾಮಯ್ಯ ಅವರು ಕರ್ನಾಟಕದ ಅತೀ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದು, ಅವರ ನೇತೃತ್ವದಲ್ಲಿ ರಾಜ್ಯ ಹಲವಾರು ಯೋಜನೆಗಳನ್ನು ಕಂಡಿದೆ. 

ಮುಂದೆ ಯಾರು ಮುಖ್ಯಮಂತ್ರಿ?

ಸಿದ್ದರಾಮಯ್ಯ ರಾಜೀನಾಮೆಯ ನಂತರ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸ ಮುಖ್ಯಮಂತ್ರಿಯ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಪ್ರಬಲ ಅಭ್ಯರ್ಥಿಯಾಗಿ ಉಳಿದಿದ್ದಾರೆ. ಆದರೆ ಇತರ ಹಿರಿಯ ಸಚಿವರ ಹೆಸರುಗಳೂ ಕೇಳಿಬರುತ್ತಿವೆ. ಕಾಂಗ್ರೆಸ್ ಹೈಕಮಾಂಡ್ ಸಮತೋಲನದ ನಿರ್ಧಾರವೊಂದನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.

Exit mobile version