• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆ ಮಾಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 17, 2025 - 6:20 pm
in Flash News, ಕರ್ನಾಟಕ
0 0
0
Befunky collage 2025 03 17t181940.938

ನಮ್ಮ ಸರ್ಕಾರ  20ಮೇ 2023ರಲ್ಲಿ ಅಧಿಕಾರಕ್ಕೆ ಬಂದಿದೆ. ಜನರ ಆರ್ಶೀವಾದದರಿಂದ ಜನ 136 ಸ್ಥಾನ ನೀಡುವುದರ ಮೂಲ ಅಧಿಕಾರ ನೀಡಿದ್ದಾರೆ. ಇದೇ ಮೇ 20ಕ್ಕೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆಗುತ್ತಿದೆ. ಜನ ಅಧಿಕಾರ ಕೊಟ್ಟ ಮೇಲೆ ಅಧಿಕಾರಕ್ಕೋಸ್ಕರ ಅಧಿಕಾರ ಮಾಡದೇ ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ, ಬಸವಣ್ಣ ಹೇಳಿದಂತೆ “ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು. ಸದನದಲ್ಲಿ ಮಾತನಾಡಿದರೆ ಜನರ ಅಭಿರುಚಿಯನ್ನು ಹೆಚ್ಚಿಸಬೇಕು. ವಿದ್ಯಾವಂತರು ಸದನಕ್ಕೆ ಬರುತ್ತಿರುವುದರಿಂದ ಚರ್ಚೆಗಳು ಅರ್ಥ ಪೂರ್ಣ ಹಾಗೂ ಆರೋಗ್ಯಕರವಾಗಿರಬೇಕು ಎಂದು ತಿಳಿಸಿದರು.

ಇಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಗಳ ಉತ್ತರ ನೀಡುತ್ತಾ ರಾಜ್ಯಪಾಲರು ಎರಡು ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಸಾಂಪ್ರದಾಯಿಕವಾಗಿ ವರ್ಷ ಪ್ರಾರಂಭದ ಮೊದಲ ಅಧಿವೇಶನದ ಪ್ರಾರಂಭದಲ್ಲಿ ರಾಜ್ಯಪಾಲರು ಸರ್ಕಾರದ ಅಭಿವೃದ್ಧಿಗಳು, ಸಾಧನೆಗಳೇನು, ಗುರಿಗಳೇನು ಎಂಬುದನ್ನು ಒಂದು ಗಂಟೆಗೂ ಮೀರಿ ಸುದೀರ್ಘವಾಗಿ ಮಾತನಾಡಿ ಸರ್ಕಾರದ ಸಾಧನೆಗಳನ್ನು ಓದಿ ಹೇಳಿದ್ದಾರೆ ವಿಧಾನಸಭೆಯ ಹಿರಿಯ ಸದಸ್ಯ ಟಿ.ಬಿ. ಜಯಚಂದ್ರ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯವನ್ನು ಸಲ್ಲಿಸಿದ್ದಾರೆ. ವಿಧಾನ ಸಭೆಯ ನೂತನ ಸದಸ್ಯೆ ನಯನ ಮೋಟಮ್ಮ ರಾಜ್ಯಪಾಲರ ಭಾಷಣವನ್ನು ಅನುಮೋದಿಸಿ ಭಾಷಣ ಮಾಡಿದ್ದಾರೆ.

RelatedPosts

ವಿರೋಧ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಉಡುಗೊರೆ: 25 ಕೋಟಿ ಅನುದಾನ ಬಿಡುಗಡೆ

15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ಗುಜರಿಗೆ ಹಾಕಿ: ಸರ್ಕಾರದಿಂದ ಮಹತ್ವದ ಆದೇಶ

ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡಗೆ ಆಯ್ಕೆ ಅಸಿಂಧು ಎಂದ ಕರ್ನಾಟಕ ಹೈಕೋರ್ಟ್

ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ..!

ADVERTISEMENT
ADVERTISEMENT

ರಾಜ್ಯಪಾಲರ ಭಾಷಣಕ್ಕೆ ವಿರೋಧ ಪಕ್ಷದ ನಾಯಕರಾದಿಯಾಗಿ 14 ಜನ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರು ಮಾತನಾಡಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯದಲ್ಲಿ ಭಾಗವಹಿಸಿದವರಿಗೆ ಅಭಿನಂದನೆ ಸಲ್ಲಿಸಿ, ರಾಜ್ಯಪಾಲರ ಭಾಷಣವನ್ನು ಕೆಲವರು ಟೀಕಿಸಿದ್ದಾರೆ, ಹಲವರು ವಾಸ್ತವಿಕವಾಗಿ ಮಾತನಾಡಿದ್ದಾರೆ, ಕೆಲವರು ಸಮರ್ಥಿಸಿದ್ದಾರೆ, ಕೆಲವರು ವಿರೋಧಿಸಲೆಂದೇ ವಿರೋಧಿಸಿ ಮಾತನಾಡಿದ್ದಾರೆ. ಅವರೆಲ್ಲರ ಸಲಹೆ ಸೂಚನೆಗಳನ್ನು ಸರ್ಕಾರ ಸ್ವಾಗತಿಸಿ, ಸರ್ಕಾರದ ನಿಲುವನ್ನು ಸದನಕ್ಕೆ ತಿಳಿಸಿ ವಂದನಾ ನಿರ್ಣಯವನ್ನು ಅಂಗೀಕಾರ ಮಾಡಬೇಕೆಂದು ವಿಧಾನಸಭೆಯಲ್ಲಿ ವಿನಂತಿಸಿದರು.

ಗ್ಯಾರಂಟಿ ಯೋಜನೆಗಳು ಮುಂದುವರಿಕೆ-ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ:
ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್ ದೇಶದ ಸುಲೇಮಾನ್ ಹ್ಯಾಂಕ್, ವಿಶ್ವಸಂಸ್ಥೆ ಜನರಲ್ ಬಾಡಿ ಅಧ್ಯಕ್ಷರು ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ, ಮೆಚ್ಚಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲೀμï ಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದನ್ನು ಸದನದ ಗಮನಕ್ಕೆ ತಂದು ಗ್ಯಾರಂಟಿ ಯೋಜನೆಗಳಿಂದ ಜನರ ಆತ್ಮವಿಶ್ವಾಸ ಹೆಚ್ಚಿದ್ದು ಮಾತ್ರವಲ್ಲದೇ ಸ್ವಾಭಿಮಾನ ಹೆಚ್ಚಿತ್ತಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ ಅವರ ಬದುಕು ಸುಧಾರಣೆಯಾಗಲಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದುಕೊಳ್ಳುತ್ತದೆ ಎಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಉತ್ತರದಲ್ಲಿ ತಿಳಿಸಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಕೇಂದ್ರ ಸರ್ಕಾರದ Indian Institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ ಜಿತೇಂದ್ರ ಸಿಂಗ್ ಪ್ರಶಂಸೆಯ ವರದಿಯನ್ನು ನೀಡಿದ್ದಾರೆ.

ದಿನಾಂಕ 3-1-2025 ರಂದು ಚಂದ್ರ ಬಾಬು ನಾಯ್ದು ಅವರ ಸರ್ಕಾರದ ಮಂತ್ರಿಗಳು ಹಾಗೂ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಕುರಿತು ಅಧ್ಯಯನ ಮಾಡಿ ಹೋಗಿದ್ದಾರೆ. 2-2-2025 ರಂದು ಮಹಾರಾಷ್ಟ್ರದ ಸಾರಿಗೆ ಸಚಿವರಾದ ಪ್ರತಾಪ್ ಸರ್‍ನಾಯಕ್ ಶಕ್ತಿ ಯೋಜನೆ ಬಗ್ಗೆ ಚರ್ಚಿಸಿ ತೆರಳಿದ್ದಾರೆ. 5-3-2025 ರಂದು ಕೇರಳದಿಂದ ಸಚಿವರು ಬಂದು ಅಧ್ಯಯನ ಮಾಡಿ ಹೋಗಿದ್ದಾರೆ.

ಕೇಂದ್ರ ಸರ್ಕಾರದ Indian Institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ ಜಿತೇಂದ್ರ ಸಿಂಗ್ ಅವರು ಗೃಹಲಕ್ಷ್ಮಿ ಮತ್ತು ಶಕ್ತಿ ಗ್ಯಾರಂಟಿ ಯೋಜನೆಗಳ ಕುರಿತು ಪ್ರಶಂಸೆ ಮತ್ತು ಸಲಹೆ ಕೊಟ್ಟಿದ್ದಾರೆ. ಈ ವರದಿಗಳಿಂದ ಸರ್ಕಾರಕ್ಕೆ ಉಪಯೋಗವಾಗಿದೆ.

ತಪ್ಪುಗಳಿದ್ದರೆ ಸರ್ಕಾರದ ಖಜಾನೆಗೆ ತೊಂದರೆಯಿದ್ದರೆ ಸರ್ಕಾರದ ಗಮನಕ್ಕೆ ತರುವುದು ವಿರೋಧಪಕ್ಷದ ಕೆಲಸ. ಆದರೆ ವಿರೋಧಪಕ್ಷದವರು ಅಭಿರುಚಿ ಹೀನ ಮಾತುಗಳನ್ನಾಡಬಾರದು. ಯೋಜನೆಗಳ ಬಗ್ಗೆ ಸಕಾರಾತ್ಮಕ ಟೀಕೆಗಳನ್ನು ಮಾಡಬೇಕು ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗೆ ಫೆಬ್ರವರಿ ವರೆಗೆ ನಾವು, ನಮ್ಮ ಸರ್ಕಾರ ಬರೋಬ್ಬರಿ 76,509 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಫಲಾನುಭವಿಗಳಿಗೆ ಇದರಿಂದ ಪ್ರಯೋಜನವಾಗಿದೆ. ಜೂನ್ 11, 2023 ರಿಂದ 410 ಕೋಟಿ ಜನ ಶಕ್ತಿ ಯೋಜನೆಯಡಿ ಓಡಾಡಿದ್ದಾರೆ. 2024-25 ಕ್ಕೆ 52,0009 ಕೋಟಿ ಇಟ್ಟು, 41509 ಕೋಟಿ ರೂಪಾಯಿ ವೆಚ್ಚ ಮಾಡಿದ್ದೇವೆ. ಖಜಾನೆ ಖಾಲಿ ಯಾಗಿದೆ ಎಂಬ ಮಾತು ಸತ್ಯಕ್ಕೆ ದೂರ ಅಂಕಿ ಅಂಶಗಳ ಮೂಲಕ ಸಭೆಗೆ ತಿಳಿಸಿ , 1.26 ಕೋಟಿ ಕುಟುಂಬಗಳಿಗೆ ಯೋಜನೆಗಳು ತಲುಪುತ್ತಿದ್ದು, ಕೊಟ್ಟ ಮಾತಿನಂತೆ ನಡೆದಿದ್ದೇವೆ. ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಬಡವರಲ್ಲಿ ಆತ್ಮವಿಶ್ವಾಸ ಹೆಚ್ಚಿದ್ದು ಮಾತ್ರವಲ್ಲ, ಸ್ವಾಭಿಮಾನ ಹೆಚ್ಚುತ್ತಿದೆ. ಜನರು ಸಾಮಾಜಿಕವಾಗಿ ಆರ್ಥಿಕವಾಗಿ ನಿರ್ಭಯವಾಗಿ, ಅವರ ಬದುಕು ಸುಧಾರಣೆಯಾಗಿದೆ. ಸಮಾನತೆಯ ಭಾವ ಉಂಟಾಗುತ್ತಿದೆ ಎಂದರು.

ದೇಶದ 100 ಕೋಟಿ ಜನರಿಗೆ ಕೊಳ್ಳುವ ಆಯ್ಕೆಗಳೇ ಇಲ್ಲ ಎಂದು ವರದಿ ಬಂದಿತ್ತು. 20.5 ಕೋಟಿ ಕುಟುಂಬಗಳು ಅಂದರೆ ನೂರು ಕೋಟಿ ಜನರ ವಾರ್ಷಿಕ ಆದಾಯ 87000 ರೂಪಾಯಿಗಿಂತ ಕಡಿಮೆ ಇದೆ ಎನ್ನುವ ವರದಿ ಬಂದಿದೆ. ಅಸಮಾನತೆ ಅಷ್ಟರ ಮಟ್ಟಿಗೆ ಇದೆ. ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇರುವವರೆಗೆ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುವುದಿಲ್ಲ. ಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡುವ ಸಾರ್ವತ್ರಿಕ ಮೂಲ ಆದಾಯ ತತ್ವ ಅಗತ್ಯ. ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಜನರಲ್ಲಿ ತುಂಬಿದರೆ ಜನರ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯ. ನಾವು ಸಮಾಜದ 90% ಜನರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಿದ್ದೇವೆ. 94 ರಲ್ಲಿ 34% ಇದ್ದ ಶ್ರೀಮಂತರ ಸಂಖ್ಯೆ ಈಗ 57% ಗೆ ಹೆಚ್ಚಾಗಿದೆ. 50% ಜನರಿಗೆ ಇರುವ ಆರ್ಥಿಕ ಶಕ್ತಿ 15%ಗೆ ಕುಸಿದಿದೆ. ಇದು ಆತಂಕಕಾರಿ ಸಂಗತಿ. ಅಸಮಾನತೆಯನ್ನು ತೊಡೆದು ಹಾಕಲು ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ವಿರೋಧಪಕ್ಷ ಅಧಿಕಾರದಲ್ಲಿದ್ದಾಗ ಕ್ಯಾಪಿಟಲ್ ಹೂಡಿಕೆಗಳಿಗೆ 2,70,695 ಕೋಟಿ ಕಾಮಗಾರಿಗಳನ್ನು ಅನುದಾನ ಒದಗಿಸದೇ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿಗಳ ವಿಶೇಷ ಅನುದಾನದ ಮೂಲಕ 1,66,426 ಕೋಟಿ ನೀಡಲಾಗಿದೆ. 36 ಸಾವಿರ ಕೋಟಿ ಬಾಕಿ ಬಿಲ್ಲುಗಳು ಬಾಕಿ ಉಳಿದಿರುವುದು ವಿರೋಧಪಕ್ಷದಿಂದ ಎಂದು ತಿಳಿಸಿ ಲೆಕ್ಕ ದಾಖಲೆ ಮಂಡಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಲಾವಿದರ ಮಾಶಾಸನ ಹೆಚ್ಚಳ ಮಾಡಿರುವುದಲ್ಲದೇ 275 ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (84)

“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:44 pm
0

Web (81)

ವಿರೋಧ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಉಡುಗೊರೆ: 25 ಕೋಟಿ ಅನುದಾನ ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:35 pm
0

Web (83)

UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 16, 2025 - 7:32 pm
0

Web (80)

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

by ಶ್ರೀದೇವಿ ಬಿ. ವೈ
September 16, 2025 - 7:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • 111 (44)
    ಅವಾಚ್ಯವಾಗಿ ನಿಂದಿಸಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ: 3 ದಿನದ ಬಳಿಕ ಯುವಕ ಸಾ*ವು
    September 14, 2025 | 0
  • 111 (43)
    ಗುಜರಾತ್ ಕಾರ್ಖಾನೆಯಲ್ಲಿ ಭೀಕರ ಬೆಂಕಿ: ಸುಟ್ಟು ಕರಕಲಾದ ಫ್ಯಾಕ್ಟರಿ
    September 14, 2025 | 0
  • 111 (42)
    ಜನಸಾಮಾನ್ಯರಿಗೆ ಮತ್ತೆ ಕರೆಂಟ್ ಶಾಕ್..ವಿದ್ಯುತ್ ದರ ಏರಿಕೆಗೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಕೆ
    September 14, 2025 | 0
  • 111 (40)
    ಹಾಸನ ಗಣೇಶೋತ್ಸವ ದುರಂತ: ಮೃತ ಗೋಕುಲ್ ಕುಟುಂಬದವರಿಗೆ ದೇವೇಗೌಡರ ಸಾಂತ್ವನ
    September 14, 2025 | 0
  • 111 (36)
    ಸೌಜನ್ಯಳ ಹ*ತ್ಯೆಗೈದಿದ್ದು ಮಾನ ವಿಠಲಗೌಡ ಎಂದು ಆರೋಪಿಸಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ದೂರು
    September 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version