• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿ ಮತ್ತು RSS ಗೆ ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 2, 2025 - 1:52 pm
in Flash News, ಕರ್ನಾಟಕ, ಬೆಂ. ನಗರ
0 0
0
111 (31)

ಬೆಂಗಳೂರು: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಹೆಲಿಫ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್. 1925 ರಂದು ಪ್ರಾರಂಭವಾಗಿದ್ದು 2025 ಕ್ಕೆ ನೂರು ವರ್ಷಗಳಾಗುತ್ತಿದೆ. ಅವರು ಮೀಸಲಾತಿಯನ್ನು ಎಂದೂ ಒಪ್ಪಿಲ್ಲ ಎಂದರು.

RelatedPosts

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ ಸೂಚನೆ

ಕ್ಲೀನ್ ಫುಟ್ ಪಾತ್ ಅಭಿಯಾನಕ್ಕೆ ಸಚಿವ ಕೃಷ್ಣ ಬೈರೇಗೌಡ ಚಾಲನೆ

ಪುಟ್ ಪಾತ್ ಒತ್ತುವರಿ ತೆರವು ಹಿನ್ನಲೆ ಇಂದು ಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್

RSS ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಇಂದು ಆರಂಭ: ಬೆಳಗಾವಿಯಲ್ಲಿ ಬಿಗಿ ಭದ್ರತೆ

ADVERTISEMENT
ADVERTISEMENT
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು

ರಾಹುಲ್ ಗಾಂಧಿ ಯವರು ಎರಡು ವರ್ಷಗಳಿಂದ ಈ ಬಗ್ಗೆ ಬಹಳ ಗಂಭೀರವಾಗಿ ಒತ್ತಾಯ ಮಾಡುತ್ತಿದ್ದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೂಡ ಇದನ್ನು ಸೇರಿಸಲು ಅವರೇ ಕಾರಣಕರ್ತರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯವರಿಗೆ ಪತ್ರವನ್ನೂ ಬರೆದಿದ್ದರು. ಈ ಎಲ್ಲರ ಹೋರಾಟ ಮತ್ತು ಒತ್ತಡದ ನಂತರ ಜಾತಿಗಣತಿ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ಯಾವಾಗ ಎಂದು ಸಮಯ ನಿಗದಿ ಮಾಡಿಲ್ಲ. ಜನಗಣತಿಯಲ್ಲಿಯೇ ಜಾತಿ ಗಣತಿಯನ್ನು ಮಾಡುವುದಾಗಿ ಹೇಳಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿಯ ಗರಿಷ್ಠ ಪರಿಮಿತಿಯನ್ನು ಹೆಚ್ಚು ಮಾಡಬೇಕು ಎಂದು ಒತ್ತಾಯಿಸಿದರು.

ಸರ್ವೋಚ್ಚ ನ್ಯಾಯಾಲಯದ ವಿಭಾಗೀಯ ಪೀಠವು ಶೇ.50% ಗಿಂತ ಹೆಚ್ಚಬಾರದು ಎಂದು ಹೇಳಿದೆ. ಮೀಸಲಾತಿ 50% ಆದರೆ, ಜನಸಂಖ್ಯೆಯ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದರು.

ಹಿಂದುಳಿದವರಿಗೆ ಮೀಸಲಾತಿ ಅತ್ಯಂತ ಅನಿವಾರ್ಯ ಮತ್ತು ಅಗತ್ಯ

ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕಾಗಿರುವುದು ಅತ್ಯಂತ ಅನಿವಾರ್ಯ ಮತ್ತು ಅಗತ್ಯ. ಸಮ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಆಗ ಮಾತ್ರ ಜಾತಿಯನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ ಎಂದರು.

ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿಯನ್ನು ತರಲು ಆಗ್ರಹ

ಮೀಸಲಾತಿಯಲ್ಲಿ ಶೇ.50 ರಷ್ಟು ಗರಿಷ್ಠ ಪರಿಮಿತಿಯನ್ನು ತೆಗೆಯಬೇಕು, ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿಯನ್ನು ತರಬೇಕೆಂದು ಪ್ರಧಾನಿಗಳನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ನ್ಯಾ.ರೋಹಿಣಿ ಸಮಿತಿಯ ಶಿಫಾರಸುಗಳನ್ನೂ ಜಾರಿಗೊಳಿಸಬೇಕು

ಸಮೀಕ್ಷೆಯ ಸಮಯವನ್ನು ನಿಗದಿ ಮಾಡಬೇಕು. ನ್ಯಾಯಮೂರ್ತಿ ರೋಹಿಣಿ ಸಮಿತಿಯ ಶಿಫಾರಸುಗಳನ್ನೂ ಜಾರಿಗೊಳಿಸುವ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೂ ಕೈಗೊಳ್ಳಬೇಕು ಎಂದರು.

ಮಂಗಳೂರಿನಲ್ಲಿ ಕೊಲೆ ಆದವನು ರೌಡಿ ಶೀಟರ್ ಎನ್ನಲಾಗುತ್ತಿದೆ. ಸಮಗ್ರ ತನಿಖೆಗೆ ಸೂಚನೆ

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಯಾಗಿದ್ದು, ಪದೇಪದೇ ಕೋಮು ಗಲಭೆಗಳಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೊಲೆ ಗೀಡಾದ ವ್ಯಕ್ತಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಎಡಿಜಿಪಿ (ಕಾನೂನು ಸುವ್ಯವಸ್ಥೆ) ವರೊಂದಿಗೆ ಮಾತನಾಡಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲು ಸೂಚಿಸಿದೆ. ಮನುಷ್ಯನ ಪ್ರಾಣ ಬಹಳ ಮುಖ್ಯ. ಕೂಡಲೇ ಅಪರಾಧಿಗಳು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

ಪೆಹಲ್ಗಾಂ ಗೆ ಪ್ರಧಾನಿ ಮೋದಿ ಏಕೆ ಭೇಟಿ ನೀಡಲಿಲ್ಲ?

ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆಯಾದ ಸ್ಥಳಕ್ಕೆ ಬಿಜೆಪಿಯವರು ಭೇಟಿ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ಯಾವಾಗಲೂ ರಾಜಕೀಯವಾಗಿ ಇಂಥ ಪ್ರಕ್ರಣಗಳನ್ನೇ ಹುಡುಕುತ್ತಾರೆ. ಒಂದು ವಾರದಿಂದ ಪೆಹಲಗಾಂ ಪ್ರಕರಣದ ಬಗ್ಗೆ ಏನು ಹೇಳುತ್ತಾರೆ. ಉಗ್ರರ ದಾಳಿಗೆ 26 ಜನ ಸಾವನ್ನಪ್ಪಿದ್ದಾರೆ. ಪ್ರಧಾನಿಗಳು ಅಲ್ಲಿಗೆ ಭೇಟಿ ನೀಡಿದ್ದಾರೆಯೇ? ಬಿಜೆಪಿಯವರಿಗೆ ಪ್ರಧಾನಿ ಮೋದಿಯವರಿಗೆ ಇದು ಮುಖ್ಯ ಅನ್ನಿಸುತ್ತಿಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಪಹಲ್ಗಾಂ ಪ್ರಕರಣ ಭದ್ರತಾ ವೈಫಲ್ಯ ಕಾರಣ

ಪಹಲ್ಗಾಂ ಪ್ರಕರಣ ಭದ್ರತಾ ವೈಫಲ್ಯವಲ್ಲವೇ? ಎಂದು ಪ್ರಶ್ನಿಸಿದ ಸಿಎಂ ಕಾಶ್ಮೀರದಲ್ಲಿ ಒಬ್ಬ ಪೋಲಿಸ್ ಆಗಲಿ, ಭದ್ರತಾ ಪಡೆಯವರಾಗಲಿ ನಿಯೋಜಿಸಿಲ್ಲ. ಯಾರೂ ಇಲ್ಲ ಎಂದರೆ ಏನು ಅರ್ಥ? ನೂರಾರು ಪ್ರವಾಸಿಗರು ಭೇಟಿ ನೀಡುವ ಸ್ಥಳದಲ್ಲಿ ಪೊಲೀಸರು ಇರಬೇಕು ಎಂದರು.

ನನಗೂ ಬೆದರಿಕೆ ಕರೆ ಬಂದಿದೆ

ವಿಧಾನಸಭಾಧ್ಯಕ್ಷ ಯು.ಟಿ .ಖಾದರ್ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ ನನಗೂ ಬೆದರಿಕೆ ಕರೆಗಳು ಬರುತ್ತವೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿ, ಅವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image (10)

‘ಜನನಾಯಗನ್‌’ ಚಿತ್ರಕ್ಕೆ ಕೊನೆಗೂ ಸಿಕ್ತು ಬಿಡುಗಡೆ ಭಾಗ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 10, 2026 - 1:47 pm
0

Image (10)

ಆಸ್ಟ್ರೇಲಿಯಾ ಭೇಟಿ ಮುಗಿಸಿ ನ್ಯೂಜಿಲ್ಯಾಂಡ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

by ದಿಶಾ ಕೆ. ಎಸ್.
July 10, 2026 - 1:31 pm
0

Web Photo Editor 2026 07 10T125354.521

ಕರೂರು ಕಾಲ್ತುಳಿತದಲ್ಲಿ ಮೃತಪಟ್ಟ 41 ಜನರ ಪ್ರತಿ ಕುಟುಂಬಕ್ಕೆ ₹20 ಲಕ್ಷ ನಗದು ಪರಿಹಾರ ಘೋಷಿಸಿದ CM ವಿಜಯ್‌

by ದಿಶಾ ಕೆ. ಎಸ್.
July 10, 2026 - 1:11 pm
0

Web Photo Editor 2026 07 10T114118.162

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ ಸೂಚನೆ

by ದಿಶಾ ಕೆ. ಎಸ್.
July 10, 2026 - 12:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರೇಲಿಯಾದಲ್ಲಿ (10)
    ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (9)
    ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (6)
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿಯ ಮೂವರು ಮಾಜಿ ಸಂಸದರು ಬಿಜೆಪಿ ಸೇರ್ಪಡೆ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (5)
    ಮೊಮ್ಮಗನಿಗಾಗಿ ಪೂರಿ ಮಾಡಿದ ಸಿಎಂ ರೇವಂತ್ ರೆಡ್ಡಿ..ವಿಡಿಯೋ ವೈರಲ್
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version