ಸಿಎಂ ಸ್ವಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಾಧನೆ

Untitled design 2025 04 11t180807.722

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯರ ಸ್ವಗೃಹ ಪ್ರದೇಶವಾದ ಸಿದ್ದರಾಮನಹುಂಡಿಯ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು 2024-25ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ಲಾಘನೀಯ ಸಾಧನೆ ಗೈದು, 78% ಫಲಿತಾಂಶ ದಾಖಲಿಸಿದೆ. ಈ ಫಲಿತಾಂಶವು ಸರ್ಕಾರಿ ಕಾಲೇಜಿಗೆ ಹೆಮ್ಮೆ ತಂದಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಶ್ರಮದ ಪ್ರತಿಫಲವಾಗಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ, 15 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ, 8 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ ಇತರರು ಸಾಮಾನ್ಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಂಶುಪಾಲರು, ಉಪನ್ಯಾಸಕ ವರ್ಗ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಹಾಗು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಸಾಧನೆ ಮಾಡಿದ ವಿದ್ಯಾರ್ಥಿಗಳ ವಿವರ:

ನಿಸರ್ಗ ವೈ ಎಸ್, ನಿರೀಕ್ಷಿತ ಹಾಗೂ ಸಂಪ್ರೀತ ಕನ್ನಡ ಭಾಷಾ ವಿಷಯದಲ್ಲಿ ಶತಮಾನ ಅಂಕ (100/100) ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಾಧನೆಯು ಗ್ರಾಮೀಣ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಮಟ್ಟವನ್ನು ತೋರಿಸುವ ಉತ್ತಮ ಉದಾಹರಣೆಯಾಗಿದೆ. ವಿದ್ಯಾರ್ಥಿಗಳ ಈ ಸಾಧನೆ ಇತರರಿಗೆ ಪ್ರೇರಣೆಯಾಂತಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
Exit mobile version