ಮಹಿಳೆಯನ್ನ ಕೊಲೆಗೈದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿ ಎಸೆದ ದುಷ್ಕರ್ಮಿಗಳು!

Untitled design 2025 06 29t143257.950

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಭಯಾನಕ ಕೊಲೆಯೊಂದು ನಗರವನ್ನೇ ಬೆಚ್ಚಿಬೀಳಿಸಿದೆ. ಮಹಿಳೆಯೊಬ್ಬರನ್ನು ಕೊಲೆಗೈದ ದುಷ್ಕರ್ಮಿಗಳು, ಶವವನ್ನು ಮೂಟೆ ಕಟ್ಟಿ ಕಸದ ಲಾರಿಯಲ್ಲಿ ಇಟ್ಟು ಪರಾರಿಯಾಗಿದ್ದಾರೆ.

ಘಟನೆಯ ವಿವರ

ನಿನ್ನೆ ತಡರಾತ್ರಿ, ಆಟೋರಿಕ್ಷಾದಲ್ಲಿ ಬಂದ ಆರೋಪಿಗಳು, ಚನ್ನಮ್ಮನಕೆರೆ ಅಚ್ಚುಕಟ್ಟು ಸ್ಕೇಟಿಂಗ್ ಗ್ರೌಂಡ್ ಬಳಿಯ ಕಸದ ಲಾರಿಯಲ್ಲಿ ಮಹಿಳೆಯ ಶವವನ್ನು ಇಟ್ಟು ಕಣ್ಮರೆಯಾಗಿದ್ದಾರೆ. ಆರೋಪಿಗಳು ಶವವನ್ನು ಮೂಟೆಯಲ್ಲಿ ಕಟ್ಟಿ, ಯಾರಿಗೂ ಸಂಶಯ ಬಾರದಂತೆ ಕಸದ ಲಾರಿಯಲ್ಲಿ ಎಸೆದು ಪರಾರಿಯಾಗಿದ್ದಾರೆ. ಮಹಿಳೆಯನ್ನು ಅತ್ಯಾಚಾರಕ್ಕೊಳಗಾಗಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ, ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪೋಸ್ಟ್‌ಮಾರ್ಟಂಗಾಗಿ ರವಾನಿಸಲಾಗಿದ್ದು, ಮಹಿಳೆಯ ಗುರುತು ಪತ್ತೆ ಮಾಡುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ಸ್ಥಳದ ಸಮೀಪದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ.

Exit mobile version