• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

SIR ಅಂತಿಮ ಪಟ್ಟಿ ಪ್ರಕಟ:1 ಕೋಟಿಗೂ ಅಧಿಕ ಹೆಸರು ಔಟ್‌? ಇಲ್ಲಿದೆ ವರ್ಗವಾರು ವಿವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 27, 2026 - 2:04 pm
in ಕರ್ನಾಟಕ
0 0
0
ಔಟ್

ಬೆಂಗಳೂರು: ಕರ್ನಾಟಕದ ಚುನಾವಣಾ ಇತಿಹಾಸದಲ್ಲೇ ಮಹತ್ವದ ಹೆಜ್ಜೆಯಾಗಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಬಹುನಿರೀಕ್ಷಿತ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಸುಮಾರು 4.53 ಕೋಟಿ ಅರ್ಹ ಮತದಾರರ ಹೆಸರುಗಳು ಇದರಲ್ಲಿ ಸೇರಿವೆ ಎಂದು ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.

ಕರಡು ಪಟ್ಟಿಯಿಂದ 1 ಕೋಟಿಗೂ ಅಧಿಕ ಮಂದಿ ಹೊರಕ್ಕೆ

ಭಾರತೀಯ ಚುನಾವಣಾ ಆಯೋಗವು ಜೂನ್ 16ರಂದು ಪರಿಷ್ಕರಣೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ರಾಜ್ಯದಲ್ಲಿ ಒಟ್ಟು 5.54 ಕೋಟಿ ಮತದಾರರಿದ್ದರು. ಆದರೆ ಮೊದಲ ಹಂತದ ತೀವ್ರ ತಪಾಸಣೆಯ ವೇಳೆ ಸ್ಥಳಾಂತರಗೊಂಡವರು, ನಿಧನರಾದವರು, ವಿಳಾಸ ಪತ್ತೆಯಾಗದವರು ಹಾಗೂ ನಕಲಿ ನೋಂದಣಿ ಹೊಂದಿದ್ದ ಬರೋಬ್ಬರಿ 1.08 ಕೋಟಿ ಜನರನ್ನು ಪಟ್ಟಿಯಿಂದ ಕೈಬಿಡಲಾಯಿತು. ಪರಿಣಾಮವಾಗಿ, ಆಗಸ್ಟ್ 24ರಂದು ಹೊರಬಿದ್ದ ಕರಡು ಪಟ್ಟಿಯಲ್ಲಿ ಮತದಾರರ ಸಂಖ್ಯೆ 4.46 ಕೋಟಿಗೆ ಇಳಿಕೆಯಾಗಿತ್ತು.

RelatedPosts

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಸೌಜನ್ಯ ಪ್ರಕರಣ ಮರುತನಿಖೆ ಚುರುಕು: 15 ಅಧಿಕಾರಿಗಳಿಗೆ ಎಸ್‌ಐಟಿ ನೋಟಿಸ್‌!

4 ಎಂಎಲ್‌ಸಿ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ: ಡಾ. ಜಿ. ಪರಮೇಶ್ವರ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ, ಕೆಲವೆಡೆ ಚಳಿ

ADVERTISEMENT
ADVERTISEMENT

ಹಳೆಯ ವಿವರಗಳ ಮ್ಯಾಪಿಂಗ್ ಮತ್ತು ವಿಚಾರಣೆ ಪ್ರಕ್ರಿಯೆ

ಎರಡನೇ ಹಂತದಲ್ಲಿ 2002ರ ಮತದಾರರ ಪಟ್ಟಿಯ ಜತೆ ಮಾಹಿತಿ ತಾಳೆಯಾಗದ ಸುಮಾರು 43.81 ಲಕ್ಷ ಜನರಿಗೆ ನೋಟಿಸ್ ನೀಡಲಾಗಿತ್ತು. ಆಯೋಗವು ಇವರ ವಿಚಾರಣೆ ನಡೆಸಿ, ಅರ್ಹ ದಾಖಲೆಗಳನ್ನು ಪರಿಶೀಲಿಸಿ ಬಹುತೇಕರನ್ನು ಪಟ್ಟಿಯಲ್ಲಿ ಉಳಿಸಿಕೊಂಡಿದೆ. ಆದರೆ ನೋಟಿಸ್‌ಗೆ ಯಾವುದೇ ಪ್ರತಿಕ್ರಿಯೆ ನೀಡದ ಮತ್ತು ಮನೆ ಭೇಟಿ ವೇಳೆ ಪತ್ತೆಯಾಗದ 1.34 ಲಕ್ಷ ಮಂದಿಯನ್ನು ನಮೂನೆ-7ರ ಅಡಿಯಲ್ಲಿ ಪಟ್ಟಿಯಿಂದ ಅಧಿಕೃತವಾಗಿ ಕೈಬಿಡಲಾಗಿದೆ.

ಹೊಸ ಸೇರ್ಪಡೆಗಳು ಮತ್ತು ತಿರಸ್ಕೃತ ಅರ್ಜಿಗಳು

ಕರಡು ಪಟ್ಟಿಯಿಂದ ವಂಚಿತರಾದವರಿಗೆ ಸೆಪ್ಟೆಂಬರ್ 23ರ ತನಕ ಮರು ನೋಂದಣಿಗೆ ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ನಮೂನೆ-6ರ ಮೂಲಕ 6.67 ಲಕ್ಷ ಹೊಸ ಅರ್ಜಿಗಳು ಸಲ್ಲಿಕೆಯಾಗಿದ್ದು, ದಾಖಲೆಗಳ ಮರುಪರಿಶೀಲನೆಯ ಬಳಿಕ ಒಟ್ಟಾರೆ ಸುಮಾರು 8 ಲಕ್ಷ ಅರ್ಹರನ್ನು ಕರಡು ಪಟ್ಟಿಗೆ ಮರಳಿ ಸೇರಿಸಲಾಯಿತು. ಇದೇ ಸಂದರ್ಭದಲ್ಲಿ ಮತದಾರರ ಹೆಸರನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಕೆಯಾಗಿದ್ದ 2.82 ಲಕ್ಷ ನಮೂನೆ-7 ಅರ್ಜಿಗಳ ಪೈಕಿ, ಸೂಕ್ತ ಸಾಕ್ಷಾಧಾರಗಳಿಲ್ಲದ ಸುಮಾರು 68 ಸಾವಿರ ಅರ್ಜಿಗಳನ್ನು ಮತಗಟ್ಟೆ ಅಧಿಕಾರಿಗಳ ಮಟ್ಟದಲ್ಲೇ ತಿರಸ್ಕರಿಸಿ ಉಳಿದವುಗಳ ಮೇಲೆ ಕ್ರಮ ಜರುಗಿಸಲಾಗಿದೆ.

ದಾಖಲೆ ನೀಡದವರಿಗೆ ಕೊಕ್, ಮುಂದಿನ ಪರಿಷ್ಕರಣೆಯಲ್ಲಿ ಅವಕಾಶ

ಕರಡು ಪಟ್ಟಿಯಲ್ಲಿದ್ದ ಎಲ್ಲರಿಗೂ ಅಂತಿಮ ಪಟ್ಟಿಯಲ್ಲಿ ಜಾಗ ಸಿಗುವುದು ಖಚಿತವಿಲ್ಲ ಎಂದು ಸ್ಪಷ್ಟಪಡಿಸಿರುವ ಚುನಾವಣಾಧಿಕಾರಿಗಳ ಕಚೇರಿ, ನೋಟಿಸ್‌ಗೆ ಉತ್ತರಿಸದ ಹಾಗೂ ಸಮರ್ಪಕ ದಾಖಲೆ ನೀಡದವರನ್ನು ಅಂತಿಮ ಪಟ್ಟಿಯಿಂದ ಹೊರಗಿಟ್ಟಿರುವುದಾಗಿ ತಿಳಿಸಿದೆ. ಇನ್ನು ಸೆಪ್ಟೆಂಬರ್ 23ರ ನಂತರ ನಮೂನೆ-6 ಸಲ್ಲಿಸಿರುವ ಅರ್ಜಿದಾರರ ವಿವರಗಳನ್ನು ತಾತ್ಕಾಲಿಕವಾಗಿ ಕಾಯ್ದಿರಿಸಲಾಗಿದ್ದು, ಶೀಘ್ರದಲ್ಲೇ ಆರಂಭವಾಗಲಿರುವ ವಿಶೇಷ ಸಾಮಾನ್ಯ ಪರಿಷ್ಕರಣೆ (ಎಸ್‌ಎಸ್‌ಆರ್) ಪ್ರಕ್ರಿಯೆಯ ಮೂಲಕ ಅವರನ್ನು ಪಟ್ಟಿಗೆ ಸೇರಿಸಲಾಗುತ್ತದೆ ಎನ್ನಲಾಗಿದೆ.

ಮತದಾರರ ವರ್ಗವಾರು ವಿವರ

  • ಮಹಿಳಾ ಮತದಾರರು: 2,29,12,355

  • ಪುರುಷ ಮತದಾರರು: 2,25,40,493

  • ತೃತೀಯ ಲಿಂಗಿ ಮತದಾರರು: 2,841

  • ಸೇವಾ ಮತದಾರರು: 44,322

  • 18–19 ವರ್ಷ ವಯಸ್ಸಿನ ಯುವ ಮತದಾರರು: 6,83,364

  • 85+ ವಯಸ್ಸಿನ ಹಿರಿಯ ಮತದಾರರು: 3,92,134

  • ವಿಶೇಷ ಚೇತನ (ದಿವ್ಯಾಂಗ) ಮತದಾರರು: 5,65,340

  • ಅನಿವಾಸಿ (ಸಾಗರೋತ್ತರ) ಮತದಾರರು: 3,252

ಹೆಸರು ಸೇರ್ಪಡೆ ಪ್ರಕ್ರಿಯೆ ಮುಂದುವರಿಕೆ

ಅಂತಿಮ ಪಟ್ಟಿ ಪ್ರಕಟಗೊಂಡ ಬಳಿಕವೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಪ್ರಕ್ರಿಯೆಗಳು ಮುಂದುವರಿಯಲಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.

  • ನಮೂನೆ-6: ಅಂತಿಮ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ನಾಗರಿಕರು ಹೊಸದಾಗಿ ಹೆಸರು ನೋಂದಾಯಿಸಲು

  • ನಮೂನೆ-6ಎ: ಸಾಗರೋತ್ತರ (NRI) ಮತದಾರರ ನೋಂದಣಿಗೆ

  • ನಮೂನೆ-7: ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು

  • ನಮೂನೆ-8: ವಿಳಾಸ ಬದಲಾವಣೆ, ತಿದ್ದುಪಡಿ, ಎಪಿಕ್ ಕಾರ್ಡ್ ಬದಲಾವಣೆ ಹಾಗೂ ದಿವ್ಯಾಂಗರ ವಿವರ ನಮೂದಿಸಲು

ಅರ್ಹ ನಾಗರಿಕರು ಆನ್‌ಲೈನ್ ಮೂಲಕ voters.eci.gov.in ವೆಬ್‌ಸೈಟ್ ಅಥವಾ ECINet ಮೊಬೈಲ್ ಆ್ಯಪ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಉಚ್ಚಿನ ಸಹಾಯವಾಣಿ ಸಂಖ್ಯೆ 1950 ಅನ್ನು ಸಂಪರ್ಕಿಸಬಹುದು.

 ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅಂತಿಮ ಪಟ್ಟಿಯಲ್ಲಿ 4.53 ಕೋಟಿ ಅರ್ಹ ಮತದಾರರಿದ್ದಾರೆ. ನಕಲಿ ಮತ್ತು ಅನರ್ಹ ನೋಂದಣಿಗಳನ್ನು ತೆಗೆದುಹಾಕುವ ಮೂಲಕ ಮತದಾರರ ಪಟ್ಟಿ ಹೆಚ್ಚು ನಿಖರವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಆದರೆ, ಹೊರಗಿಟ್ಟವರ ಪೈಕಿ ಅರ್ಹರು ಮುಂದಿನ ಪರಿಷ್ಕರಣೆಯಲ್ಲಿ ಅವಕಾಶ ಪಡೆಯಬಹುದು ಎಂಬುದನ್ನು ಗಮನಿಸಬೇಕು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಔಟ್

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
October 27, 2026 - 2:13 pm
0

ಔಟ್

SIR ಅಂತಿಮ ಪಟ್ಟಿ ಪ್ರಕಟ:1 ಕೋಟಿಗೂ ಅಧಿಕ ಹೆಸರು ಔಟ್‌? ಇಲ್ಲಿದೆ ವರ್ಗವಾರು ವಿವರ

by ಶಾಲಿನಿ ಕೆ. ಡಿ
October 27, 2026 - 2:04 pm
0

Untitled Design 2026 10 27T134406.176

1 ಸಾವಿರ ರೂ. ಮುಖಬೆಲೆಯ ಹೊಸ ನೋಟು ಬಿಡುಗಡೆ ಮಾಡಿದ್ಯಾ RBI?

by ಶಾಲಿನಿ ಕೆ. ಡಿ
October 27, 2026 - 1:39 pm
0

Untitled Design 2026 10 27T130347.561

ಕ್ಲಾಸ್ ಸೀತೆ ಈಗ ಮಾಸ್ IPS ಆಫೀಸರ್..‘ರಕ್ತಚಂದನ’ ಬೇಟೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 27, 2026 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಔಟ್
    ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    October 27, 2026 | 0
  • Untitled Design 2026 10 27T125151.019
    ಸೌಜನ್ಯ ಪ್ರಕರಣ ಮರುತನಿಖೆ ಚುರುಕು: 15 ಅಧಿಕಾರಿಗಳಿಗೆ ಎಸ್‌ಐಟಿ ನೋಟಿಸ್‌!
    October 27, 2026 | 0
  • Untitled Design 2026 10 27T120055.168
    4 ಎಂಎಲ್‌ಸಿ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ: ಡಾ. ಜಿ. ಪರಮೇಶ್ವರ
    October 27, 2026 | 0
  • Untitled Design 2026 10 27T102344.964
    ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ, ಕೆಲವೆಡೆ ಚಳಿ
    October 27, 2026 | 0
  • Untitled Design 2026 10 26T223432.143
    ಬಗೆಹರಿಯದ ಕಬ್ಬು ಬೆಳೆಗಾರರ ಸಮಸ್ಯೆ: ಹೋರಾಟ ಮುಂದುವರಿಸಲು ನಿರ್ಧಾರ
    October 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version