• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿಗಳು ಯಾರೇ ಆಗಿದ್ದರೂ ಬಿಡುವುದಿಲ್ಲ: ಜಿ.ಪರಮೇಶ್ವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 2, 2025 - 11:56 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 05 02t115014.777

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳು ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಯಾರು ಕೃತ್ಯ ಎಸಗಿದ್ದಾರೆ, ಅವರನ್ನು ಯಾವುದೇ ಕಾರಣಕ್ಕು ಬಿಡುವುದಿಲ್ಲ ಎಂದರು.

RelatedPosts

ಬೆಂಗಳೂರಿನಲ್ಲಿ ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಅಭಿಮಾನಿಗಳು ಬೇಸರ

ಮತಗಳ್ಳತನ ಆರೋಪ-ಮೋದಿಗೆ ಅಧಿಕಾರದಲ್ಲಿರಲು ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ಕೊಡಿ ಎಂದ ಸಿಎಂ

‘ಕಾಂತಾರ’ ಲಾಯರ್ ಖ್ಯಾತಿಯ ಟಿ. ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ನಿಧನ!

ರಾಜ್ಯದಲ್ಲಿ ಮತಕಳ್ಳತನ ಆರೋಪ: ರಾಹುಲ್ ಗಾಂಧಿಗೆ 13 ಪ್ರಶ್ನೆಗಳನ್ನ ಕೇಳಿದ ಬಿಜೆಪಿ!

ADVERTISEMENT
ADVERTISEMENT

ಮಂಗಳೂರು ಶಾಂತಿಗೆ ಬರುತ್ತಿತ್ತು. ಕಳೆದ ನಾಲ್ಕೈದು ದಿನದಿಂದ ಆದ ಘಟನೆ ಮತ್ತು ನಿನ್ನೆ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ನಾವು ಇದನ್ನು ಹೀಗೆ ಮುಂದುವರಿಯಲು ಯಾವುದೇ ಕಾರಣಕ್ಕು ಬಿಡುವುದಿಲ್ಲ. ಆರೋಪಿಗಳ ಪತ್ತೆಗಾಗಿ ಈಗಾಗಲೇ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದ್ದು, ಶೋಧ ನಡೆಸಿದ್ದಾರೆ. ಇನ್ನು ಮುಂದೆಯೂ ಇಂತಹ ಘಟನೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.

ಶಾಂತಿಯನ್ನು ಕಾಪಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಮನವಿ‌ ಮಾಡುತ್ತೇನೆ. ಸರ್ಕಾರ ಮತ್ತು‌ ಪೊಲೀಸ್ ಇಲಾಖೆ ನಿಮ್ಮ ಜೊತೆಯಲ್ಲಿದೆ. ಶಾಂತಿ‌ ಕಾಪಾಡಲು ಎಲ್ಲ ರೀತಿಯ ಪ್ರಯತ್ನವನ್ನು ನಾವು ಮಾಡುತ್ತೇವೆ. ಈಗಾಗಲೇ‌ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ಜರುಗಬಾರದು ಎಂಬ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.

ನಿನ್ನೆಯ ಘಟನೆಯ ಕುರಿತು ಸಂಪೂರ್ಣ ವರದಿ ಕೇಳಿದ್ದೇನೆ. ತನಿಖೆ ಆರಂಭಿಸಲಾಗಿದ್ದು ಆರೋಪಿಗಳನ್ನು ಬಿಡುವುದಿಲ್ಲ‌. ಇದನ್ನು ಹತ್ತಿಕ್ಕಲು ಎಲ್ಲ ರೀತಿಯ ಪ್ರಯತ್ನ, ಕ್ರಮ ಕೈಗೊಂಡಿದ್ದು, ಬೆಳೆಯಲು ಬಿಡುವುದಿಲ್ಲ. ಯಾವುದೇ ಪಕ್ಷ, ಸಂಘಟನೆಯವರು ಅಥವಾ ಬೇರೆ ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಎಚ್ಚರಿಸಿದರು‌.

ಬಿಜೆಪಿ ಮುಖಂಡರ ಆರೋಪಗಳ ಕುರಿತು ಪ್ರತಿಕ್ರಿಯಿಸಿ, ಯಾರು ಕೂಡ ಕೊಲೆ ಆಗಬೇಕು ಎಂದು ಬಯಸುವುದಿಲ್ಲ. ಜವಾಬ್ಧಾರಿಯುತ ಸರ್ಕಾರವಾಗಿ ಶಾಂತಿ ಸುವ್ಯವಸ್ಥೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ಧಾರಿ. ಈ ಜವಾಬ್ಧಾರಿಯಿಂದ ನಾವು ನುಣುಚಿಕೊಳ್ಳುವುದಿಲ್ಲ. ಈಗಾಗಲೇ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಘಟನೆಗಳಾದಾಗ ಕಾನೂನು‌ ಪ್ರಕಾರ ಏನೆಲ್ಲ‌ ಕ್ರಮ ತೆಗೆದುಕೊಳ್ಳಬೇಕು ಅದೆಲ್ಲವನ್ನು ಮಾಡಿದ್ದೇವೆ. ಇದನ್ನು ಬಿಡುವುದಿಲ್ಲ ಎಂದು ಹೇಳಿದರು

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಹಿಂದು ಕಾರ್ಯಕರ್ತರಿಗೆ ಜೀವಭಯವಿದೆ, ಉಳಿಗಾಲವಿಲ್ಲ ಎಂದಿರುವ ವಿಪಕ್ಷ ನಾಯಕ ಆರ್‌.ಅಶೋಕ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಬೇರೆಯವರಿದ್ದಾರ? ಹಿಂದುಗಳಿಲ್ಲವೇ? ನಾವೆಲ್ಲ ಹಿಂದುಗಳಲ್ಲವ? ನಾವು ಬೇರೆಯವರ? ಆ ರೀತಿ ವಿಶ್ಲೇಷಣೆ ಮಾಡುವುದು ಸರಿಯಲ್ಲ. ಕೊಲೆಯಾಗಿದೆ ಆರೋಪಿಗಳನ್ನು ಹಿಡಿದು ಹಾಕುತ್ತೇವೆ. ಘಟನೆಗೆ ಬೇರೆಬೇರೆ ಬಣ್ಣಕಟ್ಟುವುದು ಬೇಡ. ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಜಾತಿಜನಗಣತಿ

ಕೇಂದ್ರ ಸರ್ಕಾರ ಜಾತಿಗಣತಿ ಸಮೀಕ್ಷೆ ನಡೆಸುವ ತೀರ್ಮಾನದ ಕುರಿತ‌ ಪ್ರತಿಕ್ರಿಯಿಸಿ, 1931ರಲ್ಲಿ ಜಾತಿ ಜನಗಣತಿ ನಡೆದಿದೆ. ಆದಾದ ಮೇಲೆ‌ ನಮ್ಮ‌ ಪೂರ್ವಜರು ಏನು ಯೋಚನೆ ಮಾಡಿದ್ದರೋ ಗೊತ್ತಿಲ್ಲ. ಜಾತಿ ಹೋಗಬೇಕು ಎಂಬ ಕಲ್ಪನೆಯಲ್ಲಿ ಜಾತಿಗಣತಿ ಮಾಡುವುದನ್ನು ಬಿಟ್ಟಿದ್ದರು ಎಂದು ಕಾಣುತ್ತದೆ. ಮತ್ತೆ ಜಾತಿಜನಗಣತಿಯನ್ನು ಕರ್ನಾಟಕದಲ್ಲಿ ಪ್ರಾರಂಭಿಸಿದೆವು.

ಯಾರು ಹಿಂದೆ ಉಳಿದಿದ್ದಾರೆ ಅವರನ್ನು ಸಮಾಜದ‌ ಮುಖ್ಯವಾಹಿನಿಗೆ ತರಬೇಕು ಎಂಬುದು ಜನಗಣತಿಯ ಉದ್ದೇಶವಾಗಿತ್ತು. ಟರ್ಮ್ಸ್ ಆಫ್ ರೆಫರೆನ್ಸ್ ಕೊಡುವಾಗ ಸಾಮಾಜಿಕ, ಶೈಕ್ಷಣಿಕ‌ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಬೇಕು. ಅದನ್ನು ಮಾಡುವಾಗ ಯಾವ ಸಮುದಾಯದವರು, ಎಷ್ಟು ಜನಸಂಖ್ಯೆ ಇದೆ ಎಂಬುದನ್ನು ತಿಳಿಯುವ ಅಗತ್ಯತೆಯಿಂದ ಜಾತಿಗಣತಿ ಮಾಡಲಾಗಿದೆ. ಈಗ ಇಡೀ ದೇಶದಲ್ಲಿ ಜಾತಿಗಣತಿ ಮಾಡುತ್ತಿರುವುದು ಸ್ವಾಗತಾರ್ಹ ಎಂದು ಹೇಳಿದರು.

ಜಾತಿಜನಗಣತಿ ದೇಶದಾದ್ಯಂತ ನಡೆಯಬೇಕು ಎಂದು ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ಕರ್ನಾಟಕದ ಬಗ್ಗೆ ಮಾತನಾಡುವಾಗ ರಾಷ್ಟ್ರದಲ್ಲಿ ಆಗಬೇಕು ಎಂದು ಅನೇಕ‌ ಸಂದರ್ಭಗಳಲ್ಲಿ ಹೇಳಿದ್ದಾರೆ. ಜಾತಿಗಣತಿ ನಡೆಸುವ ಅಗತ್ಯತೆ ಇದೆ ಎಂಬುದು ಕೇಂದ್ರ ಸರ್ಕಾರಕ್ಕೆ ಅರ್ಥವಾಗಿದೆ ಎಂದು ಅಭಿಪ್ರಾಯಪಟ್ಟರು.

ಹಿಂದೆ ಮುಸ್ಲಿಮರು ಅವರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಬೇಕು ಎಂದು ರಾಜೇಂದ್ರ ಸಹಚಾರ್ ನೇತೃತ್ವದಲ್ಲಿ ನಿರ್ಧರಿಸಿದ್ದರು. ಆಗ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು.‌ ಸಾಮಾಜಿಕ, ಶೈಕ್ಷಣಿಕ‌ ಮತ್ತು ಆರ್ಥಿಕ ಸ್ಥಿತಿಗಳನ್ನ ಅಧ್ಯಯನ ನಡೆಸಿ ಕಾರ್ಯಕ್ರಮಗಳನ್ನು ಕೊಡಬೇಕು ಎಂದು ಮಾಡಲಾಗಿತ್ತು. ಮುಂದಿನ ಆಯವ್ಯಯದಲ್ಲಿ ಜಾತಿಗಣತಿಯನ್ನು ಆಧಾರವಾಗಿಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ‌ ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 08t152544.557

ಬೆಂಗಳೂರಿನಲ್ಲಿ ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಅಭಿಮಾನಿಗಳು ಬೇಸರ

by ಶಾಲಿನಿ ಕೆ. ಡಿ
August 8, 2025 - 3:32 pm
0

0 (60)

ಮತಗಳ್ಳತನ ಆರೋಪ-ಮೋದಿಗೆ ಅಧಿಕಾರದಲ್ಲಿರಲು ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ಕೊಡಿ ಎಂದ ಸಿಎಂ

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 3:03 pm
0

0 (59)

‘ಕಾಂತಾರ’ ಲಾಯರ್ ಖ್ಯಾತಿಯ ಟಿ. ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ನಿಧನ!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 2:32 pm
0

0 (58)

ರಾಜ್ಯದಲ್ಲಿ ಮತಕಳ್ಳತನ ಆರೋಪ: ರಾಹುಲ್ ಗಾಂಧಿಗೆ 13 ಪ್ರಶ್ನೆಗಳನ್ನ ಕೇಳಿದ ಬಿಜೆಪಿ!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 2:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 08t152544.557
    ಬೆಂಗಳೂರಿನಲ್ಲಿ ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಅಭಿಮಾನಿಗಳು ಬೇಸರ
    August 8, 2025 | 0
  • 0 (60)
    ಮತಗಳ್ಳತನ ಆರೋಪ-ಮೋದಿಗೆ ಅಧಿಕಾರದಲ್ಲಿರಲು ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ಕೊಡಿ ಎಂದ ಸಿಎಂ
    August 8, 2025 | 0
  • 0 (59)
    ‘ಕಾಂತಾರ’ ಲಾಯರ್ ಖ್ಯಾತಿಯ ಟಿ. ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ನಿಧನ!
    August 8, 2025 | 0
  • 0 (58)
    ರಾಜ್ಯದಲ್ಲಿ ಮತಕಳ್ಳತನ ಆರೋಪ: ರಾಹುಲ್ ಗಾಂಧಿಗೆ 13 ಪ್ರಶ್ನೆಗಳನ್ನ ಕೇಳಿದ ಬಿಜೆಪಿ!
    August 8, 2025 | 0
  • 0 (57)
    ಕರ್ನಾಟಕದಲ್ಲಿ ಮತ ಕಳ್ಳತನ: ಬಿಜೆಪಿ, ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version