ಅತ್ಯುತ್ತಮ ಚುನಾವಣಾ ಅಭ್ಯಾಸ ರಾಜ್ಯ ಪ್ರಶಸ್ತಿಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಯ್ಕೆ

Untitled design 2026 01 24T220148.890

ತುಮಕೂರು: ಅತ್ಯುತ್ತಮ ಚುನಾವಣಾ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಂಗಳೂರು ವಿಭಾಗದಲ್ಲಿ ತುಮಕೂರು ಜಿಲ್ಲಾಧಿಕಾರಿಯೂ ಆದ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಆಯ್ಕೆಯಾಗಿದ್ದಾರೆ. ಈ ಕುರಿತು ಸಂಸತ ಹಂಚಿಕೊಂಡಿರುವ ಅವರು, ಎರಡನೇ ಬಾರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ತೆಗೆದುಕೊಳ್ಳುತ್ತಿರೋದಕ್ಕೆ ಜಿಲ್ಲಾಡಳಿತ ಹಾಗೂ ಚುನಾವಣಾ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರು ವಿಭಾಗದಲ್ಲಿ ತುಮಕೂರು ಜಿಲ್ಲಾಧಿಕಾರಿಯೂ ಆಗಿರುವ ಶುಭ ಕಲ್ಯಾಣ್ ಅವರನ್ನು ಭಾರತ ಚುನಾವಣಾ ಆಯೋಗವು ಅತ್ಯುತ್ತಮ ಚುನಾವಣಾ ಕಾರ್ಯಕ್ಷಮತೆಗಾಗಿ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇವರೊಟ್ಟಿಗೆ ಕೊರಟಗೆರೆ ತಾಲ್ಲೂಕಿನ ದುದ್ದನಹಳ್ಳಿಯ ಮತಗಟ್ಟೆ ಮೇಲ್ವಿಚಾರಕಿ, ಸಹಾಯಕ ಮತದಾರರ ನೋಂದಣಿ ಅಧಿಕಾರಿ ಗುಬ್ಬಿ ತಹಶೀಲ್ದಾರ್ ಆರತಿ ಬಿ, ಗ್ರಾಮ ಲೆಕ್ಕಿಗ ಎನ್.ಸಿ. ಭಾಗ್ಯಮ್ಮ ಮತ್ತು ಮತಗಟ್ಟೆಯ ಅಧಿಕಾರಿಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಪುಟ್ಟಮಾರ ಅವರನ್ನು ಸಹ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಗೆ ಐದು ಜಿಲ್ಲಾ ಚುನಾವಣಾ ಅಧಿಕಾರಿಗಳು, ಐದು ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿಗಳು, ಐದು ಮತದಾರರ ನೋಂದಣಿ ಅಧಿಕಾರಿಗಳು, ಐದು ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳು, ಹತ್ತು ಜಿಲ್ಲಾ ಬಿಎಲ್ಒ ಮೇಲ್ವಿಚಾರಕರು ಮತ್ತು ರಾಜ್ಯದ ವಿವಿಧ ಜಿಲ್ಲೆಗಳಿಂದ 34 ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜನವರಿ 25ರ ಬೆಳಗ್ಗೆ 9.30 ಕ್ಕೆ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಆಯೋಜಿಸಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.

Exit mobile version