ತುಮಕೂರು: ಬಸ್ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಕುಣಿಗಲ್ ತಾಲ್ಲೂಕಿನ ಹೇರೂರು ಬಳಿ ನಡೆದಿದೆ. ಕೇರಳದ ಕುಕ್ಕೆ ಸುಬ್ರಮಣ್ಯದಿಂದ ಬೆಂಗಳೂರಿಗೆ ಹೊರಟಿದ್ದ ಬಸ್, ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಇದರ ಪರಿಣಾಮ ಬಸ್ ನಲ್ಲಿದ್ದ 24 ಪ್ರಯಾಣಿಕರಲ್ಲಿ 5 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇನ್ನು ಈ ಘಟನೆಯಲ್ಲಿ ಬಸ್ ಪಲ್ಟಿಯಿಂದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾದರು. ಗಾಯಾಳುಗಳನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.