ಸಾಲ ತೀರಿಸಲಾಗದೇ ಯುವಕ ಆತ್ಮಹತ್ಯೆ

Untitled design 2025 05 03t112930.772

ವರದಿ: ಮೂರ್ತಿ, ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರು: ಕಾರು ಖರೀದಿಗಾಗಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೆ, EMI ಬಾಕಿ ಉಳಿದಿರುವ ಕಾರಣದಿಂದಾಗಿ ಯುವ ಚಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಚಿಕ್ಕಬಾಣಾವರದಲ್ಲಿ ನಡೆದಿದೆ. ಮೃತನನ್ನು ಕಲಬುರ್ಗಿ ಮೂಲದ 21 ವರ್ಷದ ದೇವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

ದೇವರಾಜ್ ಕಳೆದ ವರ್ಷ ಕಾರು ಖರೀದಿಸಿದ್ದರು ಮತ್ತು ಅದರ EMI ಪಾವತಿ ಮಾಡುವ ಉದ್ದೇಶದಿಂದ ಅದನ್ನು ಬಾಡಿಗೆಗೆ ನೀಡುವ ಯೋಜನೆ ಮಾಡಿಕೊಂಡಿದ್ದರು. ಆದರೆ ಇತ್ತೀಚಿನ ತಿಂಗಳುಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಬಾಡಿಗೆ ಸಿಗದೆ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರು. ಬ್ಯಾಂಕ್‌ನಿಂದ ಎರಡು ತಿಂಗಳ ಇಎಮ್ಐ ಬಾಕಿಯಾಗಿದ್ದು, ನೋಟಿಸ್ ಕೂಡಾ ಬಂದಿದ್ದಲ್ಲದೆ, ಸಾಲದ ಒತ್ತಡದಿಂದ ದೇವರಾಜ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಚಿಕ್ಕಬಾಣಾವರದ ತಾವು ವಾಸ ಮಾಡುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ. ದೇವರಾಜ್ ಅವರ ಆತ್ಮಹತ್ಯೆಯಿಂದ ಸ್ಥಳೀಯರು ಮತ್ತು ಕುಟುಂಬದವರು ಆಘಾತಕ್ಕೆ ಒಳಗಾಗಿದ್ದಾರೆ.

ಸಮಾಜದಲ್ಲಿ ದಿನದಿಂದ ದಿನಕ್ಕೆ ಸಾಲದ ಭಾರದಿಂದಾಗಿ ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ, ಸಾಮಾಜಿಕ ಜವಾಬ್ದಾರಿ ಹಾಗೂ ಆರ್ಥಿಕ ಅರಿವು ಅನಿವಾರ್ಯವಾಗಿದೆ ಎನ್ನುವ ಚರ್ಚೆಗಳು ಜೋರಾಗಿದೆ.

Exit mobile version