• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 24, 2026 - 2:49 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಹೆಚ್ಚು (13)

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಬೆಂಗಳೂರಿನ ಸಿನಿಪ್ರೇಮಿಗಳ ಪಾಲಿಗೆ ವಿಶೇಷ ನೆನಪುಗಳನ್ನು ಹೊತ್ತಿದ್ದ ನಗರದ ಐಕಾನಿಕ್ ‘ಊರ್ವಶಿ ಥಿಯೇಟರ್’ ಇದೀಗ ಇತಿಹಾಸದ ಪುಟ ಸೇರಿದೆ. ಲಾಲ್‌ಬಾಗ್‌ ಮುಖ್ಯರಸ್ತೆಯಲ್ಲಿದ್ದ ಈ ಚಿತ್ರಮಂದಿರವನ್ನು ಜೆಸಿಬಿ ಮೂಲಕ ನೆಲಸಮಗೊಳಿಸಲಾಗಿದ್ದು, ಬರೋಬ್ಬರಿ 55 ವರ್ಷಗಳ ಕಾಲ ಸಾವಿರಾರು ಸಿನಿಮಾಗಳಿಗೆ ಸಾಕ್ಷಿಯಾಗಿದ್ದ ಥಿಯೇಟರ್‌ ಇನ್ನು ನೆನಪು ಮಾತ್ರ.

1970ರಲ್ಲಿ ವರನಟ ಡಾ. ರಾಜ್‌ಕುಮಾರ್‌ ಅವರಿಂದ ಉದ್ಘಾಟನೆಗೊಂಡಿದ್ದ ಊರ್ವಶಿ ಥಿಯೇಟರ್‌, ಐದು ದಶಕಗಳಿಗೂ ಹೆಚ್ಚು ಕಾಲ ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳ ಪೈಕಿ ಒಂದಾಗಿ ಗುರುತಿಸಿಕೊಂಡಿತ್ತು. ಐದು ಭಾಷೆಗಳಲ್ಲಿ 5,000ಕ್ಕೂ ಹೆಚ್ಚು ಸಿನಿಮಾಗಳು ಇಲ್ಲಿ ಪ್ರದರ್ಶನ ಕಂಡಿವೆ ಎನ್ನಲಾಗಿದ್ದು, ನಗರದ ಹಲವು ತಲೆಮಾರುಗಳ ಸಿನಿಪ್ರೇಮಿಗಳೊಂದಿಗೆ ಈ ಚಿತ್ರಮಂದಿರ ಭಾವನಾತ್ಮಕ ನಂಟು ಹೊಂದಿತ್ತು.

RelatedPosts

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

ರಾಜ್ಯದಲ್ಲಿ SIR ಪೂರ್ಣ: ಇಂದು ಕರಡು ಮತದಾರರ ಪಟ್ಟಿ ಪ್ರಕಟ

ಬೆಂಗಳೂರು ಸವಾರರೇ ಹುಷಾರ್: ಫುಟ್‌ಪಾತ್ ಮೇಲೆ ವಾಹನ ಓಡಿಸಿದ್ರೆ ಭಾರಿ ದಂಡ!

ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು

ADVERTISEMENT
ADVERTISEMENT

ಊರ್ವಶಿ ಥಿಯೇಟರ್‌ ಕೇವಲ ಸಿನಿಮಾ ಪ್ರದರ್ಶನಕ್ಕೆ ಮಾತ್ರವಲ್ಲದೆ, ತನ್ನ ಅತ್ಯಾಧುನಿಕ ತಾಂತ್ರಿಕ ಸೌಲಭ್ಯಗಳಿಂದಲೂ ಖ್ಯಾತಿ ಪಡೆದಿತ್ತು. ಒಂದು ಕಾಲದಲ್ಲಿ ಭಾರತದಲ್ಲಿದ್ದ ಕೆಲವೇ ಏಕಪರದೆ ಚಿತ್ರಮಂದಿರಗಳಲ್ಲಿ ಲಭ್ಯವಿದ್ದ ಅತ್ಯಾಧುನಿಕ ಧ್ವನಿ ತಂತ್ರಜ್ಞಾನವನ್ನು ಊರ್ವಶಿ ಹೊಂದಿತ್ತು ಎಂದು ಹೇಳಲಾಗುತ್ತದೆ.

ನಂತರದ ವರ್ಷಗಳಲ್ಲಿ 4K ಪ್ರೊಜೆಕ್ಷನ್‌, 3D ಮತ್ತು ಮೆಯರ್‌ ಸೌಂಡ್‌ ಸೇರಿದಂತೆ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಪ್ರೇಕ್ಷಕರಿಗೆ ಉತ್ತಮ ಸಿನಿಮಾ ಅನುಭವ ನೀಡುತ್ತಿತ್ತು. ಶಿವರಾಜ್‌ಕುಮಾರ್ ಅಭಿನಯದ ‘AK 47’ ಸೇರಿದಂತೆ ಹಲವು ಯಶಸ್ವಿ ಚಿತ್ರಗಳು ಇಲ್ಲಿ ಭರ್ಜರಿ ಪ್ರದರ್ಶನ ಕಂಡಿದ್ದವು. ಅನೇಕ ಸ್ಟಾರ್‌ ನಟರ ಸಿನಿಮಾಗಳಿಗೆ ಊರ್ವಶಿ ಪ್ರಮುಖ ತಾಣವಾಗಿತ್ತು.

ಆದರೆ ಕಳೆದ ಕೆಲವು ವರ್ಷಗಳಿಂದ ಚಿತ್ರಮಂದಿರದ ಗುತ್ತಿಗೆ ವಿಚಾರವಾಗಿ ವಿವಾದ ಮುಂದುವರಿದಿತ್ತು. ಚಿತ್ರಮಂದಿರವನ್ನು ಗುತ್ತಿಗೆಗೆ ಪಡೆದಿದ್ದ ಬಸಟ್ಟಿ ಶೆಟ್ಟಿ ಅವರ ಲೀಸ್‌ ಅವಧಿ 2018ರ ಏಪ್ರಿಲ್‌ನಲ್ಲೇ ಮುಕ್ತಾಯಗೊಂಡಿತ್ತು. ಬಳಿಕ ಗುತ್ತಿಗೆ ಮುಂದುವರಿದಿದೆಯೇ ಅಥವಾ ಇಲ್ಲವೇ ಎಂಬ ವಿಚಾರದಲ್ಲಿ ಕಾನೂನು ವಿವಾದ ಉಂಟಾಗಿತ್ತು. ಈ ಸಂಬಂಧ ಹಲವು ವರ್ಷಗಳ ಕಾಲ ನ್ಯಾಯಾಂಗ ಹೋರಾಟ ನಡೆದಿತ್ತು.

ಇದೀಗ ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆ ಭೂಮಾಲೀಕರು ಪೊಲೀಸರ ಸಮ್ಮುಖದಲ್ಲಿ ಜಾಗವನ್ನು ವಾಪಸ್‌ ಪಡೆದಿದ್ದಾರೆ. ಇದರ ಬೆನ್ನಲ್ಲೇ ಚಿತ್ರಮಂದಿರವನ್ನು ತೆರವುಗೊಳಿಸುವ ಹಾಗೂ ನೆಲಸಮಗೊಳಿಸುವ ಕಾರ್ಯ ಆರಂಭವಾಗಿದೆ. ಬೆಳಗ್ಗೆಯೇ ಜೆಸಿಬಿ ಮೂಲಕ ಊರ್ವಶಿ ಥಿಯೇಟರ್‌ನ ಕಟ್ಟಡವನ್ನು ಕೆಡವಲಾಗಿದ್ದು, ಸ್ಥಳೀಯರು ಹಾಗೂ ಸಿನಿಪ್ರೇಮಿಗಳು ಭಾವುಕರಾಗಿದ್ದಾರೆ.

ಊರ್ವಶಿ ಥಿಯೇಟರ್‌ ನೆಲಸಮವಾಗುತ್ತಿರುವುದು ಮತ್ತೊಂದು ಕಾರಣಕ್ಕೂ ಚರ್ಚೆಗೆ ಗ್ರಾಸವಾಗಿದೆ. ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್‌’ ಸಿನಿಮಾ ಪ್ರದರ್ಶನಕ್ಕಾಗಿ ಈ ಚಿತ್ರಮಂದಿರವನ್ನು ಆಯ್ಕೆ ಮಾಡಿಕೊಳ್ಳುವ ನಿರೀಕ್ಷೆಯಲ್ಲಿ ಹಲವು ಅಭಿಮಾನಿಗಳಿದ್ದರು. ಇತ್ತೀಚಿನವರೆಗೂ ಚಿತ್ರಮಂದಿರದ ಶೋ ಹಾಗೂ ಟಿಕೆಟ್‌ ಮಾಹಿತಿಗಳು ಲಭ್ಯವಿದ್ದ ಹಿನ್ನೆಲೆಯಲ್ಲಿ, ಇದೀಗ ಥಿಯೇಟರ್‌ ಇಲ್ಲದಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಆಫ್‌ಲೈನ್ ಟಿಕೆಟ್‌ ಖರೀದಿಗಾಗಿ ಊರ್ವಶಿ ಥಿಯೇಟರ್‌ಗೆ ಆಗಮಿಸಿದ್ದ ಕೆಲ ಅಭಿಮಾನಿಗಳಿಗೂ ಈ ಬೆಳವಣಿಗೆ ಆಘಾತ ತಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 24T154708.868

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

by ಕವಿತಾ
August 24, 2026 - 3:48 pm
0

Untitled design 2026 08 24T154055.999

ರಾಜ್ಯದಲ್ಲಿ SIR ಪೂರ್ಣ: ಇಂದು ಕರಡು ಮತದಾರರ ಪಟ್ಟಿ ಪ್ರಕಟ

by ಕವಿತಾ
August 24, 2026 - 3:41 pm
0

Untitled design 2026 08 24T152248.394

ಬೆಂಗಳೂರು ಸವಾರರೇ ಹುಷಾರ್: ಫುಟ್‌ಪಾತ್ ಮೇಲೆ ವಾಹನ ಓಡಿಸಿದ್ರೆ ಭಾರಿ ದಂಡ!

by ಕವಿತಾ
August 24, 2026 - 3:23 pm
0

ಹೆಚ್ಚು (13)

‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ

by ಶಾಲಿನಿ ಕೆ. ಡಿ
August 24, 2026 - 2:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
  • ಮುನ್ಸೂಚನೆ (7)
    ವಿಧಾನಸೌಧದ ಎದುರು BJP ಪ್ರೊಟೆಸ್ಟ್: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version