• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 25, 2026 - 12:48 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಮಾರಾಟ (5)

RelatedPosts

ಮಲೆನಾಡಿನಲ್ಲಿ ಮಳೆ ಅಬ್ಬರ: KRS, ಭದ್ರಾ, ಹೇಮಾವತಿ ಡ್ಯಾಂಗಳ ಭರ್ತಿಗೆ ಕೆಲವೇ ಅಡಿ ಬಾಕಿ!

ಬಿಡದಿ ಸರ್ವೆ ಪ್ರಕರಣದಲ್ಲಿ ರೈತರಿಗೆ ತಾತ್ಕಾಲಿಕ ರಿಲೀಫ್: ತನಿಖೆಗೆ ಕೋರ್ಟ್ ತಡೆ

ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್

ಬೆಂಗಳೂರಿನಲ್ಲಿ ಎದೆ ಝಲ್ ಎನಿಸುವ ಡೆಡ್ಲಿ ಆ್ಯಕ್ಸಿಡೆಂಟ್: ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಬೈಕ್‌ ಸವಾರ ಸಾವು

ADVERTISEMENT
ADVERTISEMENT

ಬೆಂಗಳೂರು: ಬೆಂಗಳೂರಿನ ಅತ್ಯಂತ ಹಳೆಯ ಹಾಗೂ ಪ್ರಸಿದ್ಧ ಊರ್ವಶಿ ಚಿತ್ರಮಂದಿರವನ್ನು ನೆಲಸಮ ಮಾಡುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಚಿತ್ರಮಂದಿರದ ಕಟ್ಟಡದಲ್ಲಿರುವ ಯಾವುದೇ ವಸ್ತುಗಳನ್ನು ತೆರವುಗೊಳಿಸಬಾರದು ಹಾಗೂ ಕಟ್ಟಡಕ್ಕೆ ಹಾನಿ ಉಂಟುಮಾಡಬಾರದು ಎಂದು ಹೈಕೋರ್ಟ್ ಏಕಸದಸ್ಯ ಪೀಠವು ಭೂಮಾಲೀಕರಿಗೆ ಸ್ಪಷ್ಟ ನಿರ್ದೇಶನ ನೀಡಿದೆ.

ಡೆಮಾಲಿಷನ್ ಆರಂಭ

ಕಳೆದ ಸೋಮವಾರದಿಂದಲೇ ಊರ್ವಶಿ ಚಿತ್ರಮಂದಿರವನ್ನು ನೆಲಸಮ ಮಾಡುವ ಕಾರ್ಯ ಆರಂಭವಾಗಿತ್ತು. ನೂರಾರು ಸಿನಿಮಾಗಳ ಸಂಭ್ರಮಕ್ಕೆ ಸಾಕ್ಷಿಯಾಗಿದ್ದ ಈ ಐತಿಹಾಸಿಕ ಚಿತ್ರಮಂದಿರ ಧರೆಗುರುಳುತ್ತಿರುವುದನ್ನು ಕಂಡು ಸಿನಿಪ್ರಿಯರು ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಆದರೆ, ಹೈಕೋರ್ಟ್‌‌ನ ಈ ದಿಢೀರ್ ಆದೇಶದಿಂದಾಗಿ ಸದ್ಯಕ್ಕೆ ತೆರವು ಕಾರ್ಯಾಚರಣೆಗೆ ತಡೆ ಬಿದ್ದಂತಾಗಿದೆ.

ಊರ್ವಶಿ ಆಡಳಿತ ಮಂಡಳಿ ಆರೋಪ

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಜಾಗವನ್ನು ಖಾಲಿ ಮಾಡಲು ತಮಗೆ ಸೆಪ್ಟೆಂಬರ್ 30ರವರೆಗೆ ಸಮಯವಿತ್ತು. ಆದರೂ ಭೂಮಾಲೀಕರು ನಿಗದಿತ ಗಡುವಿಗಿಂತ ಮುಂಚಿತವಾಗಿಯೇ ಸ್ಥಳವನ್ನು ವಶಕ್ಕೆ ಪಡೆಯಲು ಆತುರ ಬಿದ್ದು ಅಕ್ರಮವಾಗಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಚಿತ್ರಮಂದಿರದ ಆಡಳಿತ ಮಂಡಳಿ ಆರೋಪಿಸಿದೆ. ಈ ದಿಢೀರ್ ತೆರವು ಪ್ರಕ್ರಿಯೆಯಲ್ಲಿ ಥಿಯೇಟರ್‌‌ನಲ್ಲಿದ್ದ ಬೆಲೆಬಾಳುವ ಪ್ರೊಜೆಕ್ಟರ್, ಡಿಜಿಟಲ್ ಸ್ಕ್ರೀನ್ ಹಾಗೂ ಸೀಟುಗಳಿಗೆ ಹಾನಿಯಾಗಿದೆ ಎಂದು ಊರ್ವಶಿ ಚಿತ್ರಮಂದಿರದ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ಸುಂದರ್ ಹೈಕೋರ್ಟ್ ಗಮನಕ್ಕೆ ತಂದರು.

ಭೂಮಾಲೀಕರ ಪರ ವಾದ

ಇನ್ನೊಂದೆಡೆ ಭೂಮಾಲೀಕರ ಪರ ವಕೀಲರು ವಾದ ಮಂಡಿಸಿ, ಸುಪ್ರೀಂ ಕೋರ್ಟ್ ಸೂಚಿಸಿದ್ದ ನಿಯಮಾವಳಿಗಳಿಗೆ ಅನುಗುಣವಾಗಿ ಚಿತ್ರಮಂದಿರದ ಆಡಳಿತ ಮಂಡಳಿಯು ಸೂಕ್ತ ಪ್ರಮಾಣಪತ್ರವನ್ನು ಸಲ್ಲಿಸಿಲ್ಲ. ಹೀಗಾಗಿ ಈ ಹಂತದಲ್ಲಿ ಯಾವುದೇ ತಡೆಯಾಜ್ಞೆ ನೀಡಬಾರದು ಎಂದು ಕೋರಿದರು.

ನ್ಯಾಯಾಲಯದ ಆದೇಶ

ಎರಡೂ ಕಡೆಯ ವಾದ ಆಲಿಸಿದ ನ್ಯಾಯಪೀಠವು ಸದ್ಯಕ್ಕೆ ನೆಲಸಮ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಆದೇಶಿಸಿದೆ. ಅಗತ್ಯ ಪ್ರಮಾಣಪತ್ರವನ್ನು ತಕ್ಷಣ ಸಲ್ಲಿಸುವಂತೆ ಊರ್ವಶಿ ಆಡಳಿತ ಮಂಡಳಿಗೆ ಸೂಚಿಸಲಾಗಿದೆ. ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 25ಕ್ಕೆ ಮುಂದೂಡಲಾಗಿದ್ದು, ಅಲ್ಲಿಯವರೆಗೆ ಊರ್ವಶಿ ನೆಲಸಮ ಪ್ರಕ್ರಿಯೆ ಮತ್ತು ವಸ್ತುಗಳ ತೆರವಿಗೆ ತಡೆಯಾಜ್ಞೆ ನೀಡಲಾಗಿದೆ.

ಊರ್ವಶಿಯ ಐತಿಹಾಸಿಕ ಮಹತ್ವ

5 ಸಾವಿರಕ್ಕೂ ಹೆಚ್ಚು ಸಿನಿಮಾಗಳಿಗೆ ಸಾಕ್ಷಿಯಾಗಿರುವ ಊರ್ವಶಿ ಚಿತ್ರಮಂದಿರವು 1,100ಕ್ಕೂ ಹೆಚ್ಚು ಸೀಟುಗಳನ್ನು ಹೊಂದಿದೆ. ಬೆಂಗಳೂರಿನ ಸಿನಿಪ್ರಿಯರ ಎದೆಮನಸ್ಸಿನಲ್ಲಿ ವಿಶೇಷ ಸ್ಥಾನವನ್ನು ಪಡೆದಿರುವ ಈ ಚಿತ್ರಮಂದಿರವು ದಶಕಗಳಿಂದ ಸಿನಿಮಾ ಅಭಿಮಾನಿಗಳ ಸಂಭ್ರಮದ ಕೇಂದ್ರವಾಗಿದೆ. ಹಲವಾರು ಚಿತ್ರನಟಿಯರ ಹೆಸರಿನಲ್ಲಿರುವ ಬೆಂಗಳೂರಿನ ಪ್ರಸಿದ್ಧ ಚಿತ್ರಮಂದಿರಗಳಲ್ಲಿ ಊರ್ವಶಿಯೂ ಒಂದಾಗಿದೆ.

ಹೈಕೋರ್ಟ್‌‌ನ ಈ ತೀರ್ಪಿನಿಂದ ಊರ್ವಶಿ ಪ್ರಿಯರು ಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಬಾಲ್ಯದ ನೆನಪುಗಳೊಂದಿಗೆ ನಂಟು ಹೊಂದಿರುವ ಈ ಚಿತ್ರಮಂದಿರವನ್ನು ಉಳಿಸಬೇಕೆಂದು ಹಲವಾರು ಸಿನಿಪ್ರಿಯರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನವನ್ನೇ ನಡೆಸಿದ್ದರು. ಸದ್ಯಕ್ಕೆ ಹೈಕೋರ್ಟ್ ನೀಡಿರುವ ತಾತ್ಕಾಲಿಕ ತಡೆಯಿಂದ ಅವರಲ್ಲಿ ಸಂತಸ ಮೂಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾರಾಟ (5)

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

by ಶಾಲಿನಿ ಕೆ. ಡಿ
August 25, 2026 - 12:48 pm
0

Untitled design 2026 08 25T121701.181

ಮಲೆನಾಡಿನಲ್ಲಿ ಮಳೆ ಅಬ್ಬರ: KRS, ಭದ್ರಾ, ಹೇಮಾವತಿ ಡ್ಯಾಂಗಳ ಭರ್ತಿಗೆ ಕೆಲವೇ ಅಡಿ ಬಾಕಿ!

by ದಿಶಾ ಕೆ. ಎಸ್.
August 25, 2026 - 12:36 pm
0

Image 260d4f9d

ಬಿಡದಿ ಸರ್ವೆ ಪ್ರಕರಣದಲ್ಲಿ ರೈತರಿಗೆ ತಾತ್ಕಾಲಿಕ ರಿಲೀಫ್: ತನಿಖೆಗೆ ಕೋರ್ಟ್ ತಡೆ

by ದಿಶಾ ಕೆ. ಎಸ್.
August 25, 2026 - 12:29 pm
0

ಮಾರಾಟ (4)

ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್

by ಶಾಲಿನಿ ಕೆ. ಡಿ
August 25, 2026 - 12:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
  • ಮಾರಾಟ (3)
    ಬೆಂಗಳೂರಿನಲ್ಲಿ ಎದೆ ಝಲ್ ಎನಿಸುವ ಡೆಡ್ಲಿ ಆ್ಯಕ್ಸಿಡೆಂಟ್: ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಬೈಕ್‌ ಸವಾರ ಸಾವು
    August 25, 2026 | 0
  • ಮಾರಾಟ (2)
    ಕೆಪಿಎಸ್‌ಸಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, ಇಂದೇ ವಿಚಾರಣೆಗೆ ಹಾಜರಾಗಲು ಸೂಚನೆ
    August 25, 2026 | 0
  • Untitled design 2026 08 25T091657.805
    ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ಹಾಡು ಬಳಕೆ: ಯುವಕ ಅರೆಸ್ಟ್‌
    August 25, 2026 | 0
  • Untitled design 2026 08 25T085637.761
    ದಿಢೀರ್‌‌ ಈರುಳ್ಳಿ ದರ ಏರಿಕೆ: ಕೆ.ಜಿ.ಗೆ 50 ರೂಪಾಯಿ ದಾಟಿದ ಬೆಲೆ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version