ಕಾರವಾರ/ಅಂಕೋಲಾ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾದಲ್ಲಿ (Ankola) ಆರೋಗ್ಯ ಸಚಿವ ಯು.ಟಿ.ಖಾದರ್ (U T Khader) ಅವರ ಬೆಂಗಾವಲು ವಾಹನಕ್ಕೆ (Escort Vehicle) ಸ್ಕೂಟಿ ಡಿಕ್ಕಿ ಹೊಡೆದ (Road Accident) ಘಟನೆ ನಡೆದಿದ್ದು, ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಕೋಲಾದ ವರದರಾಜ್ ಹೋಟೆಲ್ ಸಮೀಪ ಈ ಅಪಘಾತ ಸಂಭವಿಸಿದೆ.
ಅಪಘಾತ ಹೇಗಾಯಿತು?
ಕಾರವಾರದಿಂದ (Karwar) ಉಡುಪಿ (Udupi) ಕಡೆಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ಅವರ ಬೆಂಗಾವಲು ವಾಹನಗಳೊಂದಿಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಸ್ಕೂಟಿಗೆ ಅವರ ಬೆಂಗಾವಲು ವಾಹನವೊಂದು ಡಿಕ್ಕಿ ಹೊಡೆದಿದೆ. ಅಪಘಾತದ ಪ್ರಮಾಣಕ್ಕೆ ಸ್ಕೂಟಿ ಸವಾರ ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟು (Head Injury) ಬಿದ್ದಿದೆ.
ಘಟನೆಯಲ್ಲಿ ಅಲಗೇರಿ ಮೂಲದ ಸಂದೀಪ್ ನಾಯಕ್ (Sandeep Naik) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಲೆಗೆ ಗಾಯ ಆಗಿರುವ ಹಿನ್ನೆಲೆ ಅವರನ್ನು ತಕ್ಷಣವೇ ಚಿಕಿತ್ಸೆಗೆ ಕರೆದೊಯ್ಯಲಾಯಿತು.
ಸಚಿವ ಯುಟಿ ಖಾದರ್ ತ್ವರಿತ ಕಾರ್ಯಚರಣೆ
ಅಪಘಾತವಾಗುತ್ತಿದ್ದಂತೆಯೇ ವಾಹನದಲ್ಲಿದ್ದ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ತಕ್ಷಣ ಸ್ಪಂದಿಸಿದರು. ತಾವೇ ಸ್ವತಃ ಸ್ಕೂಟಿ ಸವಾರನಿಗೆ ಪ್ರಥಮ ಚಿಕಿತ್ಸೆಯ ವ್ಯವಸ್ಥೆ ಮಾಡಿದರು. ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ ಅವರು, ಸೂಕ್ತ ಚಿಕಿತ್ಸೆಗೆ (Medical Treatment) ಎಲ್ಲಾ ವ್ಯವಸ್ಥೆಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಾಯಾಳು ಸ್ಥಿತಿ ಮತ್ತು ಚಿಕಿತ್ಸೆ
ಗಾಯಾಳು ಸಂದೀಪ್ ನಾಯಕ್ ಅವರಿಗೆ ಅಂಕೋಲಾ ಪಟ್ಟಣದ ಆರ್ಯ ಮೆಡಿಕಲ್ ಆಸ್ಪತ್ರೆಯಲ್ಲಿ (Arya Medical Hospital) ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ. ತಲೆಗೆ ಪೆಟ್ಟಿನ ಹೊರತಾಗಿಯೂ, ಅವರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಅವರಿಗೆ ಅಗತ್ಯ ಚಿಕಿತ್ಸೆಗಳನ್ನು ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
