ಪೋಕ್ಸೋ ಪ್ರಕರಣ: ವಚನಾನಂದ ಸ್ವಾಮೀಜಿಗೆ ಜಾಮೀನು

Untitled design (34)

ದಾವಣಗೆರೆ (ಜುಲೈ 13): ಪೋಕ್ಸೋ (POCSO) ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಪೀಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿಗೆ ದಾವಣಗೆರೆ ಜಿಲ್ಲಾ ನ್ಯಾಯಾಲಯ ನಿಯಮಿತ (Regular) ಜಾಮೀನು ಮಂಜೂರು ಮಾಡಿದೆ.

ಪ್ರಕರಣ ದಾಖಲಾಗುವ ಮುನ್ನವೇ ವಚನಾನಂದ ಸ್ವಾಮೀಜಿ ನಿರೀಕ್ಷಣಾ (Anticipatory) ಜಾಮೀನು ಪಡೆದಿದ್ದರು. ಆದರೆ ಬಳಿಕ ಆ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿತ್ತು. ಈ ಹಿನ್ನೆಲೆಯಲ್ಲಿ ನಿಯಮಿತ ಜಾಮೀನಿಗಾಗಿ ಅರ್ಜಿ ಸಲ್ಲಿಸಲು ನ್ಯಾಯಾಲಯ ಮೂರು ವಾರಗಳ ಕಾಲಾವಕಾಶ ನೀಡಿತ್ತು.

ಅದರಂತೆ ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿಯಮಿತ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಈ ಬೆಳವಣಿಗೆಯೊಂದಿಗೆ ವಚನಾನಂದ ಸ್ವಾಮೀಜಿಗೆ ಸದ್ಯಕ್ಕೆ ಕಾನೂನುಬದ್ಧ ನೆಮ್ಮದಿ ದೊರೆತಂತಾಗಿದೆ. ಆದರೆ ಪ್ರಕರಣದ ವಿಚಾರಣೆ ಮುಂದುವರಿಯಲಿದ್ದು, ನ್ಯಾಯಾಲಯದ ಮುಂದಿನ ಆದೇಶಗಳ ಆಧಾರದ ಮೇಲೆ ಕಾನೂನು ಪ್ರಕ್ರಿಯೆ ಸಾಗಲಿದೆ.

16 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ವಿರುದ್ಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾಗುವ ಮುನ್ನವೇ ವಚನಾನಂದ ಸ್ವಾಮೀಜಿ ನಿರೀಕ್ಷಣಾ (Anticipatory) ಜಾಮೀನು ಪಡೆದಿದ್ದರು. ಆದರೆ ಈ ಜಾಮೀನನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಿ ಆದೇಶ ನೀಡಿತ್ತು

Exit mobile version