ವಿಧಾನಸೌಧದ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ: ಸಿದ್ಧತೆ ಪರಿಶೀಲಿಸಿದ ಯು.ಟಿ ಖಾದರ್

ವಿಧಾನಸೌಧದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ

Untitled Design 2025 02 26t200130.344

ಬೆಂಗಳೂರು: ವಿಧಾನಸಭೆ ಸಚಿವಾಲಯದ ವತಿಯಿಂದ ಪ್ರಪ್ರಥಮ ಬಾರಿಗೆ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಗ್ರಂಥೋತ್ಸವ ಆಯೋಜಿಸಲಾಗಿದೆ.

ಈ ಪುಸ್ತಕ ಮೇಳದ ಸಿದ್ಧತಾ ಕಾರ್ಯವನ್ನು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರು ಪರಿಶೀಲಿಸಿದ್ದು, ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಶಿವಲಿಂಗಪ್ಪ ಹೊರಟ್ಟಿ, ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಮೇಳ ಉದ್ಘಾಟನೆ ಮತ್ತು ಪ್ರಮುಖ ಕಾರ್ಯಕ್ರಮಗಳು
ಸಾಹಿತಿಗಳ ಸಂವಾದ, ಕವಿಗೋಷ್ಠಿ ಹಾಗೂ ಪುಸ್ತಕ ಬಿಡುಗಡೆ

ಫೆ.28ರಿಂದ ಮಾ.2ರ ವರೆಗೆ ಪ್ರತಿದಿನ ಎರಡು ವೇದಿಕೆಗಳಲ್ಲಿ ವಿವಿಧ ವಿಚಾರ ಸಂಕಿರಣಗಳು, ಕವಿಗೋಷ್ಠಿಗಳು, ಪುಸ್ತಕ ಬಿಡುಗಡೆ ಕಾರ್ಯಕ್ರಮಗಳು ನಡೆಯಲಿವೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಈ ಸಂವಾದಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಾಸಕರಿಗಾಗಿ ವಿಶೇಷ ಯೋಜನೆ
ಸಾರ್ವಜನಿಕರಿಗೆ ಮುಕ್ತ ಪ್ರವೇಶ

ಫೆ.28 ರಿಂದ ಮಾ.2 ರವರೆಗೆ ನಡೆಯುವ ಎಲ್ಲ ಪರಿಷತ್ತು, ಸಂವಾದ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ.

Exit mobile version