ವಿಜಯಪುರ: ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾ ಗ್ರಾಮದಲ್ಲಿ ಮೂವರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಶಿವಮ್ಮ ರಾಥೋಡ್ (8), ಕಾರ್ತಿಕ್ ರಾಥೋಡ್ (7) ಮತ್ತು ಸ್ವಪ್ನಾ ರಾಥೋಡ್ (12) ಸಾವನ್ನಪ್ಪಿದ್ದಾರೆ ಎಂದು ಗುರುತಿಸಲಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, ಈ ಮಕ್ಕಳು ಕುರಿಗಳ ಜೊತೆ ಆಟವಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಘಟನೆ ಸಂಭವಿಸಿದೆ.
ಈ ಪ್ರಕರಣವು ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಪೊಸ್ಟ್ ಮಾರ್ಟಮ್ ಗಾಗಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.