• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಾಸಕ ಸ್ಥಾನ ಕಳೆದುಕೊಳ್ತಾರಾ ವಿನಯ್ ಕುಲಕರ್ಣಿ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 25, 2026 - 11:52 am
in ಕರ್ನಾಟಕ
0 0
0
Your paragraph text (97)

ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ದೊಡ್ಡ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಜೀವಾವಧಿ ಶಿಕ್ಷೆಯ ಅಮಾನತು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ, ಎರಡು ವಾರಗಳೊಳಗೆ ಶರಣಾಗುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಇದೀಗ ಅವರ ಶಾಸಕ ಸ್ಥಾನಕ್ಕೆ ಮತ್ತೆ ಕುತ್ತು ಎದುರಾಗುವ ಸಾಧ್ಯತೆ ಇದೆ. ಜನಪ್ರತಿನಿಧಿಗಳ ಕಾಯ್ದೆಯಡಿ ಅನರ್ಹತೆ ಜಾರಿಯಾಗುವ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದ್ದು, ವಿಧಾನಸಭೆಯಿಂದ ಹೊಸ ಅಧಿಸೂಚನೆ ಹೊರಬೀಳುವ ಸಾಧ್ಯತೆ ಕುರಿತು ಚರ್ಚೆ ಆರಂಭವಾಗಿದೆ.

ವಿನಯ್ ಕುಲಕರ್ಣಿ ಅವರಿಗೆ ಎದುರಾಗಿರುವ ಈ ರಾಜಕೀಯ ಸಂಕಷ್ಟಕ್ಕೆ ಮುಖ್ಯ ಕಾರಣ ಜನಪ್ರತಿನಿಧಿಗಳ ಕಾಯ್ದೆ 1951ರ ಸೆಕ್ಷನ್ 8. ಈ ಕಾಯ್ದೆಯ ಸೆಕ್ಷನ್ 8(3) ಪ್ರಕಾರ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ ಶಾಸಕ ಅಥವಾ ಸಂಸದ ಸ್ಥಾನಕ್ಕೆ ಅನರ್ಹರಾಗುತ್ತಾರೆ. ಶಿಕ್ಷೆಯ ದಿನಾಂಕದಿಂದ ಅನರ್ಹತೆ ಜಾರಿಯಾಗುತ್ತದೆ. ಬಿಡುಗಡೆಯಾದ ನಂತರವೂ ಆರು ವರ್ಷಗಳವರೆಗೆ ಅನರ್ಹತೆ ಮುಂದುವರಿಯುತ್ತದೆ. 

RelatedPosts

ಆನೆ ಸ್ಥಳಾಂತರ ವಿರೋಧಿಸಿ ಇಂದು ಮೂಡಿಗೆರೆ ಸಂಪೂರ್ಣ ಬಂದ್

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್; ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ

ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಬೆನ್ನಿಗೆ ನಿಂತ ನಟಿ ರಮ್ಯಾ

ADVERTISEMENT
ADVERTISEMENT

ಈ ಹಿಂದೆ ಶಾಸಕ ಸ್ಥಾನ ಕಳೆದುಕೊಂಡಿದ್ದ ವಿನಯ್

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್ 15ರಂದು ವಿನಯ್ ಕುಲಕರ್ಣಿ ಅವರನ್ನು ದೋಷಿ ಎಂದು ಘೋಷಿಸಿತ್ತು. ಏಪ್ರಿಲ್ 17ರಂದು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪಿನ ಬೆನ್ನಲ್ಲೇ ಜನಪ್ರತಿನಿಧಿಗಳ ಕಾಯ್ದೆಯ ಅನ್ವಯ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಅನರ್ಹತೆ ಎದುರಾಗಿತ್ತು.

ಇದರ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿಗಳು ಮೇ ತಿಂಗಳಲ್ಲಿ ಧಾರವಾಡ ಕ್ಷೇತ್ರದ ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅವರನ್ನು ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಿದ್ದರು. ಇದರಿಂದ ಧಾರವಾಡ ವಿಧಾನಸಭಾ ಕ್ಷೇತ್ರದ ಸ್ಥಾನ ತೆರವಾದಂತಾಗಿತ್ತು.

ಆದರೆ ವಿನಯ್ ಕುಲಕರ್ಣಿ ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಜುಲೈ 31ರಂದು ಹೈಕೋರ್ಟ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಅಪರಾಧ ನಿರ್ಣಯಕ್ಕೂ ತಡೆಯಾಜ್ಞೆ ನೀಡಿ ಜಾಮೀನು ಮಂಜೂರು ಮಾಡಿತ್ತು. ಇದರಿಂದ ಅವರ ಅನರ್ಹತೆಯ ಪರಿಣಾಮವೂ ಸ್ಥಗಿತಗೊಂಡು ಮತ್ತೆ ಶಾಸಕ ಸ್ಥಾನಕ್ಕೆ ಮರಳುವ ಅವಕಾಶ ಸಿಕ್ಕಿತ್ತು.

ಸುಪ್ರೀಂ ಆದೇಶದಿಂದ ಮತ್ತೆ ಅನರ್ಹತೆ ಭೀತಿ

ಹೈಕೋರ್ಟ್ ನೀಡಿದ್ದ ಪರಿಹಾರವನ್ನು ಪ್ರಶ್ನಿಸಿ ಸಿಬಿಐ ಹಾಗೂ ಕೊಲೆಯಾದ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಶ್ರೀ ಚಂದ್ರಶೇಖರ್ ಅವರ ಪೀಠ ಇದೀಗ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿ ವಿನಯ್ ಕುಲಕರ್ಣಿಗೆ ಜಾಮೀನು ನಿರಾಕರಿಸಿದೆ.

ಈ ಬೆಳವಣಿಗೆಯಿಂದ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರುವ ಪರಿಸ್ಥಿತಿ ಎದುರಾಗಿದೆ. ಅದರ ಜೊತೆಗೆ ಅವರ ಅಪರಾಧ ನಿರ್ಣಯಕ್ಕೆ ನೀಡಲಾಗಿದ್ದ ತಡೆಯಾಜ್ಞೆಯೂ ರದ್ದಾಗಿದ್ದರೆ, ಜನಪ್ರತಿನಿಧಿಗಳ ಕಾಯ್ದೆಯ ಸೆಕ್ಷನ್ 8ರ ಅಡಿಯಲ್ಲಿ ಅನರ್ಹತೆ ಮತ್ತೆ ಜಾರಿಯಾಗುವ ಸಾಧ್ಯತೆಯಿದೆ.

ವಿಧಾನಸಭೆಯಿಂದ ಮತ್ತೆ ಅಧಿಸೂಚನೆ ಹೊರಬೀಳುತ್ತಾ?

ಈ ಹಿಂದೆ ಅಪರಾಧ ನಿರ್ಣಯದ ಆಧಾರದ ಮೇಲೆ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಬಳಿಕ ಹೈಕೋರ್ಟ್‌ನ ತಡೆಯಾಜ್ಞೆಯಿಂದ ಅವರು ಮತ್ತೆ ಶಾಸಕ ಸ್ಥಾನಕ್ಕೆ ಮರಳಿದ್ದರು.

ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿರುವ ಹಿನ್ನೆಲೆ ವಿಧಾನಸಭೆ ಕಾರ್ಯದರ್ಶಿಗಳು ಮತ್ತೆ ಅನರ್ಹತೆ ಕುರಿತು ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಆದರೆ ಈ ಕುರಿತು ಅಧಿಕೃತ ಅಧಿಸೂಚನೆ ಹೊರಬರುವವರೆಗೆ ಅವರ ಶಾಸಕ ಸ್ಥಾನ ರದ್ದಾಗಿದೆ ಎಂದು ಹೇಳಲು ಸಾಧ್ಯವಿಲ್ಲ.

ವಿನಯ್ ಕುಲಕರ್ಣಿಗೆ ಮತ್ತೆ ಜೈಲು

  • ನವೆಂಬರ್ 5, 2020: ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಮೊದಲ ಬಾರಿಗೆ ಬಂಧಿಸಿತು.

  • ಆಗಸ್ಟ್ 11, 2021: ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತು, ಧಾರವಾಡ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧಿಸಿತು.

  • ಜೂನ್ 2025: ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಸುಪ್ರೀಂಕೋರ್ಟ್ ಜಾಮೀನನ್ನು ರದ್ದುಗೊಳಿಸಿತು.

  • ಫೆಬ್ರವರಿ 27, 2026: ಎಲ್ಲಾ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡ ಕಾರಣ ಸುಪ್ರೀಂಕೋರ್ಟ್ ಮತ್ತೆ ಜಾಮೀನು ನೀಡಿತು.

  • ಏಪ್ರಿಲ್ 17, 2026: ವಿಶೇಷ ನ್ಯಾಯಾಲಯ ಅಪರಾಧಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತು.

  • ಜುಲೈ 31, 2026: ಕರ್ನಾಟಕ ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿ ಜಾಮೀನು ನೀಡಿತು.

  • ಆಗಸ್ಟ್ 3, 2026: ವಿಧಾನಸಭೆ ಅನರ್ಹತೆಯನ್ನು ರದ್ದುಗೊಳಿಸಿ ಶಾಸಕ ಸ್ಥಾನವನ್ನು ಮರುಸ್ಥಾಪಿಸಿತು.

  • ನವೆಂಬರ್ 25, 2026: ಸುಪ್ರೀಂಕೋರ್ಟ್ ಜಾಮೀನನ್ನು ರದ್ದುಗೊಳಿಸಿ, ಎರಡು ವಾರಗಳಲ್ಲಿ ಶರಣಾಗುವಂತೆ ಆದೇಶಿಸಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (99)

ಜೆನ್ನಿಫರ್ ಬ್ಯಾರೆಟೊಗೆ ಒಲಿದ 2026ರ ವಿಶ್ವ ಸುಂದರಿ ಪಟ್ಟ

by ಶಾಲಿನಿ ಕೆ. ಡಿ
November 25, 2026 - 12:10 pm
0

Your paragraph text (97)

ಶಾಸಕ ಸ್ಥಾನ ಕಳೆದುಕೊಳ್ತಾರಾ ವಿನಯ್ ಕುಲಕರ್ಣಿ?

by ಶಾಲಿನಿ ಕೆ. ಡಿ
November 25, 2026 - 11:52 am
0

Untitled Design 2026 11 25T112346.707

ಆನೆ ಸ್ಥಳಾಂತರ ವಿರೋಧಿಸಿ ಇಂದು ಮೂಡಿಗೆರೆ ಸಂಪೂರ್ಣ ಬಂದ್

by ಶಾಲಿನಿ ಕೆ. ಡಿ
November 25, 2026 - 11:24 am
0

Untitled Design 2026 11 25T110032.526

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್; ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

by ಶಾಲಿನಿ ಕೆ. ಡಿ
November 25, 2026 - 11:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 25T112346.707
    ಆನೆ ಸ್ಥಳಾಂತರ ವಿರೋಧಿಸಿ ಇಂದು ಮೂಡಿಗೆರೆ ಸಂಪೂರ್ಣ ಬಂದ್
    November 25, 2026 | 0
  • Untitled Design 2026 11 25T110032.526
    ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್; ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    November 25, 2026 | 0
  • Untitled Design 2026 11 25T103525.451
    ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ
    November 25, 2026 | 0
  • Untitled Design 2026 11 24T184842.951
    ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಬೆನ್ನಿಗೆ ನಿಂತ ನಟಿ ರಮ್ಯಾ
    November 24, 2026 | 0
  • Untitled design 2026 11 24T164543.055
    ಹಾಸನ ಡಿಸಿ ಲಂಚದ ವಾಟ್ಸಪ್ ಚಾಟ್ ಕೇಸ್‌: ಹೆಚ್‌.ಡಿ ಕುಮಾರಸ್ವಾಮಿಗೆ ಸೈಬರ್ ಪೊಲೀಸರಿಂದ ನೋಟಿಸ್!
    November 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version