ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ನಂದಿನಿ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆಬ್ರವರಿ 23ರ ರಾತ್ರಿ ಸುಮಾರು 9:30ಗಂಟೆಗೆ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಹಿಳೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮೃತದೇಹವನ್ನು ಕುಟುಂಬಸ್ಥರು ಪತ್ತೆಹಚ್ಚಿದ್ದಾರೆ. ಈ ಘಟನೆಯ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಕುಟುಂಬಸ್ಥರು ಮನೆಗೆ ಮರಳಿ ನೋಡಿದಾಗ, ನಂದಿನಿಯ ಮೃತದೇಹವನ್ನು ನೇಣು ಬಿಗಿದ ಸ್ಥಿತಿಯಲ್ಲಿತ್ತು. ಕುಟುಂಬಸ್ಥರು ಪೊಲೀಸರಿಗೆ ತಿಳಿಸುವ ಮೊದಲೇ ಅವರು ದೇಹವನ್ನು ಕೆಳಗಿಳಿಸಿದ್ದಾರೆ.
ನಂದಿನಿ ಬಿ.ಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. 8 ವರ್ಷಗಳ ಹಿಂದೆ ಸೂರ್ಯನನ್ನು ವಿವಾಹವಾದ ಅವರಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಮಕ್ಕಳಿದ್ದರು. ಇತ್ತೀಚೆಗೆ ಒಬ್ಬ ವ್ಯಕ್ತಿ ನಂದಿನಿಗೆ ಕರೆಗಳ ಮೂಲಕ ಕಿರುಕುಳ ನೀಡುತ್ತಿದ್ದನು. ಈ ಕಿರುಕುಳದಿಂದಾಗಿ ಪತಿ-ಪತ್ನಿಯರ ನಡುವೆ ವಾಗ್ವಾದಗಳು ಹೆಚ್ಚಾಗಿದ್ದವು.ಇದರಿಂದ ಮನನೊಂದ ನಂದಿನಿ ತೀವ್ರ ಹತಾಶೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅನುಮಾನ ವ್ಯಕ್ತವಾಗಿದೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕಿರುಕುಳದ ಆರೋಪದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.