ಯಾದಗಿರಿ: ಪರಿಸರ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ‘ಬಿಗ್ ಬಾಸ್’ ಮನೆಗೆ ಬೀಗ ಹಾಕಿದ್ದಕ್ಕೆ ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ವಿರುದ್ಧ ಯಾದಗಿರಿಯ ಬಿಗ್‌ಬಾಸ್ ಅಭಿಮಾನಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಗ್ ಬಾಸ್ ಉದ್ದೇಶಪೂರ್ವಕವಾಗಿ ಬಂದ್ ಮಾಡಿರುವುದು ಸರಿಯಲ್ಲ ಎಂದು ಸಾಮಾಜಿಕ ಕಾರ್ಯಕರ್ತ ವಿರೇಶ ಸಜ್ಜನ ಹೇಳಿದ್ದಾರೆ.
ಯಾದಗಿರಿ ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕೆ ಪ್ರದೇಶದಲ್ಲಿನ ಕೈಗಾರಿಕೆಗಳು ನಿಯಮ ಉಲ್ಲಂಘನೆ ಮಾಡಿದ್ದು, ಅಪಾಯಕಾರಿ ಫ್ಯಾಕ್ಟರಿಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿದ್ದಾರೆ.
ಅಪಾಯಕಾರಿ ಫ್ಯಾಕ್ಟರಿಗಳಿಂದ ಜನರ ಮೇಲೆ ದುಷ್ಪರಿಣಾಮ ಬಿರುತ್ತಿದೆ, ಪರಿಸರ ಹದಗೆಟ್ಟಿದೆ. ಈಗಾಗಲೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂಘನೆ ಮಾಡಿದ 27 ಫ್ಯಾಕ್ಟರಿಗಳಿಗೆ ನೊಟೋಸ್ ನೀಡಿದೆ. ಷರತ್ತು ಉಲ್ಲಂಘನೆ ಮಾಡಿದ ಕಂಪನಿಗಳು ಬಂದ್ ಮಾಡಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರ ಮೇಲೆ ದುಷ್ಪರಿಣಾಮ ಬಿರುವ ಕೈಗಾರಿಕೆಗಳನ್ನು ಬಂದ್ ಮಾಡುವಂತೆ ವಿರೇಶ್ ಸಜ್ಜನ ಆಗ್ರಹಿಸಿದ್ದಾರೆ.